ಸಾಮಾಜಿಕ ಜಾಲತಾಣದಲ್ಲಿ ಕೊರಗಜ್ಜ ದೈವಕ್ಕೆ ಅವಮಾನಿಸಿದ ವ್ಯಕ್ತಿ ಸನ್ನಿಧಾನದಲ್ಲಿ ಕ್ಷಮೆ ಯಾಚನೆ

Tuesday, November 7th, 2017
koragajja

ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಕೊರಗಜ್ಜ ದೈವಗೆ ಅವಮಾನಿಸಿದ ವ್ಯಕ್ತಿಯು, ತುಳುನಾಡಿನ ಆರಾಧ್ಯ ಕೊರಗಜ್ಜ ದೈವ ಸನ್ನಿಧಾನಕ್ಕೆ ತೆರಳಿ, ಹರಕೆ ಒಪ್ಪಿಸಿ, ಕ್ಷಮೆ ಯಾಚಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಶಿರಸಿ ಮೂಲದ ಮನೋಜ್ ಪಂಡಿತ್ ಎಂಬಾತ ಕೆಲ ದಿನಗಳ ಹಿಂದೆ ಫೇಸ್ ಬುಕ್ ನಲ್ಲಿ ತುಳುನಾಡಿನ ಕಾರಣಿಕ ದೈವ ಎಂದೇ ನಂಬಲಾಗಿರುವ ಸ್ವಾಮಿ ಕೊರಗಜ್ಜ ಗೆ ಕೀಳು ಭಾಷೆ ಬಳಸಿ, ಬರಹ ಪೋಸ್ಟ್ ಮಾಡಿದ್ದ. ಈ ಕುರಿತು ಪೊಲೀಸ್ ಠಾಣೆಯಲ್ಲಿ ಮನೋಜ್ ಪಂಡಿತ್ ವಿರುದ್ಧ ಪ್ರಕರಣ ಕೂಡ ದಾಖಲಾಗಿತ್ತು. […]

ಕುಲದೈವ ಕೊರಗಜ್ಜ ದೈವದ ಅವಹೇಳನ, ಕೊರಗ ಸಮಾಜದಿಂದ ಪ್ರತಿಭಟನೆ

Monday, October 30th, 2017
koraga

ಮಂಗಳೂರು: ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟದಿಂದ  ಸಾಮಾಜಿಕ ಜಾಲತಾಣದ ಮೂಲಕ ಕೊರಗ ಸಮುದಾಯದ ಕುಲದೈವ, ಸಾಂಸ್ಕೃತಿಕ ಪುರುಷನಾಗಿ ಆರಾಧಿಸಲ್ಪಡುವ ಕೊರಗಜ್ಜನನ್ನು ಅವಹೇಳನ ಮಾಡಿರುವ ವ್ಯಕ್ತಿಯನ್ನು ಬಂಧಿಸಬೇಕೆಂದು ಆಗ್ರಹಿಸಿ ಇಂದು ಪ್ರತಿಭಟನೆ ನಡೆಯಿತು. ಒಕ್ಕೂಟದ ಅಧ್ಯಕ್ಷ ಎಂ. ಸುಂದರ, ದ.ಕ. ಜಿಲ್ಲಾಧಿಕಾರಿ ಕಚೇರಿ ಎದುರು ನಡೆದ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿ, ಕರಾವಳಿ ಕರ್ನಾಟಕದ ಮೂಲ ಜನಾಂಗವಾದ ಕೊರಗ ಸಮಾಜ ಹಾಗೂ ಸಮಾಜದ ಕೊರಗಜ್ಜ ದೈವದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನ ಮಾಡುವ ಕಾರ್ಯ ನಿರಂತರವಾಗಿ ನಡೆಯುತ್ತಿರುುದು ಬೇಸರದ ಸಂಗತಿ ಎಂದರು. […]