ಲೋಕ ಸಮೀಕ್ಷೆಯಲ್ಲಿ ಮೋದಿ ಮುಂದು ರಾಗಾ ಹಿಂದೆ, ಎನ್ಡಿಎನತ್ತ ಮತದಾರ, ಯುಪಿಎ ಕಥೆ ಹರೋಹರ
Friday, March 7th, 2014ನವದೆಹಲಿ: ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದ ರುಚಿ ಅನುಭವಿಸುತ್ತಿರುವ ಕಾಂಗ್ರೆಸ್ ಈ ಬಾರಿ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅಬ್ಬರಕ್ಕೆ ಧೂಳೀಪಟವಾಗಲಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟ ಗದ್ದುಗೆಯ ಸನಿಹ ಬಂದು ನಿಲ್ಲಲಿದೆ. ಎನ್ಡಿಎ 212- 232 ಸ್ಥಾನಗಳನ್ನು ಗೆದ್ದರೆ, ಯುಪಿಎ 119ರಿಂದ 139 ಸ್ಥಾನಗಳಿಗೆ ತೃಪ್ತಿಪಟ್ಟುಕೊಳ್ಳಲಿದೆ ಎಂದು ಸಿಎನ್ಎನ್ಐಬಿನ್- ಲೋಕನೀತಿ- ಸಿಎಸ್ಡಿಎಸ್ ಚುನಾವಣಾ ಪೂರ್ವ ಸಮೀಕ್ಷೆ ಭವಿಷ್ಯ ನುಡಿದಿದೆ. ಬಿಜೆಪಿ ಅತಿದೊಡ್ಡ ಪಕ್ಷ: ಒಂದು ವೇಳೆ ತಕ್ಷಣಕ್ಕೆ ಚುನಾವಣೆ ನಡೆದರೆ ಬಿಜೆಪಿ […]