ರಾಜೀವ್ ಹಂತಕರ ಬಿಡುಗಡೆ: ಮಾಚ್ 26ಕ್ಕೆ ವಿಚಾರಣೆ ಮುಂದೂಡಿಕೆ

Thursday, March 6th, 2014
Rajiv-gandhi

ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಂತಕರ ಬಿಡುಗಡೆ ವಿರೋಧಿಸಿ 1991ರ ಸ್ಫೋಟದಲ್ಲಿ ಮೃತಪಟ್ಟವರ ಕುಟುಂಬ ಸದಸ್ಯರು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಗುರುವಾರ ಮಾರ್ಚ್ 26ಕ್ಕೆ ಮುಂದೂಡಿದೆ. ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಏಳು ಹಂತಕರ ಬಿಡುಗಡೆಗೆ ತಮಿಳುನಾಡಿನ ಮುಖ್ಯಮಂತ್ರಿ ಜಯಲಲಿತಾ ನೇತೃತ್ವದ ಸರ್ಕಾರ ನಿರ್ಧರಿಸಿತ್ತು. ತಮಿಳುನಾತಡು ಸರ್ಕಾರದ ನಿರ್ಧಾರ ಪ್ರಶ್ನಿಸಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು. ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್ ಹಂತಕರ ಬಿಡುಗಡೆಗೆ ತಡೆಯಾಜ್ಞೆ ನೀಡಿತ್ತು. 1991ರ ಸ್ಫೋಟದಲ್ಲಿ […]

ನಳಿನಿ ಸೇರಿದಂತೆ 4 ರಾಜೀವ್ ಹಂತಕರ ಬಿಡುಗಡೆಗೆ ಸುಪ್ರೀಂ ತಡೆ

Thursday, February 27th, 2014
Rajeev-Gandhi

ನವದೆಹಲಿ: ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರಿಗೆ ಭಾರಿ ಹಿನ್ನಡೆಯಾಗಿದೆ. ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ನಳಿನಿ ಸೇರಿದಂತೆ ನಾಲ್ವರು ಅಪರಾಧಿಗಳ ಬಿಡುಗಡೆಗೆ ಸುಪ್ರೀಂ ಕೋರ್ಟ್ ಗುರುವಾರ ತಡೆಯಾಜ್ಞೆ ನೀಡಿದೆ. ಈ ಮುಂಚೆ ಪ್ರಕರಣದ ಮೂವರು ಅಪರಾಧಿಗಳ ಬಿಡುಗಡೆಗೆ ತಡೆಯಾಜ್ಞೆ ನೀಡಿದ್ದ ಸುಪ್ರೀಂ ಕೋರ್ಟ್, ಇಂದು ನಳಿನಿ, ರಾಬರ್ಟ್, ಜಯಕುಮಾರ್ ಹಾಗೂ ರವಿಚಂದ್ರನ್   ಬಿಡುಗಡೆಗೂ ತಡೆ ನೀಡಿದೆ. ಪ್ರಕರಣದ ಏಳು ಹಂತಕರ ಬಿಡುಗಡೆ ತಮಿಳುನಾಡು ಸರ್ಕಾರ ನಿರ್ಧರಿಸಿತ್ತು. ತಮಿಳುನಾಡು ಸರ್ಕಾರದ ನಿರ್ಧಾರ […]

‘ರಾಜೀವ್’ ಹಂತಕರ ಬಿಡುಗಡೆ: ಫೆ. 27ಕ್ಕೆ ವಿಚಾರಣೆ

Monday, February 24th, 2014
Rajeev-Gandhi

ನವದೆಹಲಿ: ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿ ಹಂತಕರನ್ನು ಬಿಡುಗಡೆ ಮಾಡಲು ತೀರ್ಮಾನಿಸಿದ್ದ ತಮಿಳುನಾಡು ಸರ್ಕಾರ ನಿರ್ಧಾರವನ್ನು ಪ್ರಶ್ನಿಸಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಫೆಬ್ರವರಿ 27ರಂದು ಕೈಗೆತ್ತಿಕೊಳ್ಳಲಿದೆ. ತಮಿಳುನಾಡು ಸರ್ಕಾರದ ನಿರ್ಧಾರ ಮತ್ತು ರಾಜೀವ್ ಹಂತಕರ ಗಲ್ಲು ಶಿಕ್ಷೆಯನ್ನು ಜೀವಾವಧಿಗೆ ಇಳಿಸಿದ್ದ ಸುಪ್ರೀಂಕೊರ್ಟ್ನ ತೀರ್ಪಿನ ವಿರುದ್ಧ ಕೇಂದ್ರ ಸರ್ಕಾರ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯ ವಿಚಾರಣೆಯನ್ನು ಫೆ. 27ರಂದು ಸುಪ್ರೀಂಕೋರ್ಟ್ ನಡೆಸಲಿದೆ. ನಳಿನಿ ಶ್ರೀಹರನ್ ಸೇರಿದಂತೆ ಸಂತನ್, ಮುರಗನ್ ಮತ್ತು ಪೆರಾರಿವೇಲನ್ ಅವರ […]

ರಾಜೀವ್ ಹಂತಕರ ಬಿಡುಗಡೆ ಸದ್ಯಕ್ಕಿಲ್ಲ

Friday, February 21st, 2014
P.-Sathasivam

ನವದೆಹಲಿ/ಚೆನ್ನೈ: ಸದ್ಯಕ್ಕೆ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಹಂತಕರಿಗೆ ಬಿಡುಗಡೆ ಭಾಗ್ಯ ಇಲ್ಲ… ತಮಿಳುನಾಡು ಸರ್ಕಾರದ ನಿರ್ಧಾರ ಮತ್ತು ರಾಜೀವ್ ಹಂತಕರ ಗಲ್ಲು ಶಿಕ್ಷೆಯನ್ನು ಜೀವಾವಧಿಗೆ ಇಳಿಕೆ ಮಾಡಿದ ಸುಪ್ರೀಂಕೋರ್ಟ್ ತೀರ್ಪಿನ ವಿರುದ್ಧ ಕೇಂದ್ರ ಸರ್ಕಾರ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿ ಕುರಿತಂತೆ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ತಮಿಳುನಾಡು ಸರ್ಕಾರದ ನಿರ್ಧಾರಕ್ಕೆ ತಡೆ ನೀಡಿದೆ. ‘ಕೈದಿಗಳ ಬಿಡುಗಡೆ ಸಂಬಂಧ ತಮಿಳುನಾಡು ಸರ್ಕಾರ ಸೂಕ್ತ ವಿಧಿ ವಿಧಾನಗಳನ್ನು ಅನುಸರಿಸಿಲ್ಲ. ಹೀಗಾಗಿ ಕೋರ್ಟ್ ಜಯಲಲಿತಾ ಸರ್ಕಾರದ ನಿರ್ಧಾರಕ್ಕೆ ತಡೆ ನೀಡಿದೆ’ […]

ರಾಜೀವ್ ಹಂತಕರ ಬಿಡುಗಡೆ ಏಕೆ?

Thursday, February 20th, 2014
Rahul-Gandhi

ನವದೆಹಲಿ/ಚೆನ್ನೈ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಂತಕರನ್ನು ಮೂರು ದಿನಗಳೊಳಗೆ ಬಿಡುಗಡೆ ಮಾಡುವ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ನಿರ್ಧಾರಕ್ಕೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಕಿಡಿಕಿಡಿಯಾಗಿದ್ದಾರೆ. ಪ್ರಧಾನಮಂತ್ರಿಗಳ ಹಂತಕರನ್ನೇ ಬಿಡುಗಡೆ ಮಾಡಿದರೆ ಇನ್ನು ಜನಸಾಮಾನ್ಯರಿಗೆ ಹೇಗೆ ನ್ಯಾಯ ಸಿಗಲು ಸಾಧ್ಯ? ನಮ್ಮ ದೇಶದಲ್ಲಿ ಪ್ರಧಾನಿಗೂ ನ್ಯಾಯ ಸಿಗುವುದಿಲ್ಲವೇ? ನನ್ನ ತಂದೆಯ ಹಂತಕರಿಗೆ ಗಲ್ಲುಶಿಕ್ಷೆಯಾಗಬೇಕೆಂದು ನಾನೇನು ಆಗ್ರಹಿಸುತ್ತಿಲ್ಲ. ಅದರಿಂದ ನನ್ನ ತಂದೆ ಹಿಂತಿರುಗಿ ಬರುವುದೂ ಇಲ್ಲ. ಇದು ಇಡೀ ದೇಶಕ್ಕೆ ಸಂಬಂಧಪಟ್ಟ ವಿಚಾರ. ತಮಿಳುನಾಡು ಸರ್ಕಾರದ ಈ ನಿರ್ಧಾರದಿಂದ […]

ರಾಜೀವ್ ಹಂತಕರಿಗೆ ತಪ್ಪಿತು ಗಲ್ಲು

Wednesday, February 19th, 2014
Rajeev-Gandhi

ನವದೆಹಲಿ: ದಿವಂಗತ ಪ್ರಧಾನಿ ರಾಜೀವ್ ಗಾಂಧಿ ಹಂತಕರ ಗಲ್ಲುಶಿಕ್ಷೆಯನ್ನು ಜೀವಾವಧಿಗಿಳಿಸಿ ಸುಪ್ರೀಂ ಕೋರ್ಟ್ ಮಂಗಳವಾರ ಮಹತ್ವದ ಆದೇಶ ನೀಡಿದೆ. ರಾಜೀವ್ ಹತ್ಯೆಗೈದ ಮೂವರು ಅಪರಾಧಿಗಳ ಕ್ಷಮಾದಾನ ಅರ್ಜಿಇತ್ಯರ್ಥಗೊಳಿಸಲು ಕೇಂದ್ರ ಸರ್ಕಾರ 11 ವರ್ಷ ವಿಳಂಬ ಮಾಡಿದ ಹಿನ್ನೆಲೆಯಲ್ಲಿ ಕೋರ್ಟ್ ಈ ಆದೇಶ ನೀಡಿದೆ.   ಇತ್ತೀಚೆಗಷ್ಟೇ ಸುಪ್ರೀಂ ಕೋರ್ಟ್ ಇದೇ ಕಾರಣ ಹೇಳಿ ನರಹಂತಕ ವೀರಪ್ಪನ್ ಸಹಚರರ ಗಲ್ಲುಶಿಕ್ಷೆಯನ್ನೂ ಜೀವಾವಧಿಗಿಳಿಸಿ ಆದೇಶ ಹೊರಡಿಸಿತ್ತು. ವಿಳಂಬವೇ ಕಾರಣ: ಅಪರಾಧಿಗಳಾದ ಸಂತನ್, ಮುರುಗನ್ ಹಾಗೂ ಪೆರಾರಿವೇಲನ್ ಅವರ ಕ್ಷಮಾದಾನ ಅರ್ಜಿಯ ಇತ್ಯರ್ಥಕ್ಕೆ […]

ರಾಜೀವ್ ಗಾಂಧಿ ಹಂತಕರಿಗೆ ಜೀವಾವಧಿ ಶಿಕ್ಷೆ

Tuesday, February 18th, 2014
Rajiv-Gandhi

ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಂತಕರ ಗಲ್ಲು ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ಜೀವಾವಧಿ ಶಿಕ್ಷೆಯಾಗಿ ಮಂಗಳವಾರ ಪರಿವರ್ತಿಸಿದೆ. ಕ್ಷಮಾದಾನ ಅರ್ಜಿ ವಿಲೇವಾರಿಯಲ್ಲಿ ವಿಳಂಬವಾದ ಹಿನ್ನೆಲೆಯಲ್ಲಿ ತಮ್ಮ ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯಾಗಿ ಪರಿವರ್ತಿಸಬೇಕು ಎಂದು ಮೂವರು ಅಪರಾಧಿಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಕೋರ್ಟ್ ಇಂದು ತೀರ್ಪು ಪ್ರಕಟಿಸಿದೆ. ‘ಮಾಜಿ ಪ್ರಧಾನಿ ದಿ.ರಾಜೀವ್ ಗಾಂಧಿ ಹಂತಕರಿಗೆ ಕ್ಷಮಾದಾನ ಇಲ್ಲ. ಅವರಿಗೆ ಗಲ್ಲು ಶಿಕ್ಷೆಯೇ ಸೂಕ್ತ’ ಎಂದು  ಸುಪ್ರೀಂಕೋರ್ಟ್ ಈ ಹಿಂದಿನ ವಿಚಾರಣೆಯಲ್ಲಿ ಅಭಿಪ್ರಾಯಪಟ್ಟಿತ್ತು. ಅಲ್ಲದೆ ಕೇಂದ್ರ […]