ಲಕ್ಷದ್ವೀಪ ಆಡಳಿತ ಕಚೇರಿ ಕಟ್ಟಡ ನಿರ್ಮಾಣಕ್ಕೆ ಸಿಆರ್‌ಝಡ್ ಎನ್‌ಓಸಿ
Monday, June 29th, 2015ಮಂಗಳೂರು : ಲಕ್ಷದ್ವೀಪ ಆಡಳಿತವು ಮಂಗಳೂರು ಬಂದರು ಪ್ರದೇಶದಲ್ಲಿ ಕಚೇರಿ , ವಸತಿ ಹಾಗೂ ಉಗ್ರಾಣ ಕಟ್ಟಡಗಳ ನಿರ್ಮಾಣಕ್ಕೆ ನಿರಾಕ್ಷೇಪಣ ಪತ್ರ ನೀಡಲು ಜಿಲ್ಲಾ ಕರಾವಳಿ ವಲಯ ನಿರ್ವಹಣಾ ಸಮಿತಿ(ಸಿಆರ್‌ಝಡ್) ಸಭೆಯಲ್ಲಿ ಇಂದು ನಿರ್ಧರಿಸಲಾಯಿತು. ಸೋಮವಾರ ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಿತಿಯ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಲಾಯಿತು. ಲಕ್ಷದ್ವೀಪ ಆಡಳಿತವು ಮಂಗಳೂರು ಹಳೇ ಬಂದರು ಪ್ರದೇಶದಲ್ಲಿ ತನ್ನದೇ ಜಮೀನು ಹೊಂದಿದೆ. ಕರಾವಳಿ ವಲಯ ಅಧಿಸೂಚನೆಯಂತೆ ಈ ಸ್ಥಳವು ವಲಯದಿಂದ ಹೊರಗಿದ್ದು, ಸಿಆರ್‌ಝಡ್ 2ನೇ […]