ಬಂಟ್ವಾಳ : ಆಹಾರವನ್ನು ಹುಡುಕಿ ಬಂದ ಚಿರತೆ ಆಯತಪ್ಪಿ ಬಾವಿಯೊಳಗೆ ಬಿತ್ತು

Wednesday, March 18th, 2015
Chita

ಬಂಟ್ವಾಳ : ಆಹಾರವನ್ನು ಹುಡುಕಿ ಬಂದ ಚಿರತೆ ಆಯತಪ್ಪಿ ಬಾವಿಯೊಳಗೆ ಬಿದ್ದ ಘಟನೆ ಬಂಟ್ವಾಳದ ವಳಲೂರು ಎಂಬಲ್ಲಿ ನಡೆದಿದೆ. ಅರಣ್ಯ ಇಲಾಖೆ ಸಿಬ್ಬಂದಿ ಚಿರತೆಯನ್ನು ರಕ್ಷಿಸಿ ಪಿಲಿಕುಳ ವನ್ಯಧಾಮ ಕೇಂದ್ರಕ್ಕೆ ರವಾನಿಸಿದ್ದಾರೆ. ಮಂಗಳವಾರ ರಾತ್ರಿ ಕೋಳಿ ತಿನ್ನಲು ಬಂದ ಚಿರತೆ ವಳವೂರಿನ ನಿವಾಸಿ ಲಿಂಗಪ್ಪ ಪೂಜಾರಿ ಅವರ ಮನೆ ಸಮೀಪದ ಬಾವಿಗೆ ಬಿದ್ದಿತ್ತು. ಬುಧವಾರ ಬೆಳಗ್ಗೆ ಚಿರತೆಯನ್ನು ನೋಡಿದ ಸ್ಥಳೀಯರು ಅರಣ್ಯ ಇಲಾಖೆ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದರು. ಬಾವಿಗೆ ಬಿದ್ದಿದ್ದ ಚಿರತೆ ಪೈಪನ್ನು […]

ಕಾಡಿನಿಂದ ನಾಡಿಗೆ ಬಂದು ದನ, ಕರುಗಳನ್ನು ತಿನ್ನುತ್ತಿದ್ದ ಚಿರತೆ ಅರಣ್ಯ ಇಲಾಖೆಯ ಬೋನಿಗೆ

Thursday, July 11th, 2013
leopard

ಬಂಟ್ವಾಳ: ಚೆನ್ನೈತ್ತೋಡಿ ಗ್ರಾಮದ ಅಂಗಡಿ ಪಲ್ಕೆ ಕುಲಾಲು ಎಂಬಲ್ಲಿ ಕಾಡಿನಿಂದ ನಾಡಿಗೆ ಬಂದು ದನ, ಕರುಗಳನ್ನು ತಿನ್ನುತ್ತಿದ್ದ ಚಿರತೆಯೊಂದು ಅರಣ್ಯ ಇಲಾಖೆಯ ಬೋನಿನಲ್ಲಿ ಸಿಕ್ಕಿ ಬಿದ್ದ ಘಟನೆ ಗುರುವಾರ ಮುಂಜಾನೆ ನಡೆದಿದೆ. ಮಾಧವ ಎಂಬವರ ಜಮೀನಿಗೆ ದಾಳಿ ಮಾಡುತ್ತಿದ್ದ ಈ ಚಿರತೆ ದನ, ಕರುಗಳನ್ನು ತಿಂದಿತ್ತು. ಇದರಿಂದ ಬೇಸತ್ತ ಮಾಧವ ಅವರು  ಅರಣ್ಯ ಇಲಾಖೆಯ ನೆರವಿನಲ್ಲಿ ಚಿರತೆಗೆ ಬೋನು ಇರಿಸಿದ್ದು, ನಿರೀಕ್ಷೆಯಂತೆ ನಾಯಿಯನ್ನು ತಿನ್ನಲು ಬಂದ ಚಿರತೆ ಬೋನಿನಲ್ಲಿ ಸಿಕ್ಕಿ ಬಿದ್ದಿದೆ. ಚಿರತೆ ಬೋನಿಗೆ ಸಿಕ್ಕಿಬಿದ್ದ ಸುದ್ದಿ ತಿಳಿದು […]