ನಳಿನಿ ಸೇರಿದಂತೆ 4 ರಾಜೀವ್ ಹಂತಕರ ಬಿಡುಗಡೆಗೆ ಸುಪ್ರೀಂ ತಡೆ

Thursday, February 27th, 2014
Rajeev-Gandhi

ನವದೆಹಲಿ: ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರಿಗೆ ಭಾರಿ ಹಿನ್ನಡೆಯಾಗಿದೆ. ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ನಳಿನಿ ಸೇರಿದಂತೆ ನಾಲ್ವರು ಅಪರಾಧಿಗಳ ಬಿಡುಗಡೆಗೆ ಸುಪ್ರೀಂ ಕೋರ್ಟ್ ಗುರುವಾರ ತಡೆಯಾಜ್ಞೆ ನೀಡಿದೆ. ಈ ಮುಂಚೆ ಪ್ರಕರಣದ ಮೂವರು ಅಪರಾಧಿಗಳ ಬಿಡುಗಡೆಗೆ ತಡೆಯಾಜ್ಞೆ ನೀಡಿದ್ದ ಸುಪ್ರೀಂ ಕೋರ್ಟ್, ಇಂದು ನಳಿನಿ, ರಾಬರ್ಟ್, ಜಯಕುಮಾರ್ ಹಾಗೂ ರವಿಚಂದ್ರನ್   ಬಿಡುಗಡೆಗೂ ತಡೆ ನೀಡಿದೆ. ಪ್ರಕರಣದ ಏಳು ಹಂತಕರ ಬಿಡುಗಡೆ ತಮಿಳುನಾಡು ಸರ್ಕಾರ ನಿರ್ಧರಿಸಿತ್ತು. ತಮಿಳುನಾಡು ಸರ್ಕಾರದ ನಿರ್ಧಾರ […]

ರಾಜೀವ್ ಹಂತಕರ ಬಿಡುಗಡೆ ಸದ್ಯಕ್ಕಿಲ್ಲ

Friday, February 21st, 2014
P.-Sathasivam

ನವದೆಹಲಿ/ಚೆನ್ನೈ: ಸದ್ಯಕ್ಕೆ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಹಂತಕರಿಗೆ ಬಿಡುಗಡೆ ಭಾಗ್ಯ ಇಲ್ಲ… ತಮಿಳುನಾಡು ಸರ್ಕಾರದ ನಿರ್ಧಾರ ಮತ್ತು ರಾಜೀವ್ ಹಂತಕರ ಗಲ್ಲು ಶಿಕ್ಷೆಯನ್ನು ಜೀವಾವಧಿಗೆ ಇಳಿಕೆ ಮಾಡಿದ ಸುಪ್ರೀಂಕೋರ್ಟ್ ತೀರ್ಪಿನ ವಿರುದ್ಧ ಕೇಂದ್ರ ಸರ್ಕಾರ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿ ಕುರಿತಂತೆ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ತಮಿಳುನಾಡು ಸರ್ಕಾರದ ನಿರ್ಧಾರಕ್ಕೆ ತಡೆ ನೀಡಿದೆ. ‘ಕೈದಿಗಳ ಬಿಡುಗಡೆ ಸಂಬಂಧ ತಮಿಳುನಾಡು ಸರ್ಕಾರ ಸೂಕ್ತ ವಿಧಿ ವಿಧಾನಗಳನ್ನು ಅನುಸರಿಸಿಲ್ಲ. ಹೀಗಾಗಿ ಕೋರ್ಟ್ ಜಯಲಲಿತಾ ಸರ್ಕಾರದ ನಿರ್ಧಾರಕ್ಕೆ ತಡೆ ನೀಡಿದೆ’ […]

‘ರಾಜೀವ್’ ಹಂತಕರ ಬಿಡುಗಡೆಗೆ ಪ್ರಧಾನಿ ಆಕ್ಷೇಪ

Thursday, February 20th, 2014
Manmohan-Singh

ನವದೆಹಲಿ: ಮಾಜಿ ಪ್ರಧಾನಿ ದಿ.ರಾಜೀವ್ ಗಾಂಧಿ ಹಂತಕರನ್ನು ಮೂರು ದಿನಗಳೊಳಗೆ ಬಿಡುಗಡೆ ಮಾಡಲು ಮುಂದಾಗಿರುವ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ನಿರ್ಧಾರಕ್ಕೆ ಪ್ರಧಾನಿ ಮನಮೋಹನ್ ಸಿಂಗ್ ಅವರು ಗುರುವಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ರಾಜೀವ್ ಗಾಂಧಿ ಹಂತಕರನ್ನು ಬಿಡುಗಡೆ ಮಾಡದಂತೆ ತಮಿಳುನಾಡು ಸಿಎಂಗೆ ಒತ್ತಾಯಿಸಿದ್ದಾರೆ. ಅಲ್ಲದೆ ತಾವು ತೆಗೆದುಕೊಂಡಿರುವ ನಿರ್ಧಾರವನ್ನು ಹಿಂಪಡೆಯುವಂತೆ ಜಯಲಲಿತಾಗೆ ಪ್ರಧಾನಿ ಆಗ್ರಹಿಸಿದ್ದಾರೆ. ಮಾಜಿ ಪ್ರಧಾನಿ ಅವರನ್ನು ಹತ್ಯೆ ಮಾಡಿರುವುದು ಸಣ್ಣ ವಿಷಯವಲ್ಲ. […]