ಕೆ.ಎಸ್.ಆರ್.ಟಿ.ಸಿ ನಿರ್ವಾಹಕ ಆತ್ಮಹತ್ಯೆ ಪೊಲೀಸರ ದೌರ್ಜನ್ಯದ ವಿರುದ್ಧ ಪ್ರತಿಭಟನೆ
Tuesday, September 27th, 2016ಮಂಗಳೂರು : ರಾಜ್ಯ ರಸ್ತೆ ಸಾರಿಗೆ ನಿಗಮದ ಮಂಗಳೂರು ಒಂದನೇ ಘಟಕಕ್ಕೆ ಸೇರಿದ ಮಂಗಳೂರು- ಸುಬ್ರಹ್ಮಣ್ಯ ರೂಟ್ನ ಬಸ್ಸಲ್ಲಿ ಚಿಲ್ಲರೆ ಹಣದ ವಿಚಾರಕ್ಕೆ ಸಂಬಂಧಿಸಿ ಯುವತಿಯೋರ್ವಳು ಮಾಡಿದ ಆರೋಪದಿಂದ ಮನನೊಂದು ಚಲಿಸುತ್ತಿದ್ದ ಬಸ್ನಿಂದ ಕುಮಾರಧಾರಾ ನದಿಗೆ ಹಾರಿ ನಿರ್ವಾಹಕ ದೇವದಾಸ್ ಶೆಟ್ಟಿ(41) ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿ ಕೆಎಸ್ಆರ್ಟಿಸಿ ಡಿಪೋ ಮುಂದೆ ವಿವಿಧ ಸಂಘಟನೆಗಳ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು. ಪ್ರಕರಣದಲ್ಲಿ ಕಡಬ ಠಾಣಾ ಪೊಲೀಸರು ಏಕಪಕ್ಷೀಯವಾಗಿ ವರ್ತಿಸಿದ್ದು, ಯುವತಿಯ ಹೇಳಿಕೆಯನ್ನೇ ಆಧರಿಸಿ ನಿರ್ವಾಹಕರ ಬಟ್ಟೆ ಬಿಚ್ಚಿಸಿ ಅಮಾನವೀಯವಾಗಿ […]