ಸಿದ್ದರಾಮಯ್ಯ ಅವರ ಹಿರಿಯ ಸಹೋದರಿ ನಿಧನ,ಕಾರ್ಯಕ್ರಮ ರದ್ದು

Saturday, October 7th, 2017
siddaramiah

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹಿರಿಯ ಸಹೋದರಿ ಚಿಕ್ಕಮ್ಮ ಮೈಸೂರಿನಲ್ಲಿ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಸಹೋದರಿ ಚಿಕ್ಕಮ್ಮ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 90 ವರ್ಷ ವಯಸ್ಸಿನ ಚಿಕ್ಕಮ್ಮ ಅವರು ವಯೋ ಸಹಜ ಆನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫ‌ಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಇಂದು ದೇವೇಗೌಡನ ಹುಂಡಿಯಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.ಅಂತ್ಯಕ್ರಿಯೆಯಲ್ಲಿ ಸಿಎಂ ಸಿದ್ದರಾಮಯ್ಯ ಭಾಗವಹಿಸಲಿದ್ದು, ಇಂದಿನ ತಮ್ಮ ಎಲ್ಲ ಅಧಿಕೃತ ಕಾರ್ಯಕ್ರಮಗಳನ್ನು ರದ್ದು ಮಾಡಿದ್ದಾರೆ.

ಮೈಸೂರು: ಚಾಮುಂಡಿ ತಾಯಿಗೆ ಭಕ್ತರು ಅರ್ಪಿಸುವ ಸೀರೆಯಿಂದಲೇ ಕೋಟಿ ಆದಾಯ

Friday, October 6th, 2017
mysuru

ಮೈಸೂರು:  ಭಕ್ತರು ಕಾಣಿಕೆಯಾಗಿ ಅರ್ಪಿಸುವ ಸೀರೆ ಮತ್ತು ಕುಪ್ಪಸದಿಂದಲೇ ನಾಡ ಅಧಿದೇವತೆ ಚಾಮುಂಡಿ ತಾಯಿಗೆ  ಈ ವರ್ಷ 1.49 ಕೋಟಿ ಆದಾಯ ಬಂದಿದ್ದು, ಈವರೆಗಿನ ಎಲ್ಲಾ ದಾಖಲೆಗಳನ್ನು ಮುರಿದು ಹೊಸ ದಾಖಲೆ ನಿರ್ಮಿಸಿದೆ. ಶಕ್ತಿ ದೇವತೆ ಹಾಗೂ ನಾಡ ಅಧಿದೇವತೆ ಚಾಮುಂಡಿ ತಾಯಿಯ ದರ್ಶನ ಪಡೆಯಲು ದೇಶದ ಹಾಗೂ ರಾಜ್ಯದ ಮೂಲೆ ಮೂಲೆಗಳಿಂದ ಭಕ್ತರು ಚಾಮುಂಡಿ ಬೆಟ್ಟಕ್ಕೆ ಆಗಮಿಸುತ್ತಾರೆ. ತಮ್ಮ ಇಷ್ಟಾರ್ಥಗಳನ್ನು ಈಡೇರಿಸುವಂತೆ ತಾಯಿಯಲ್ಲಿ ಹರಕೆ ಕಟ್ಟಿಕೊಳ್ಳುವ ಭಕ್ತರು, ಇಷ್ಟಾರ್ಥಗಳು ಈಡೇರಿದ ಬಳಿಕ ತಾಯಿಗೆ ಸೀರೆ, ಚಿನ್ನ, […]

ಪಿರಿಯಾರಪಟ್ಟಣ: ಸಿಡಿಲಿನ ಆರ್ಭಟಕ್ಕೆ ಒಂದೇ ಕಡೆ 7 ಮಂದಿ ದುರ್ಮರಣ

Thursday, October 5th, 2017
mysuru

ಮೈಸೂರು: ತಾಲೂಕಿನ ನಂದಿ ನಾಥಪುರದಲ್ಲಿ ಸಿಡಿಲು ಬಡಿದು ಒಂದೇ ಕಡೆ 6 ಮಂದಿ ದಾರುಣವಾಗಿ ಸಾವನ್ನಪ್ಪಿರುವ ಭೀಕರ ದುರ್ಘ‌ಟನೆ ಗುರುವಾರ ನಡೆದಿದೆ. ಮೃತ ದುರ್ದೈವಿಗಳು ಹುಣಸವಾಡಿ ನಿವಾಸಿಗಳು ಎಂದು ತಿಳಿದು ಬಂದಿದೆ. ಸುಜಯ್‌ (15)ಸುವರ್ಣಮ್ಮ (45)ಪುಟ್ಟಣ್ಣ(60) ಸುದೀಪ್‌, ತಿಮ್ಮೇಗೌಡ, ಉಮೇಶ್‌, ಪ್ರವೀಣ್‌ ಎನ್ನುವವರು ಮೃತ ಪಟ್ಟಿರುವುದಾಗಿ ವರದಿಯಾಗಿದೆ. ಹೊಲದಲ್ಲಿ ದನಗಳನ್ನು ಮೇಯಿಸುತ್ತಿದ್ದ ವೇಳೆ ಸಿಡಿಲು ಬಡಿದಿದೆ ಎಂದು ಹೇಳಲಾಗಿದೆ. ನಾಲ್ವರು ಸಿಡಿಲಿನಾಘಾತಕ್ಕೆ ಸ್ಥಳದಲ್ಲೇ ಸಾವನ್ನಪ್ಪಿದರೆ ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಪಿರಿಯಾರಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

2018ರ ಚುನಾವಣೆ ಕಡೆಯ ಚುನಾವಣೆ, ಇನ್ನು ಚುನಾವಣೆಗೆ ನಿಲ್ಲಲ್ಲ :ಸಿದ್ದರಾಮಯ್ಯ

Wednesday, October 4th, 2017
CM

ಮೈಸೂರು:  “ರಾಜಕೀಯವಾಗಿ ಜನ್ಮ ನೀಡಿದ, ಉಪ ಚುನಾವಣೆಯಲ್ಲಿ ಮರುಜನ್ಮ ನೀಡಿದ ಚಾಮುಂಡೇಶ್ವರಿ ಕ್ಷೇತ್ರದಿಂದಲೇ ಸ್ಪರ್ಧಿಸುತ್ತೇನೆ. 2018ರ ವಿಧಾನಸಭೆ ಚುನಾವಣೆಯೇ ನನ್ನ ಕಡೆಯ ಚುನಾವಣೆ “ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಹೂಟಗಳ್ಳಿಯ ಸಂತೆ ಮೈದಾನದಲ್ಲಿಮಂಗಳವಾರ ಏರ್ಪಡಿಸಿದ್ದ ಚಾಮುಂಡೇಶ್ವರಿ ಕ್ಷೇತ್ರದ ಕಾಂಗ್ರೆಸ್‌ ಕಾರ್ಯಕರ್ತರ ಬೃಹತ್‌ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು  “2013ರ ಚುನಾವಣೆಯೇ ಅಂತಿಮ, ಇನ್ನು ಸ್ಪರ್ಧೆ ಮಾಡಲ್ಲ ಎಂದು ಹೇಳಿದ್ದೆ, ಆದರೆ, ಕಾಂಗ್ರೆಸ್‌ ಹೈಕಮಾಂಡ್‌ ನನ್ನ ನಾಯಕತ್ವದಲ್ಲೇ ಚುನಾವಣೆಗೆ ಹೋಗಲು ಹೇಳಿರುವುದರಿಂದ ಅನಿವಾರ್ಯವಾಗಿ 2018ರ ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆ. ಇದೊಂದೇ ಚುನಾವಣೆ, ಇನ್ನು […]