ಪದವೀಧರ ಕ್ಷೇತ್ರದ ಚುನಾವಣೆ ನಡೆಸುವಾಗಲೂ ಹೊಸದಾಗಿ ಮತದಾರರ ನೋಂದಣಿ ನಡೆಸಬೇಕು :ಭೋಜೇಗೌಡ

Friday, October 13th, 2017
JDS

ಮಂಗಳೂರು: ಜೆಡಿಎಸ್ ರಾಜ್ಯ ವಕ್ತಾರ ಭೋಜೇಗೌಡ ಮುಂದಿನ ಜೂನ್‌ನಲ್ಲಿ ನಡೆಯಲಿರುವ ನೈಋತ್ಯ ಶಿಕ್ಷಕರ ಹಾಗೂ ಪದವೀಧರರ ಕ್ಷೇತ್ರದ ಚುನಾವಣೆಗೆ ಶಿಕ್ಷಕ, ಪದವೀಧರ ಮತದಾರರ ನೋಂದಣಿಗೆ ಚುನಾವಣಾ ಆಯೋಗ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು  ಆಗ್ರಹಿಸಿದ್ದಾರೆ. ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಪ್ರೀಂ ಕೋರ್ಟ್‌ ಆದೇಶದ ಪ್ರಕಾರ, ಪ್ರತಿ ಬಾರಿ ಶಿಕ್ಷಕರ ಪದವೀಧರ ಕ್ಷೇತ್ರದ ಚುನಾವಣೆ ನಡೆಸುವಾಗಲೂ ಹೊಸದಾಗಿ ಮತದಾರರ ನೋಂದಣಿ ನಡೆಸಬೇಕು. ಕಳೆದ ಅವಧಿಯಲ್ಲಿ ತಾನು ಸ್ಪರ್ಧಿಸಿದಾಗ ಒಂದೂವರೆ ಲಕ್ಷದಷ್ಟು ಶಿಕ್ಷಕ ಪದವೀಧರರ ಪೈಕಿ ಮತದಾರರಾಗಿ […]

ಧನಂಜಯ್ ಕುಮಾರ್ ಜೆಡಿಎಸ್‍ಗೆ

Thursday, March 13th, 2014
Dhananjay-Kumar

ಬೆಂಗಳೂರು: ಬಿಜೆಪಿಯಲ್ಲಿ ಸೂಕ್ತ ಸ್ಥಾನಮಾನ ದೊರೆಯದೆ ಅತೃಪ್ತಗೊಂ ಡಿದ್ದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಪರಮಾಪ್ತ ಧನಂಜಯ್ ಕುಮಾರ್ ಜೆಡಿಎಸ್ ಸೇರಿದ್ದಾರೆ. ಮಂಗಳೂರು ಕ್ಷೇತ್ರದಿಂದ ಅವರು ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ. ಬುಧವಾರ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ್ದ ಧನಂಜಯ್ ಕುಮಾರ್ ಪಕ್ಷ ಸೇರ್ಪಡೆ ಮತ್ತು ಚುನಾವಣೆಗೆ ಸ್ಪರ್ಧಿಸುವ ಕುರಿತು ಚರ್ಚೆ ನಡೆಸಿದರು. ದೇವೇಗೌಡರು ಕುಮಾರ್ ಅವರನ್ನು ಪಕ್ಷಕ್ಕೆ ಸ್ವಾಗತಿಸಿದ್ದು, ಮಂಗಳೂರು ಕ್ಷೇತ್ರದಿಂದ ಸ್ಪರ್ಧಿಸಲು ಅನುಮತಿ ನೀಡಿದ್ದಾರೆ.

ಕಾಂಗ್ರೆಸ್- ಜೆಡಿಎಸ್ ಕಾರ್ಯಕರ್ತರ ಮಾರಾಮಾರಿ

Monday, February 10th, 2014
Congress-JDS

ಮೂಡಿಗೆರೆ: ಜೆಡಿಎಸ್ ಕಾರ್ಯಕರ್ತರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ  ಘೋಷಣೆ ಕೂಗಿದ ಹಿನ್ನಲೆಯಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಸೋಮವಾರ ಬೆಳಿಗ್ಗೆ ಘರ್ಷಣೆ ನಡೆದಿದೆ. ಭೂಮಿ ಒತ್ತುವರಿ ತೆರವು ವಿರೋಧಿಸಿ ಮೂಡಿಗೆರಿ ತಾಲೂಕು ಬಲಿಗೆ ಎಂಬ ಗ್ರಾಮದಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಕಾರ್ಯಕರ್ತರು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಸಿಎಂ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿದ ಹಿನ್ನಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದ್ದರು. ಆದರೆ, ಜೆಡಿಎಸ್ ಕಾರ್ಯಕರ್ತರು ತಮ್ಮ ಘೋಷಣೆ ಮುಂದುವರೆಸಿದ […]

ರಸ್ತೆ ಅವ್ಯವಸ್ಥೆ ಸರಿಪಡಿಸಲು ಒತ್ತಾಯಿಸಿ ಸಾರ್ವಜನಿಕರಿಂದ ಪ್ರತಿಭಟನೆ

Tuesday, February 19th, 2013
Kuppe Padavu protest

ಎಡಪದವು : ಇಲ್ಲಿನ ಕುಪ್ಪೆಪದವು ಗ್ರಾಮದ ಕಾಡಕೇರಿ ಬಳಿಯ ಬೋಳಿಯಕ್ಕೆ ಹೋಗುವ ಸುಮಾರು 2.5 ಕಿ.ಮೀ. ರಸ್ತೆ ಸಂಪೂರ್ಣ ಹದಗೆಟ್ಟಿದ್ದು ಆ ರಸ್ತೆಯಲ್ಲಿ ತೆರಳಲು ಸಾರ್ವಜನಿಕರು ಹಾಗೂ  ವಾಹನಗಳು ಬಹಳಷ್ಟು ಕಷ್ಟ ಪಡುತ್ತಿರುವುದರಿಂದ ಈ ರಸ್ತೆಯನ್ನು ಈ ಕೂಡಲೆ ದುರಸ್ತಿ ಮಾಡಬೇಕೆಂದು ಒತ್ತಾಯಿಸಿ ಕುಪ್ಪೆಪದವು ಗ್ರಾಮಸ್ಥರು ಜೆಡಿಎಸ್ ಪಕ್ಷದ ನೇತೃತ್ವದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ  ನಡೆಸಿದರು. ಈ ಸಂದರ್ಭದಲ್ಲಿ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಹಾಗೂ ಮಾಜಿ ಸಚಿವ ಬಿ.ನಾಗರಾಜ ಶೆಟ್ಟಿ ಪ್ರತಿಭಟನಾನಿರತರನ್ನು ಉದ್ದೇಶಿಸಿ ಮಾತನಾಡುತ್ತಾ, ಕರ್ನಾಟಕ […]

ಕರಾವಳಿಯ ಜೆಡಿಎಸ್ ನಲ್ಲಿ `ಸದಾ’ ಹೊಸ ಸಂಚಲನ

Friday, December 28th, 2012
Sadananda Shetty

ಮಂಗಳೂರು : ರಾಜ್ಯದ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ನಾನಾ ಪಕ್ಷಗಳ ರಾಜಕೀಯ ಕಸರತ್ತು ಆರಂಭಗೊಂಡಿದೆ. ಅದರಲ್ಲೂ ಜೆಡಿಎಸ್ ಈ ನೆಲೆಯಲ್ಲಿ ಒಂದು ಹೆಜ್ಜೆ ಮುಂದಡಿ ಇಟ್ಟಿದೆ. ಮುಂಬರುವ ಚುನಾವಣೆಯಲ್ಲಿ ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಉದ್ಯಮಿ ಎ. ಸದಾನಂದ ಶೆಟ್ಟಿ ಅವರನ್ನು ಘೋಷಿಸಿದೆ. ಈ ಮೂಲಕ ರಾಜ್ಯದಲ್ಲೇ ಜೆಡಿಎಸ್ ತನ್ನ ಮೊದಲ ಅಭ್ಯರ್ಥಿ ಘೋಷಣೆಯಾದಂತಾಗಿದೆ. ಅದು ಕೂಡ ಜೆಡಿಎಸ್ ರಾಜ್ಯಾಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಈ ಅಂತಿಮ ನಿರ್ಧಾರವನ್ನು ವನ್ನು […]