ಯೋಜನೆಗಳ ಪ್ರಗತಿ ಲೋಪಕ್ಕೆ ಅಧಿಕಾರಿಗಳೇ ಹೊಣೆಗಾರರು ; ಕೆಡಿಪಿ ಸಭೆಯಲ್ಲಿ ರಮಾನಾಥ ರೈ
Friday, July 12th, 2013ಮಂಗಳೂರು: ದ.ಕ. ಜಿ. ಪಂ. ಸಭಾಂಗಣದಲ್ಲಿ ಜಿಲ್ಲಾ ತ್ತೈಮಾಸಿಕ ಕೆಡಿಪಿ ಸಭೆ ಗುರುವಾರ ಸಚಿವ ರಮಾನಾಥ ರೈ ಅವರ ಅಧ್ಯಕ್ಷತೆಯಲ್ಲಿ ಜರಗಿತು. ಬಸವ ವಸತಿ ಯೋಜನೆ, ಅಂಬೇಡ್ಕರ್ ವಸತಿ ಯೋಜನೆ ಸೇರಿದಂತೆ ವಿವಿಧ ಯೋಜನೆಗಳಲ್ಲಿ ಪ್ರಗತಿ ತೀರಾ ಕಡಿಮೆಯಾಗಿದೆ. ಅಧಿಕಾರಿಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಿ ವಸತಿಗಳು ಬಡವರಿಗೆ ಸಕಾಲದಲ್ಲಿ ಲಭ್ಯವಾಗುವಂತೆ ನೋಡಿಕೊಳ್ಳಬೇಕು. ಇದರಲ್ಲಾಗುವ ಲೋಪಕ್ಕೆ ಅಧಿಕಾರಿಗಳೇ ಹೊಣೆಗಾರರು ಎಂದು ರಾಜ್ಯ ಅರಣ್ಯ, ಪರಿಸರ ಖಾತೆ ಮತ್ತು ದ. ಕ.ಜಿಲ್ಲಾ ಉಸ್ತುವಾರಿ ಸಚಿವಬಿ. ರಮಾನಾಥ ರೈ ಎಚ್ಚರಿಸಿದ್ದಾರೆ. ರಾಜೀವ ಗಾಂಧಿ […]