ಕಾವ್ಯಾಳ ಸಂಶಯಾಸ್ಪದ ಸಾವಿನ ಸಿಐಡಿ ತನಿಖೆಗೆ ಶ್ರೀರಾಮಸೇನೆ ಆಗ್ರಹ

Monday, July 31st, 2017
Sri Rama Sene

ಮಂಗಳೂರು   :  ಸಿಐಡಿ ತನಿಖೆಗೆ ಶ್ರೀರಾಮಸೇನೆ ಆಗ್ರಹ ಕಾವ್ಯಾಳ ಸಂಶಯಾಸ್ಪದ ಸಾವಿನ ಕುರಿತು ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿ ಮತ್ತು ಮೃತ ವಿದ್ಯಾರ್ಥಿನಿಯ ಕುಟುಂಬಕ್ಕೆ ಪರಿಹಾರ ರೂಪದಲ್ಲಿ 25 ಲಕ್ಷ ಪರಿಹಾರ ನೀಡುವಂತೆ ಒತ್ತಾಯಿಸಿ ಶ್ರೀರಾಮ ಸೇನೆ ಶನಿವಾರ ಜಿಲ್ಲಾಧಿಕಾರಿಗೆ ಮನವಿ ನೀಡಿತು. ಜಿಲ್ಲಾಧಿಕಾರಿ ಪರವಾಗಿ ಹೆಚ್ಚುವರಿ ಜಿಲ್ಲಾಧಿಕಾರಿ ಕುಮಾರ್ ಮನವಿ ಸ್ವೀಕರಿಸಿದರು. ಮೃತ ಕಾವ್ಯಾಳ ಕುಟುಂಬದವರಿಗೆ ನ್ಯಾಯ ಸಿಗುವ ಲಕ್ಷಣಗಳು ಕಾಣುತ್ತಿಲ್ಲ. ಆದ್ದರಿಂದ ಪ್ರಕರಣದ ತನಿಖೆಯನ್ನು ಸಿಐಡಿಗೆ ಒಪ್ಪಿಸುವಂತೆ ಹಾಗೂ ಮೃತರ ಕುಟುಂಬಕ್ಕೆ 25 […]

ವಿಧಾನಸಭಾ ಚುನಾವಣೆಗೆ ಕಣಕ್ಕಿಳಿಯಲಿರುವ ಶ್ರೀರಾಮಸೇನೆ ಅಭ್ಯರ್ಥಿಗಳು

Tuesday, April 25th, 2017
pramod Muthalik

ಮಂಗಳೂರು: ಮುಂದಿನ ವಿಧಾನಸಭಾ ಚುನಾವಣೆಗೆ  ಶ್ರೀರಾಮಸೇನೆ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಮೂಲಕ ಸ್ವತಂತ್ರವಾಗಿ ಸ್ಪರ್ಧಿಸಲಿದೆ. ನಾವು ಯಾವುದೇ ಪಕ್ಷಗಳೊಂದಿಗೆ ಮೈತ್ರಿ ಅಥವಾ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಎಲ್ಲೆಲ್ಲಿ ಸಾಧ್ಯವೋ ಅಲ್ಲಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತೇವೆ. ಈ ಕುರಿತು ಅಂತಿಮ ನಿರ್ಧಾರವಾಗಿಲ್ಲ ಎಂದು ಪ್ರಮೋದ್ ಮುತಾಲಿಕ್  ಹೇಳಿದರು. ಹಿಂದೂಗಳ ಮೇಲೆ ದೌರ್ಜನ್ಯ, ಹಿಂದೂ ನಾಯಕರ ಕೊಲೆ ಯತ್ನದ ಸಂಚು ನಡೆಯತ್ತಿದೆ. ಇದರ ಹಿಂದೆ ಪಿಎಫ್ಐ ಇದೆ. ರಾಜ್ಯ ಸರ್ಕಾರ ಪಿಎಫ್ಐ ನಿಷೇಧಿಸುವ ಬದಲು ಪ್ರೋತ್ಸಾಹಿಸುತ್ತಿದೆ. ಹಿಂದೂ ಮುಖಂಡರುಗಳ ಹತ್ಯೆ ಸರ್ಕಾರಿ ಪ್ರಾಯೋಜಕತ್ವದಲ್ಲಿ […]

ಉಗ್ರ ಹೋರಾಟ ಮಾಡಲು ಸಿದ್ಧರಿದ್ದೇವೆ : ಶ್ರೀರಾಮ ಸೇನೆ

Saturday, October 19th, 2013
shri-ram-sena

ಮಂಗಳೂರು: ಸೌಜನ್ಯ ಹತ್ಯೆ ಪ್ರಕರಣವಾಗಿ ಧರ್ಮಸ್ಥಳ ಕ್ಷೇತ್ರ ಮತ್ತು ವೀರೇಂದ್ರ ಹೆಗ್ಗಡೆಯವರ ಬಗ್ಗೆ ಅವಹೇಳನಕಾರಿ ಮಾತುಗಳು ಕೇಳಿಬರುತ್ತಿದೆ. ಇದನ್ನು ಶ್ರೀರಾಮಸೇನೆ ಸಹಿಸುವುದಿಲ್ಲ, ಅದಕ್ಕಾಗಿ ಉಗ್ರ ಹೋರಾಟ ಮಾಡಲು ಸಿದ್ಧರಿದ್ದೇವೆ ಎಂದು ಶ್ರೀರಾಮ ಸೇನೆ ರಾಜ್ಯ ಉಪಾ ಧ್ಯಕ್ಷ ಕುಮಾರ್ ಮಾಲೆಮಾರ್ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಶ್ರೀರಾಮ ಸೇನೆ ರಾಜ್ಯ ಉಪಾಧ್ಯಕ್ಷ ಕುಮಾರ್ ಮಾಲೆಮಾರ್ ಅವರು, ಸೌಜನ್ಯ ಸಾವಿನ ಬಗ್ಗೆ ಮಹೇಶ್ ಶೆಟ್ಟಿ ತಿಮರೋಡಿ ಧ್ವನಿ ಎತ್ತಿದ್ದಾರೆ. ಆದರೆ ಇದನ್ನು ಖಂಡಿಸುವವರು ತುಂಬಾ […]

ಜಿಲ್ಲೆಯಲ್ಲಿನ ಮಾದಕ ವಸ್ತುಗಳ ಮಾರಾಟ ಜಾಲದ ವಿರುಧ್ಹ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಶ್ರೀ ರಾಮ ಸೇನೆ ಆಗ್ರಹ

Wednesday, February 6th, 2013
Sri Rama Sene

ಮಂಗಳೂರು : ಜಿಲ್ಲೆಯಲ್ಲಿ ಮಾದಕ ವಸ್ತುಗಳ ಸಾಗಾಟ ಜಾಲದಿಂದಾಗಿ ಜಿಲ್ಲೆಯಲ್ಲಿನ ಅನೇಕ ಅಮಾಯಕ ವಿಧ್ಯಾರ್ಥಿಗಳು ಈ ಪಿಡುಗಿಗೆ ಬಲಿಯಾಗುತ್ತಿದ್ದರೂ  ಜಿಲ್ಲಾಡಳಿತ ಈ ಜಾಲದ ವಿರುದ್ಧ ಯಾವುದೇ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ, ಜಿಲ್ಲಾಡಳಿತ ಈ ಕೂಡಲೆ ಕ್ರಮ ಕೈಗೊಳ್ಳಬೇಕು ಎಂದು ಶ್ರೀ ರಾಮ ಸೇನೆ ಜಿಲ್ಲಾ ಸಂಚಾಲಕ ಕುಮಾರ್ ಮಾಲೆಮಾರ್ ಒತ್ತಾಯಿಸಿದರು. ಪ್ರೆಸ್ ಕ್ಲಬ್ ನಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಮಾದಕ ವಸ್ತುಗಳ ಮಾರಾಟ ಜಾಲವು ಬೃಹತ್ ಪ್ರಮಾಣದಲ್ಲಿ ಬೆಳೆಯುತ್ತಿದ್ದು, ಈ ಜಾಲಗಳು  ಸ್ಥಳೀಯ ಕಾಲೇಜುಗಳನ್ನು ಕೇಂದ್ರೀಕರಿಸಿ ಕಾರ್ಯಾಚರಿಸುತ್ತಿದೆ. ಈ […]