ಲೋಕಾಯುಕ್ತದಿಂದ ಸಾರ್ವಜನಿಕ ಸಭೆ: ನ್ಯಾ. ವಿಶ್ವನಾಥ ಶೆಟ್ಟಿ

Monday, February 6th, 2017
lokayukta

ಮ0ಗಳೂರು : ಸರಕಾರದ ಸೇವೆಗಳಲ್ಲಿ ವಿಳಂಭ ಸೇರಿದಂತೆ ನಾಗರೀಕರಿಗೆ ಪಾರದರ್ಶಕವಾಗಿ ಸೌಲಭ್ಯಗಳು ದೊರಕುವ ನಿಟ್ಟಿನಲ್ಲಿ ಸಾರ್ವಜನಿಕರ ಅಹವಾಲು ಮತ್ತು ದೂರುಗಳನ್ನು ಆಲಿಸಲು ಲೋಕಾಯುಕ್ತ ಸಂಸ್ಥೆಯಿಂದ ಸಾರ್ವಜನಿಕ ಸಭೆಗಳನ್ನು ಏರ್ಪಡಿಸಲಾಗುವುದು ಎಂದು ಲೋಕಾಯುಕ್ತ ನ್ಯಾಯಮೂರ್ತಿ ಪಿ. ವಿಶ್ವನಾಥ ಶೆಟ್ಟಿ ತಿಳಿಸಿದ್ದಾರೆ. ಅವರು ಸೋಮವಾರ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು. ಆಡಳಿತದಲ್ಲಿ ಪಾರದರ್ಶಕತೆ ಅತಿ ಪ್ರಾಮುಖ್ಯವಾಗಿದೆ. ಸರಕಾರಿ ಯೋಜನೆಗಳು ನಾಗರೀಕರಿಗೆ ವೇಗವಾಗಿ ತಲುಪುವುದಿಲ್ಲ ಎಂಬ ದೂರು ಸಾರ್ವತ್ರಿಕವಾಗಿದೆ. ಜನರ ಒಳಿತಿಗಾಗಿ ನಾವು […]

ಲೋಕಾಯುಕ್ತ ತಿದ್ದುಪಡಿಗೆ ಸಹಿ ಹಾಕಬೇಡಿ: ರಾಜ್ಯಪಾಲರಿಗೆ ನ್ಯಾ.ಭಾಸ್ಕರ್‌ರಾವ್ ಮನವಿ

Monday, February 24th, 2014
Bhaskar-Rav

ಬೆಂಗಳೂರು: ಕೇಂದ್ರ ಸರ್ಕಾರದ ಜಾರಿಗೆ ತಂದಿರುವ ಲೋಕಪಾಲ ಮಾದರಿ ಅಳವಡಿಸಿಕೊಳ್ಳಲು ರಾಜ್ಯ ಸರ್ಕಾರ ಲೋಕಾಯುಕ್ತ ಕಾಯಿದೆಗೆ ತಿದ್ದುಪಡಿ ತರುವುದಕ್ಕೆ ಲೋಕಾಯುಕ್ತರಿಂದಲೇ ವಿರೋಧ ವ್ಯಕ್ತವಾಗಿದೆ. ಲೋಕಾಯುಕ್ತ ಕಾಯ್ದೆಗೆ ರಾಜ್ಯ ಸರ್ಕಾರ ತಿದ್ದುಪಡಿ ತರಲು ಮುಂದಾಗಿದ್ದು, ಇದರಲ್ಲಿ ಸಾಕಷ್ಟು ಲೋಪಗಳಿವೆ. ಇದರಿಂದ ಲೋಕಾಯುಕ್ತ ಸಂಸ್ಥೆಯ ಮೂಲ ಸಂರಚನೆಗೆ ಧಕ್ಕೆ ತರುತ್ತದೆ ಹಾಗೂ ಭ್ರಷ್ಟಾಚಾರ ನಿಯಂತ್ರಣ ಉದ್ದೇಶಕ್ಕೆ ಅಡ್ಡಿಯಾಗುತ್ತದೆ ಎಂದು ಲೋಕಾಯುಕ್ತ ನ್ಯಾಯಮೂರ್ತಿ ವೈ.ಭಾಸ್ಕರ್ ರಾವ್ ಆತಂಕ ವ್ಯಕ್ತಪಡಿಸಿದ್ದಾರೆ. ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಅವರನ್ನು ಭಾನುವಾರ ಭೇಟಿ ಮಾಡಿದ ಲೋಕಾಯುಕ್ತ ನ್ಯಾ. ವೈ. […]