ಸೌಜನ್ಯಾ ಪ್ರಕರಣವನ್ನು ಹಿಡಿದು ಬೆಳ್ತಂಗಡಿ ತಾಲೂಕಿನ ಕೆಲವರು ಧರ್ಮಸ್ಥಳ ದೇವಾಲಯದ ಚಾರಿತ್ರ್ಯ ಹನನ ಮಾಡುತ್ತಿದ್ದಾರೆ

Wednesday, October 16th, 2013
Veerendra Hegde

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಕೆಲವರು ಸೇರಿಕೊಂಡು 2012 ರಲ್ಲಿ ನಡೆದ ಸೌಜನ್ಯಾ ಕೊಲೆ ಪ್ರಕರಣವನ್ನು ಟಿ.ವಿ. ಮಾಧ್ಯಮದಲ್ಲಿ ಹೇಳಿಕೊಂಡು ಭಾರತದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಶ್ರೀ ಕ್ಷೇತ್ರ ಧರ್ಮಸ್ಥಳ ದೇವಾಲಯ ಮತ್ತು ಧರ್ಮಾಧಿಕಾರಿಯಾದ ನಮ್ಮ ಮೇಲೆ ಆರೋಪ ಹೊರಿಸುವ ಪ್ರಯತ್ನ ಮಾಡಿದ್ದಾರೆ. ಸೌಜನ್ಯಾ ಪ್ರಕರಣದಲ್ಲಿ ನಮ್ಮ ಕುಟುಂಬದ ಯಾರದ್ದೂ ಕೈವಾಡವಿಲ್ಲ. ನಾವು ಯಾವುದೇ ಆರೋಪಿಗಳನ್ನು ರಕ್ಷಿಸಿಲ್ಲ. ಯಾರೇ ಆರೋಪಿಗಳಿದ್ದರೂ ಅವರನ್ನು ತತ್‌ಕ್ಷಣ ಬಂಧಿಸಲು ನಮ್ಮ ಅಡ್ಡಿಯಿಲ್ಲ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಸ್ಪಷ್ಟಪಡಿಸಿದ್ದಾರೆ. […]

ಸೌಜನ್ಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಸರಕಾರ ಕೂಡಲೇ ಸಿಬಿಐ ತನಿಖೆಗೆ ಒಪ್ಪಿಸಬೇಕು : ಹಿಂದೂ ನಾಯಕ ಮಹೇಶ ಶೆಟ್ಟಿ ತಿಮರೋಡಿ

Friday, October 11th, 2013
mafiya

ಮಂಗಳೂರು : ಸೌಜನ್ಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಸರಕಾರ ಕೂಡಲೇ ಸಿಬಿಐ ತನಿಖೆಗೆ ಒಪ್ಪಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಬೃಹತ್‌ ಆಂದೋಲನ ನಡೆಸಲಾಗುವುದು ಎಂದು ಹಿಂದೂ ನಾಯಕ ಮಹೇಶ ಶೆಟ್ಟಿ ತಿಮರೋಡಿ ಎಚ್ಚರಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ  ಮಾತನಾಡಿದ ಅವರು, ಉಜಿರೆ ಕಾಲೇಜು ವಿದ್ಯಾರ್ಥಿನಿ ಸೌಜನ್ಯಾ ಅತ್ಯಾಚಾರಕ್ಕೊಳಗಾಗಿ ಕೊಲೆಯಾಗಿ ಒಂದು ವರ್ಷ ಕಳೆದಿದೆ. ಮಾನಸಿಕ ಅಸ್ವಸ್ಥ ವ್ಯಕ್ತಿಯೋರ್ವನನ್ನು ಆರೋಪಿ ಎಂದು ಬಿಂಬಿಸಲಾಗಿದೆ. ಆದರೆ ಆತನ ಮೇಲೆ ಯಾವುದೇ ಆಪಾದನೆಗಳಿಲ್ಲ. ಪೊಲೀಸ್‌ ಇಲಾಖೆ ಮೇಲೆ ಒತ್ತಡ ಹೇರಿ ಪ್ರಕರಣದ […]

ವಿದ್ಯಾರ್ಥಿನಿ ಸೌಜನ್ಯ ಪ್ರಕರಣ:ಸಿಒಡಿ ಪೊಲೀಸರ ತನಿಖೆ ಆರಂಭ

Friday, November 30th, 2012
Sowjanya

ಬೆಳ್ತಂಗಡಿ : ಉಜಿರೆ ಎಸ್‌ಡಿಎಂ ಕಾಲೇಜಿನ ಪಿಯುಸಿ ವಿದ್ಯಾರ್ಥಿನಿ ಸೌಜನ್ಯಾ ಅವರ ಕೊಲೆ, ಅತ್ಯಾಚಾರಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಸಿಒಡಿ ಪೊಲೀಸರು ಬೆಳ್ತಂಗಡಿಗೆ ಆಗಮಿಸಿದ್ದಾರೆ. ಸಿಒಡಿ ಇನ್ಸ್‌ಪೆಕ್ಟರ್‌ ಗೋಪಾಲ್‌ ಅವರು ಪ್ರಕರಣದ ಕುರಿತು ಪ್ರಾಥಮಿಕ ಮಾಹಿತಿ ಸಂಗ್ರಹಿಸಿದ್ದಾರೆ. ಸಾರ್ವಜನಿಕರು ಹಿಡಿದುಕೊಟ್ಟ ಸಂಶಯಾಸ್ಪದ ವ್ಯಕ್ತಿಯನ್ನೇ ಪೊಲೀಸರು ಆರೋಪಿ ಎಂದು ಹೇಳಿದ್ದು ಸಾರ್ವಜನಿಕರ ಗೊಂದಲಕ್ಕೆ ಕಾರಣವಾಗಿತ್ತು. ಪ್ರಕರಣದಲ್ಲಿ ಘಟಾನುಘಟಿಗಳು ಭಾಗಿಯಾಗಿರಬಹುದು ಎಂದು ಜನತೆ ಸಂಶಯ ವ್ಯಕ್ತಪಡಿಸಿದ್ದರು. ಅಲ್ಲದೆ ನೈಜ ಆರೋಪಿಯನ್ನು ಪತ್ತೆಹಚ್ಚಲು ಪ್ರಕರಣದ ತನಿಕೆಯನ್ನು ಸಿಒಡಿ ಪೊಲೀಸರಿಗೆ ಒಪ್ಪಿಸಬೇಕೆಂದು ಪ್ರತಿಭಟನೆಗಳೂ […]