ಕರ್ನಾಟಕ ರಾಜ್ಯ ಪೊಲೀಸ್ ಧ್ವಜ ಹಾಗೂ ಕಲ್ಯಾಣ ದಿನಾಚರಣೆ
Wednesday, April 3rd, 2013ಮಂಗಳೂರು : ಪೊಲೀಸರು ಕಾನೂನಿನ ಬಗ್ಗೆ ಸ್ಪಷ್ಟ ಜ್ಞಾನ ಹೊಂದುವುದು ಆವಶ್ಯ. ಆಗ ಯಾವುದೇ ಕ್ಲಿಷ್ಟಕರ ಸನ್ನಿವೇಶಗಳನ್ನು ಸುಲಲಿತವಾಗಿ ನಿಭಾಯಿಸಲು ಸಾಧ್ಯ. ಇಲ್ಲವಾದರೆ ಮುಜುಗರದ ಸಂದರ್ಭ ಎದುರಿಸಬೇಕಾಗುತ್ತದೆ ಎಂದು ನಿವೃತ್ತ ಪೊಲೀಸ್ ಉಪಾಧೀಕ್ಷಕ ವಿಶ್ವನಾಥ ಪಂಡಿತ್ ಹೇಳಿದರು. ಅವರು ಮಂಗಳವಾರ ನಗರದ ಡಿ.ಎ.ಆರ್. ಪೊಲೀಸ್ ಕವಾಯತು ಮೈದಾನದಲ್ಲಿ ಜರಗಿದ ಕರ್ನಾಟಕ ರಾಜ್ಯ ಪೊಲೀಸ್ ಧ್ವಜ ಹಾಗೂ ಕಲ್ಯಾಣ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದರು. ನಿವೃತ್ತರಾದ 61 ಪೊಲೀಸ್ ಅಧಿಕಾರಿಗಳು ಹಾಗೂ ಸಿಬಂದಿಗಳನ್ನು ಈ ಸಂದರ್ಭ ಸನ್ಮಾನಿಸಲಾಯಿತು. ನಿವೃತ್ತ ಪೊಲೀಸರ ಕಲ್ಯಾಣ […]