ಲೋಕಸಮರ: ಚಿಕ್ಕಬಳ್ಳಾಪುರದ ಮೇಲೆ ರಾಹುಲ್ ಕಣ್ಣು

Thursday, March 13th, 2014
Rahul-Gandhi

ಬೆಂಗಳೂರು: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿ ಕೇಳಿ ಬರುತ್ತಿದ್ದು, ಇದು ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಉಂಟು ಮಾಡಿದೆ. ರಾಹುಲ್ ಗಾಂಧಿ ಅವರು ತಮ್ಮ ಸ್ವಕ್ಷೇತ್ರ ಉತ್ತರ ಪ್ರದೇಶ ಅಮೇಥಿಯ ಜತೆಗೆ ಚಿಕ್ಕಬಳ್ಳಾಪುರ ಕ್ಷೇತ್ರದಿಂದಲೂ ಸ್ಪರ್ಧಿಸುವ ಬಗ್ಗೆ ಗಂಭೀರ ಚಿಂತನೆ ನಡೆಸಿದ್ದು, ಈ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಮುಖಂಡರ ಜತೆ ಈಗಾಗಲೇ ಸಮಾಲೋಚನೆ ನಡೆಸಿದ್ದಾರೆ ಎನ್ನಲಾಗಿದೆ. ಚಿಕ್ಕಬಳ್ಳಾಪುರದಿಂದ ರಾಹುಲ್ ಗಾಂಧಿ ಸ್ಪರ್ಧೆಗೆ ರಾಜ್ಯ ಕಾಂಗ್ರೆಸ್ ಮುಖಂಡರೂ ಸಹ […]

ರಾಹುಲ್, ಕೇಜ್ರಿ ವಿರುದ್ಧ ದೂರು

Monday, March 10th, 2014
Rahul-Gandhi

ನವದೆಹಲಿ: ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹಾಗೂ ಆಮ್ ಆದ್ಮಿ ಪಕ್ಷದ ಮುಖಂಡ ಅರವಿಂದ ಕೇಜ್ರಿವಾಲ್ ವಿರುದ್ಧ ಭಾನುವಾರ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ. ಆರ್‌ಎಸ್‌ಎಸ್ ಕಾರ್ಯಕರ್ತರಿಂದಲೇ ಮಹಾತ್ಮಾ ಗಾಂಧಿ ಹತ್ಯೆಯಾಯಿತು ಎಂಬ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಆರೋಪದಿಂದ ಕ್ರುದ್ಧಗೊಂಡಿರುವ ಬಿಜೆಪಿ ಅವರ ವಿರುದ್ಧ ಆಯೋಗಕ್ಕೆ ದೂರು ನೀಡಿದೆ. ಮಾತ್ರವಲ್ಲ ಕಾಂಗ್ರೆಸ್‌ನ ಮಾನ್ಯತೆ ರದ್ದುಮಾಡುವಂತೆ ಒತ್ತಾಯಿಸಿದೆ. ಕಾಂಗ್ರೆಸ್ ನಾಯಕ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ. ಹೀಗಾಗಿ ಅವರ ವಿರುದ್ಧ ಕಠಿಣ […]

ರಾಹುಲ್ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾದ ಆರೆಸ್ಸೆಸ್ಸ್

Friday, March 7th, 2014
Rahul-Gandhi

ನವದೆಹಲಿ: ಗಾಂಧಿಯವರ ಹತ್ಯೆಯಲ್ಲಿ ಆರೆಸ್ಸೆಸ್ಸ್ ಕೈವಾಡವಿದೆ ಎಂದು ಹೇಳಿರುವ ರಾಹುಲ್ ಗಾಂಧಿಯವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಆರೆಸ್ಸೆಸ್ಸ್ ಹೇಳಿದೆ. ರಾಹುಲ್ ಹೇಳಿಕೆಯ ಬಗ್ಗೆ ಪ್ರತಿಕ್ರಿಯಿಸಿದ ಆರೆಸ್ಸೆಸ್ಸ್ ಹಿರಿಯ ನೇತಾರ ರಾಮ್ ಮಾಧವ್, ರಾಹುಲ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡುವುದಾಗಿ ಹೇಳಿದ್ದಾರೆ. ಆರೆಸ್ಸೆಸ್ಸ್ ಗಾಂಧೀಜಿಯವರನ್ನು ಹತ್ಯೆಗೈದಿತ್ತು. ಆಗ ಅವರೇ (ಬಿಜೆಪಿ) ಗಾಂಧಿ ಬಗ್ಗೆ ಮಾತನಾಡುತ್ತಿದ್ದಾರೆ. ಈ ಹಿಂದೆ ಅವರು ಸರ್ದಾರ್ ಪಟೇಲ್ ಮತ್ತು ಗಾಂಧೀಜಿಯವರನ್ನು ವಿರೋಧಿಸುತ್ತಿದ್ದರು ಎಂದು ಮಹಾರಾಷ್ಟ್ರದಲ್ಲಿ ನಡೆದ ರ್ಯಾಲಿಯಲ್ಲಿ ರಾಹುಲ್ ಹೇಳಿದ್ದರು.

ಮೋದಿ ಬಗ್ಗೆ ಖುರ್ಷಿದ್ ಹೇಳಿಕೆಗೆ ರಾಹುಲ್ ಅಸಮಾಧಾನ

Thursday, February 27th, 2014
Rahul-Gandhi

ನವದೆಹಲಿ: ಗುಜರಾತ್ ಮುಖ್ಯಮಂತ್ರಿ ಹಾಗೂ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವ ಸಲ್ಮಾನ್ ಖುರ್ಷಿದ್ ನೀಡಿದ್ದ ‘ನಪುಂಸಕ’ ಹೇಳಿಕೆಗೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎರಡು ದಿನಗಳ ಬಳಿಕ ಖುರ್ಷಿದ್ ಹೇಳಿಕೆ ಬಗ್ಗೆ ಇಂದು ವರದಿಗಾರರಿಗೆ ಪ್ರತಿಕ್ರಿಯಿಸಿರುವ ರಾಹುಲ್, ‘ಇಂತಹ ಭಾಷೆ ಬಳಸುವುದನ್ನು ನಾನು ಒಪ್ಪಿಕೊಳ್ಳುವುದಿಲ್ಲ’ ಎಂದಿದ್ದಾರೆ. 2002ರ ಗುಜರಾತ್ ಗಲಭೆ ನಿಯಂತ್ರಿಸಲು ಸಾಧ್ಯವಾಗದ ಮೋದಿ ಒಬ್ಬ ‘ನಪುಂಸಕ’ ಎಂದು ಸಲ್ಮಾನ್ ಖರ್ಷಿದ್ ಹೇಳಿದ್ದರು. ಈ […]