ಸೌಜನ್ಯ ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಲು ಕೇಮಾರು ಶ್ರೀ ಒತ್ತಾಯ

Tuesday, November 6th, 2012
ಸೌಜನ್ಯ ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಲು ಕೇಮಾರು ಶ್ರೀ ಒತ್ತಾಯ

ಬೆಳ್ತಂಗಡಿ :ಸೌಜನ್ಯಳ ಮನೆಗೆ ಭೇಟಿ ನೀಡಿದ ಕೇಮಾರು ಶ್ರೀ ಈಶವಿಠಲದಾಸ ಸ್ವಾಮೀಜಿಯವರು ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಜವಾದ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸ್ ಇಲಾಖೆ ವಿಫಲವಾಗಿದೆ ಆದ್ದರಿಂದ ಈ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಅವರು ಈ ಸಂದರ್ಭದಲ್ಲಿ ಒತ್ತಾಯಿಸಿದರು. ಇನ್ನು15 ದಿನಗಳಲ್ಲಿ ಸೂಕ್ತ ತನಿಖೆ ನಡೆಸದೇ ಇದ್ದಲ್ಲಿ ಸಾರ್ವಜನಿಕರ ಬೆಂಬಲದೊಂದಿಗೆ ನ್ಯಾಯ ಸಿಗುವವರೆಗೆ ಹೋರಾಟ ನಡೆಸಲಾಗುವುದು ಎಂದವರು ತಿಳಿಸಿದರು. ಪ್ರಕರಣದ ಹಿಂದೆ ಯಾರೇ ಇದ್ದರು ಅದನ್ನು ಕೂಡಲೇ ಪತ್ತೆಹಚ್ಚಿ ಬಹಿರಂಗಪಡಿಸಬೇಕು, ಹಾಗೂ ಸಾರ್ವಜನಿಕರ ಹಿತಾಸಕ್ತಿ […]