ಮಾದಕವಸ್ತುಗಳಿಗೆ ವಿದ್ಯಾರ್ಥಿಗಳ ಗುರಿ: ಜಾಗೃತರಾಗಿರಲು ತಹಶೀಲ್ದಾರ್ ಕರೆ
Thursday, February 20th, 2014ಮಂಗಳೂರು: ಇತ್ತೀಚಿನ ದಿನಗಳಲ್ಲಿ ವಿದ್ಯಾಸಂಸ್ಥೆಗಳ ಆಸುಪಾಸಿನಲ್ಲಿ ಮಾದಕ ವಸ್ತುಗಳ ಮಾರಾಟ ಮತ್ತು ಬಳಕೆಯ ಪ್ರಕರಣಗಳು ಕಂಡುಬರುತ್ತಿದ್ದು, ಈ ನಿಟ್ಟಿನಲ್ಲಿ ವಿದ್ಯಾಸಂಸ್ಥೆಗಳು ಮತ್ತು ವಿದ್ಯಾರ್ಥಿಗಳು ಜಾಗೃತರಾಗಿರುವಂತೆ ಮಂಗಳೂರು ತಹಶೀಲ್ದಾರ್ ಮೋಹನ್ ರಾವ್ ಕರೆ ನೀಡಿದ್ದಾರೆ. ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಜಿಲ್ಲಾ ವಾರ್ತಾ ಇಲಾಖೆ ಹಾಗೂ ಬದ್ರಿಯಾ ಪದವಿಪೂರ್ವ ಕಾಲೇಜು ಸಂಯುಕ್ತ ಆಶ್ರಯದಲ್ಲಿ ನಗರದ ಬದ್ರಿಯಾ ಕಾಲೇಜು ಸಭಾಂಗಣದಲ್ಲಿ ಬುಧವಾರ ನಡೆದ ಮದ್ಯ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮ ಕುರಿತ ವಿಚಾರಸಂಕಿರಣ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಅಮಲು […]