ಕೈದಿಗಳ ನಿಯಮಿತ ಆರೋಗ್ಯ ತಪಾಸಣೆ: ಜಿಲ್ಲಾಧಿಕಾರಿ ಸೂಚನೆ
Tuesday, March 24th, 2015ಮಂಗಳೂರು : ಜೈಲಿನಲ್ಲಿರುವ ಖೈದಿಗಳ ಆರೋಗ್ಯವನ್ನು ವೈದ್ಯಕೀಯ ಕಾಲೇಜುಗಳ ಸಹಕಾರದೊಂದಿಗೆ ನಿಯಮಿತವಾಗಿ ನಡೆಸುವಂತೆ ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ ಸೂಚಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾ ಕಾರಾಗೃಹದಲ್ಲಿ ಸಂದರ್ಶಕ ಮಂಡಳಿಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇದಲ್ಲದೆ, ದಂತ ಕಾಲೇಜುಗಳ ನೆರವಿನೊಂದಿಗೆ ಕೈದಿಗಳ ದಂತ ಪರೀಕ್ಷೆಯನ್ನು ನಡೆಸಲು ಅವರು ತಿಳಿಸಿದರು. ಮೊದಲ ಬಾರಿಗೆ ಸಣ್ಣ ಪುಟ್ಟ ಅಪರಾಧಗಳನ್ನು ಎಸಗಿ ಬಂಧನಕ್ಕೊಳಗಾಗಿ ಜೈಲಿಗೆ ಬರುವವರನ್ನು ಮತ್ತು ವಿದ್ಯಾರ್ಥಿ ಆರೋಪಿಗಳನ್ನು ಜೈಲಿನಲ್ಲಿ ಕುಖ್ಯಾತ ಆರೋಪಿಗಳಿರುವ ಸೆಲ್ನಲ್ಲಿರಿಸದೆ, ಅವರನ್ನು ಪ್ರತ್ಯೇಕ ಸೆಲ್ನಲ್ಲಿಡಬೇಕು. ಅಂತರ್ ಜಿಲ್ಲಾ […]