ಗಣಿ ಹಗರಣ: ಧರಂ, ಎಚ್‌ಡಿಕೆ ವಿರುದ್ಧ ತನಿಖೆಗೆ ಹಸಿರು ನಿಶಾನೆ

Wednesday, March 5th, 2014
S.M.-Krishna

ನವದೆಹಲಿ: ಅಕ್ರಮ ಗಣಿಗಾರಿಕೆಗೆ ಅನುಮತಿ ನೀಡಿರುವ ಆರೋಪ ಕುರಿತು ಲೋಕಾಯುಕ್ತ ತನಿಖೆ ನಡೆಸಲು ಕರ್ನಾಟಕ ಹೈಕೋರ್ಟ್ ನೀಡಿರುವ ಆದೇಶಕ್ಕೆ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಪ್ರಕರಣಕ್ಕೆ ಸೀಮಿತವಾಗಿ ತಡೆಯಾಜ್ಞೆ ನೀಡಲಾಗಿದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಸ್ಪಷ್ಟಪಡಿಸಿದೆ. ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ, ಧರಂಸಿಂಗ್ ಅವರ ವಿರುದ್ಧ ಇರುವ ಆರೋಪ ಕುರಿತು ಲೋಕಾಯುಕ್ತ ಪೊಲೀಸರು ತಮ್ಮ ತನಿಖೆ ಮುಂದುವರಿಸಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಈ ಪ್ರಕರಣದಲ್ಲಿ ಹೆಸರಿಸಲಾಗಿರುವ ಐವರು ಐಎಎಸ್ ಅಧಿಕಾರಿಗಳ ವಿರುದ್ಧವೂ ತನಿಖೆ ಮುಂದುವರೆಸುವಂತೆ ಸುಪ್ರೀಂ […]

ಕುಡಿಯುವ ನೀರಿಗೆ ಶಾಶ್ವತ ಪರಿಹಾರ : ಹೆಚ್. ಡಿ ಕುಮಾರಸ್ವಾಮಿ

Saturday, January 5th, 2013
HD Kumaraswamy

ಮಂಗಳೂರು : ಅಸೈಗೋಳಿಯಲ್ಲಿ ನಡೆದ ಮಂಗಳೂರು ವಿಧಾನಸಭಾ ಕ್ಷೇತ್ರದ ಜಾತ್ಯತೀತ ಜನತಾದಳ ಪಕ್ಷ ದ ಕಾರ್ಯಕರ್ತರ ಬೃಹತ್ ಸಮಾವೇಶವನ್ನು ಶುಕ್ರವಾರ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಮುಂದಿನ ಚುನಾವಣೆಗೆ ಜೆಡಿಎಸ್ ಪಕ್ಷ ಸಂಪೂರ್ಣ ಸಜ್ಜಾಗಿದ್ದು ಯಾವುದೇ ಸಮಯದಲ್ಲಿ ಚುನಾವಣೆ ಬಂದರೂ ಎದುರಿಸಿ ಅಧಿಕಾರಕ್ಕೆ ಬರುತ್ತದೆ, ಮುಂದಿನ ಸಂಕ್ರಾಂತಿ ವೇಳೆಗೆ ಪಕ್ಷವು ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಿದೆ ಎಂದರು. ಅಲ್ಲದೆ ಬಿಜೆಪಿ ನಾಯಕರ ಒಳಜಗಳದಿಂದಾಗಿ ಪಕ್ಷ ನಿಷ್ಕ್ರಿಯ ವಾಗಿದ್ದು ಸಾಧ್ಯವಿದ್ದರೆ ಬಿಜೆಪಿ ಸರಕಾರವನ್ನು ತ್ಯಜಿಸಿ […]