ಶ್ರೀಕೃಷ್ಣನ ಗೀತೋಪದೇಶ ಅರ್ಥ ಮಾಡಿಕೊಂಡರೆ ಸಮಸ್ಯೆಗಳಿಗೆ ಉತ್ತರ ಸಿಗುತ್ತದೆ : ರಮಾನಾಥ ರೈ

Monday, August 14th, 2017
Krishna janmashtami

ಮಂಗಳೂರು : ದ.ಕ. ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ  ಜಂಟಿಯಾಗಿ ಸರಕಾರದ ವತಿಯಿಂದ ಶ್ರೀಕೃಷ್ಣ ಜಯಂತಿ ಆಚರಣೆಯನ್ನು ನಗರ ಪುರಭವನದ ಮಿನಿ ಸಭಾಂಗಣದಲ್ಲಿ ಆಚರಿಸಲಾಯಿತು. ಉದ್ಘಾಟನೆ ಬಳಿಕ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ, ಯಾದವ ಸಮುದಾಯದಲ್ಲಿ ಹುಟ್ಟಿ ಜಗತ್ತಿಗೆ ಗೀತೆಯ ಮೂಲಕ ಸಂದೇಶ ನೀಡಿರುವ ಶ್ರೀ ಕೃಷ್ಣ ಸಾಮಾಜಿಕ ನ್ಯಾಯದ ಸಂಕೇತ ಎಂದು ಅಭಿಪ್ರಾಯಿಸಿದ್ದಾರೆ. ಶೋಷಣೆ ಮುಕ್ತ ಸಮಾಜ ನಿರ್ಮಾಣದ ಬಗ್ಗೆ ಎಲ್ಲರೂ ಭಾಷಣ ಮಾಡುತ್ತಾರೆ. ಆದರೆ, ಅನುಷ್ಠಾನಕ್ಕೆ ಹಿಂಜರಿಯುತ್ತಾರೆ, ಶ್ರೀಕೃಷ್ಣನ ಗೀತೋಪದೇಶ […]

ಆಗಸ್ಟ್ 14 ರ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯ ಖರೀದಿಯಲ್ಲಿ ಮಂಗಳೂರು ಮಾರುಕಟ್ಟೆಯಲ್ಲಿ ಜನ ಜಂಗುಳಿ

Sunday, August 13th, 2017
Krishna Janmashtami

ಮಂಗಳೂರು: ಈ ಬಾರಿ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಮತ್ತು ಮೊಸರು ಕುಡಿಕೆ ಸಪ್ಟೆಂಬರ್ ತಿಂಗಳಲ್ಲಿ ನಡೆಯಲಿದೆ. ಆಗಸ್ಟ್ 14 ಆಷಾಡ ಮತ್ತು ಭರಣಿ ನಕ್ಷತ್ರ ಬಂದಿರುವುದರಿಂದ ಕೃಷ್ಣ ಜನ್ಮಾಷ್ಟಮಿ ಶಾಸ್ತ್ರೋಕ್ತವಾಗಿ ಸಪ್ಟೆಂಬರ್ 13 ರಂದು ಶ್ರೀ ಕೃಷ್ಣ ಜನಿಸಿದ ರೋಹಿಣಿ ನಕ್ಷತ್ರದಲ್ಲಿ ಆಚರಿಸಲಾಗುವುದು ಎಂದು ತೀರ್ಮಾನಿಸಲಾಗಿದೆ. ಆದರೆ ಮಂಗಳೂರಿನಲ್ಲಿ ಕೃಷ್ಣ ಜನ್ಮಾಷ್ಟಮಿಯನ್ನು ಎರಡೆರಡು ಭಾರಿ ಆಚರಿಸಲಾಗುತ್ತಿದೆ. ಆಗಸ್ಟ್ 14 ಶ್ರೀ ಕೃಷ್ಣ ಜನ್ಮಾಷ್ಠಮಿ ಆಚರಿಸಲು ಭಾನುವಾರ ಎಲ್ಲೆಡೆ ಜನರು  ಹಬ್ಬಕ್ಕೆ ಬೇಕಾದ ಸಾಮಗ್ರಿ ಖರೀದಿಯಲ್ಲಿ ತೊಡಗಿಕೊಂಡಿದ್ದಾರೆ. ಅದರಲ್ಲಿಯೂ ಮಂಗಳೂರಿನಲ್ಲಿ […]