ಶಕ್ತಿನಗರ ಕಾರ್ಮಿಕ ಕಾಲೋನಿಯಲ್ಲಿ ಜನಸಂಪರ್ಕ ಸಭೆ
Monday, October 23rd, 2017ಮಂಗಳೂರು: ಹಕ್ಕು ಪತ್ರ ಸಿಗದಿರುವ ಶಕ್ತಿನಗರ ಕಾರ್ಮಿಕ ಕಾಲೋನಿಯ ಜನರಿಗೆ ಹಕ್ಕುಪತ್ರ ಕೊಡಿಸಲು ಶೀಘ್ರದಲ್ಲೇ ಪ್ರಯತ್ನಿಸಲಾಗುವುದು ಎಂದು ಶಾಸಕ ಜೆ.ಆರ್.ಲೋಬೊ ಅವರು ಹೇಳಿದರು. ಅವರು ಶಕ್ತಿನಗರ ಕಾರ್ಮಿಕ ಕಾಲೋನಿಯಲ್ಲಿರುವ ಅಂಗನವಾಡಿ ಕೇಂದ್ರದಲ್ಲಿ ಜನಸಂಪರ್ಕ ಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದರು. ಕಾಲೋನಿಯಲ್ಲಿ ಹಲವು ವರ್ಷಗಳಿಂದ ಕಾರ್ಮಿಕರಾಗಿರುವ ಜನರಿಗೆ ಹಕ್ಕುಪತ್ರ, 94 ಸಿಸಿ, ಪಹಣಿಪತ್ರ ಮುಂತಾದ ಸಮಸ್ಯೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಇಲ್ಲಿ ಇಷ್ಟು ವರ್ಷಗಳಿಂದ ಜನ ವಾಸವಿದ್ದರೂ ಹಕ್ಕುಪತ್ರ ಕೊಡಲಾಗದಿರುವ ಬಗ್ಗೆ, ಅಲ್ಲಿರುವ ಸಮಸ್ಯೆಗಳ ಬಗ್ಗೆ ಸಭೆಯಲ್ಲಿದ್ದ ಅಧಿಕಾರಿಗಳು ಮಾಹಿತಿ ನೀಡಿದರು. ಶಾಸಕ ಜೆ.ಆರ್.ಲೋಬೊ […]