ಇಮೇಜ್ ಟ್ರಸ್ಟ್ ಮಸೀದಿಗೆ ಉಚ್ಛನ್ಯಾಯಾಲಯ ತಡೆಯಾಜ್ಞೆ

Wednesday, March 9th, 2016
Image Masjid

ಬಂಟ್ವಾಳ : ರಾಷ್ಟ್ರೀಯ ಹೆದ್ದಾರಿ ಬಿ.ಸಿ.ರೋಡಿನ ಮುಖ್ಯ ವೃತ್ತ ಬಳಿ ನಿರ್ಮಾಣ ಹಂತದಲ್ಲಿರುವ ಮೆ! ಇಮೇಜ್ ಟ್ರಸ್ಟ್ ಎಂಬ ಹೆಸರಿನ ಮಸೀದಿಗೆ ರಾಜ್ಯ ಉಚ್ಛನ್ಯಾಯಾಲಯ ತಡೆಯಾಜ್ಞೆ ನೀಡಿ ಆದೇಶಿಸಿದೆ. ಇಲ್ಲಿ ಮಸೀದಿ ನಿರ್ಮಿಸುತ್ತಿರುವ ಬಗ್ಗೆ ಸಾರ್ವಜನಿಕರಿಂದ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಹಿಂದೂ ಜಾಗರಣ ವೇದಿಕೆ ಬಂಟ್ವಾಳ ತಾಲೂಕು ಘಟಕ ದ.ಕ.ಜಿಲ್ಲಾಧಿಕಾರಿ ಅವರ ನ್ಯಾಯಾಲಯದಲ್ಲಿ ದಾವೆ ಹೂಡಿತ್ತು. ಆದರೆ ಜಿಲ್ಲಾಧಿಕಾರಿಯವರ ನ್ಯಾಯಾಲಯ ಇದಕ್ಕೆ ತಡೆಯಾಜ್ಞ್ಲೆ. ಬಳಿಕ ಇವರ ಆದೇಶವನ್ನು ರಾಜ್ಯ ಉಚ್ಛನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿತ್ತು. ಈ ಸಂದರ್ಭದಲ್ಲಿ ರಾಜ್ಯ ಉಚ್ಛನ್ಯಾಯಾಲಯ […]

ರಾಜೀವ್ ಹಂತಕರ ಬಿಡುಗಡೆ: ಮಾಚ್ 26ಕ್ಕೆ ವಿಚಾರಣೆ ಮುಂದೂಡಿಕೆ

Thursday, March 6th, 2014
Rajiv-gandhi

ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಂತಕರ ಬಿಡುಗಡೆ ವಿರೋಧಿಸಿ 1991ರ ಸ್ಫೋಟದಲ್ಲಿ ಮೃತಪಟ್ಟವರ ಕುಟುಂಬ ಸದಸ್ಯರು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಗುರುವಾರ ಮಾರ್ಚ್ 26ಕ್ಕೆ ಮುಂದೂಡಿದೆ. ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಏಳು ಹಂತಕರ ಬಿಡುಗಡೆಗೆ ತಮಿಳುನಾಡಿನ ಮುಖ್ಯಮಂತ್ರಿ ಜಯಲಲಿತಾ ನೇತೃತ್ವದ ಸರ್ಕಾರ ನಿರ್ಧರಿಸಿತ್ತು. ತಮಿಳುನಾತಡು ಸರ್ಕಾರದ ನಿರ್ಧಾರ ಪ್ರಶ್ನಿಸಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು. ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್ ಹಂತಕರ ಬಿಡುಗಡೆಗೆ ತಡೆಯಾಜ್ಞೆ ನೀಡಿತ್ತು. 1991ರ ಸ್ಫೋಟದಲ್ಲಿ […]

ಗಣಿ ಹಗರಣ: ಧರಂ, ಎಚ್‌ಡಿಕೆ ವಿರುದ್ಧ ತನಿಖೆಗೆ ಹಸಿರು ನಿಶಾನೆ

Wednesday, March 5th, 2014
S.M.-Krishna

ನವದೆಹಲಿ: ಅಕ್ರಮ ಗಣಿಗಾರಿಕೆಗೆ ಅನುಮತಿ ನೀಡಿರುವ ಆರೋಪ ಕುರಿತು ಲೋಕಾಯುಕ್ತ ತನಿಖೆ ನಡೆಸಲು ಕರ್ನಾಟಕ ಹೈಕೋರ್ಟ್ ನೀಡಿರುವ ಆದೇಶಕ್ಕೆ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಪ್ರಕರಣಕ್ಕೆ ಸೀಮಿತವಾಗಿ ತಡೆಯಾಜ್ಞೆ ನೀಡಲಾಗಿದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಸ್ಪಷ್ಟಪಡಿಸಿದೆ. ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ, ಧರಂಸಿಂಗ್ ಅವರ ವಿರುದ್ಧ ಇರುವ ಆರೋಪ ಕುರಿತು ಲೋಕಾಯುಕ್ತ ಪೊಲೀಸರು ತಮ್ಮ ತನಿಖೆ ಮುಂದುವರಿಸಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಈ ಪ್ರಕರಣದಲ್ಲಿ ಹೆಸರಿಸಲಾಗಿರುವ ಐವರು ಐಎಎಸ್ ಅಧಿಕಾರಿಗಳ ವಿರುದ್ಧವೂ ತನಿಖೆ ಮುಂದುವರೆಸುವಂತೆ ಸುಪ್ರೀಂ […]

ಸಹಾರಾ ಮುಖ್ಯಸ್ಥ ಸುಬ್ರತಾ ರಾಯ್ ಬಂಧನ

Friday, February 28th, 2014
Subrata-Roy

ನವದೆಹಲಿ: ಸಹಾರಾ ಸಂಸ್ಥೆಯ ಮುಖ್ಯಸ್ಥ ಸುಬ್ರತಾ ರಾಯ್ ಅವರನ್ನು ಲಖನೌ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಕಳೆದ ಬುಧವಾರ ರಾಯ್‌ನನ್ನು ಬಂಧಿಸುವಂತೆ ಸುಪ್ರೀಂ ಕೋರ್ಟ್ ಜಾಮೀನು ರಹಿತ ವಾರಂಟ್ ಜಾರಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಇಂದು ಲಖನೌ ಪೊಲೀಸರನ್ನು ಅವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಹೂಡಿಕೆದಾರರಿಗೆ 20 ಸಾವಿರ ಕೋಟಿ ರುಪಾಯಿ ಮರುಪಾವತಿ ಮಾಡದ ಪ್ರಕರಣ ಸಂಬಂಧ ಕೋರ್ಟ್ ಮುಂದೆ ಹಾಜರಾಗುವಲ್ಲಿ ವಿಫಲರಾಗಿದ್ದ ರಾಯ್‌ನನ್ನು ಬಂಧಿಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿತ್ತು. ರಾಯ್‌ರನ್ನು ಬಂಧಿಸಿ ಮಾರ್ಚ್ 4ರ ಮಧ್ಯಾಹ್ನ 2 ಗಂಟೆಗೆ […]

ನಳಿನಿ ಸೇರಿದಂತೆ 4 ರಾಜೀವ್ ಹಂತಕರ ಬಿಡುಗಡೆಗೆ ಸುಪ್ರೀಂ ತಡೆ

Thursday, February 27th, 2014
Rajeev-Gandhi

ನವದೆಹಲಿ: ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರಿಗೆ ಭಾರಿ ಹಿನ್ನಡೆಯಾಗಿದೆ. ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ನಳಿನಿ ಸೇರಿದಂತೆ ನಾಲ್ವರು ಅಪರಾಧಿಗಳ ಬಿಡುಗಡೆಗೆ ಸುಪ್ರೀಂ ಕೋರ್ಟ್ ಗುರುವಾರ ತಡೆಯಾಜ್ಞೆ ನೀಡಿದೆ. ಈ ಮುಂಚೆ ಪ್ರಕರಣದ ಮೂವರು ಅಪರಾಧಿಗಳ ಬಿಡುಗಡೆಗೆ ತಡೆಯಾಜ್ಞೆ ನೀಡಿದ್ದ ಸುಪ್ರೀಂ ಕೋರ್ಟ್, ಇಂದು ನಳಿನಿ, ರಾಬರ್ಟ್, ಜಯಕುಮಾರ್ ಹಾಗೂ ರವಿಚಂದ್ರನ್   ಬಿಡುಗಡೆಗೂ ತಡೆ ನೀಡಿದೆ. ಪ್ರಕರಣದ ಏಳು ಹಂತಕರ ಬಿಡುಗಡೆ ತಮಿಳುನಾಡು ಸರ್ಕಾರ ನಿರ್ಧರಿಸಿತ್ತು. ತಮಿಳುನಾಡು ಸರ್ಕಾರದ ನಿರ್ಧಾರ […]

ಯೋಧರ ಮತದಾನ ಸುಪ್ರೀಂ ನೋಟಿಸ್

Tuesday, February 25th, 2014
Rajeev-Chandrasekhar

ನವದೆಹಲಿ: ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವವರು ನಿಯೋಜಿತ ಕ್ಷೇತ್ರದಲ್ಲೇ ಮತದಾನ ಮಾಡಲು ಅವಕಾಶ ನೀಡಬೇಕೆಂದು ಕೋರಿ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಅವರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಿರುವ ಸುಪ್ರೀಂ ಕೋರ್ಟ್, ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿದೆ. ನಾಲ್ಕು ವಾರಗಳಲ್ಲಿ ಉತ್ತರಿಸುವಂತೆಯೂ ನ್ಯಾಯಮೂರ್ತಿ ಎ.ಕೆ. ಪಟ್ನಾಯಕ್ ನೇತೃತ್ವದ ನ್ಯಾಯಪೀಠವು  ಸೂಚಿಸಿದೆ. ಮುಂಬರುವ ಚುನಾವಣೆಯಲ್ಲಿ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವವರು ನಿಯೋಜಿತ ಕ್ಷೇತ್ರ ವ್ಯಾಪ್ತಿಯಲ್ಲೇ ಮತದಾನ ಮಾಡಲು ಅವಕಾಶ ನೀಡುವಂತೆ ರಾಜೀವ್ ಚಂದ್ರಶೇಖರ್ ಮನವಿ ಮಾಡಿದ್ದರು. […]

ರಾಜೀವ್ ಹಂತಕರ ಬಿಡುಗಡೆ ಸದ್ಯಕ್ಕಿಲ್ಲ

Friday, February 21st, 2014
P.-Sathasivam

ನವದೆಹಲಿ/ಚೆನ್ನೈ: ಸದ್ಯಕ್ಕೆ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಹಂತಕರಿಗೆ ಬಿಡುಗಡೆ ಭಾಗ್ಯ ಇಲ್ಲ… ತಮಿಳುನಾಡು ಸರ್ಕಾರದ ನಿರ್ಧಾರ ಮತ್ತು ರಾಜೀವ್ ಹಂತಕರ ಗಲ್ಲು ಶಿಕ್ಷೆಯನ್ನು ಜೀವಾವಧಿಗೆ ಇಳಿಕೆ ಮಾಡಿದ ಸುಪ್ರೀಂಕೋರ್ಟ್ ತೀರ್ಪಿನ ವಿರುದ್ಧ ಕೇಂದ್ರ ಸರ್ಕಾರ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿ ಕುರಿತಂತೆ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ತಮಿಳುನಾಡು ಸರ್ಕಾರದ ನಿರ್ಧಾರಕ್ಕೆ ತಡೆ ನೀಡಿದೆ. ‘ಕೈದಿಗಳ ಬಿಡುಗಡೆ ಸಂಬಂಧ ತಮಿಳುನಾಡು ಸರ್ಕಾರ ಸೂಕ್ತ ವಿಧಿ ವಿಧಾನಗಳನ್ನು ಅನುಸರಿಸಿಲ್ಲ. ಹೀಗಾಗಿ ಕೋರ್ಟ್ ಜಯಲಲಿತಾ ಸರ್ಕಾರದ ನಿರ್ಧಾರಕ್ಕೆ ತಡೆ ನೀಡಿದೆ’ […]

ರಾಜೀವ್ ಹಂತಕರ ಬಿಡುಗಡೆ ಏಕೆ?

Thursday, February 20th, 2014
Rahul-Gandhi

ನವದೆಹಲಿ/ಚೆನ್ನೈ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಂತಕರನ್ನು ಮೂರು ದಿನಗಳೊಳಗೆ ಬಿಡುಗಡೆ ಮಾಡುವ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ನಿರ್ಧಾರಕ್ಕೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಕಿಡಿಕಿಡಿಯಾಗಿದ್ದಾರೆ. ಪ್ರಧಾನಮಂತ್ರಿಗಳ ಹಂತಕರನ್ನೇ ಬಿಡುಗಡೆ ಮಾಡಿದರೆ ಇನ್ನು ಜನಸಾಮಾನ್ಯರಿಗೆ ಹೇಗೆ ನ್ಯಾಯ ಸಿಗಲು ಸಾಧ್ಯ? ನಮ್ಮ ದೇಶದಲ್ಲಿ ಪ್ರಧಾನಿಗೂ ನ್ಯಾಯ ಸಿಗುವುದಿಲ್ಲವೇ? ನನ್ನ ತಂದೆಯ ಹಂತಕರಿಗೆ ಗಲ್ಲುಶಿಕ್ಷೆಯಾಗಬೇಕೆಂದು ನಾನೇನು ಆಗ್ರಹಿಸುತ್ತಿಲ್ಲ. ಅದರಿಂದ ನನ್ನ ತಂದೆ ಹಿಂತಿರುಗಿ ಬರುವುದೂ ಇಲ್ಲ. ಇದು ಇಡೀ ದೇಶಕ್ಕೆ ಸಂಬಂಧಪಟ್ಟ ವಿಚಾರ. ತಮಿಳುನಾಡು ಸರ್ಕಾರದ ಈ ನಿರ್ಧಾರದಿಂದ […]

ಕೃಷ್ಣಾ; ಸುಪ್ರೀಂಗೆ ಮೊರೆ

Wednesday, February 19th, 2014
Siddaramaiah

ಬೆಂಗಳೂರುಃ ಕೃಷ್ಣಾ ನದಿ ನೀರು ಹಂಚಿಕೆ ವಿಷಯದಲ್ಲಿ ಕೃಷ್ಣಾ ಜಲವಿವಾದ ನ್ಯಾಯಾಧಿಕರಣ ಮುಂದುವರಿದ ವರದಿಯಲ್ಲಿ ನೀಡಿರುವ ಕೆಲವು ಸ್ಪಷ್ಟೀಕರಣ ಹಾಗೂ ಮಾರ್ಪಾಡುಗಳಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ನಲ್ಲಿ ವಿಶೇಷ ಅನುಮತಿ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ನ್ಯಾಯಾಧಿಕರಣದ ತೀರ್ಪಿನ ನಂತರ ರಾಜ್ಯ ಸರ್ಕಾರ ಕಾನೂನು ಮತ್ತು ತಾಂತ್ರಿಕ ಪರಿಣಿತರೊಂದಿಗೆ ಚರ್ಚೆ ನಡೆಸಿದ ನಂತರ ವಿಶೇಷ ಅನುಮತಿಗೆ ಸುಪ್ರೀಂಕೋರ್ಟ್‌ಗೆ ಹೋಗುವುದು ಸೂಕ್ತ ಎಂಬ ಸಲಹೆ ಬಂದಿದೆ. ಹೀಗಾಗಿ ಅರ್ಜಿ ಸಲ್ಲಿಸಲಾಗುತ್ತಿದೆ ಎಂದು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ತಿಳಿಸಿದರು. ಕೃಷ್ಣಾ […]

ರಾಜೀವ್ ಹಂತಕರಿಗೆ ತಪ್ಪಿತು ಗಲ್ಲು

Wednesday, February 19th, 2014
Rajeev-Gandhi

ನವದೆಹಲಿ: ದಿವಂಗತ ಪ್ರಧಾನಿ ರಾಜೀವ್ ಗಾಂಧಿ ಹಂತಕರ ಗಲ್ಲುಶಿಕ್ಷೆಯನ್ನು ಜೀವಾವಧಿಗಿಳಿಸಿ ಸುಪ್ರೀಂ ಕೋರ್ಟ್ ಮಂಗಳವಾರ ಮಹತ್ವದ ಆದೇಶ ನೀಡಿದೆ. ರಾಜೀವ್ ಹತ್ಯೆಗೈದ ಮೂವರು ಅಪರಾಧಿಗಳ ಕ್ಷಮಾದಾನ ಅರ್ಜಿಇತ್ಯರ್ಥಗೊಳಿಸಲು ಕೇಂದ್ರ ಸರ್ಕಾರ 11 ವರ್ಷ ವಿಳಂಬ ಮಾಡಿದ ಹಿನ್ನೆಲೆಯಲ್ಲಿ ಕೋರ್ಟ್ ಈ ಆದೇಶ ನೀಡಿದೆ.   ಇತ್ತೀಚೆಗಷ್ಟೇ ಸುಪ್ರೀಂ ಕೋರ್ಟ್ ಇದೇ ಕಾರಣ ಹೇಳಿ ನರಹಂತಕ ವೀರಪ್ಪನ್ ಸಹಚರರ ಗಲ್ಲುಶಿಕ್ಷೆಯನ್ನೂ ಜೀವಾವಧಿಗಿಳಿಸಿ ಆದೇಶ ಹೊರಡಿಸಿತ್ತು. ವಿಳಂಬವೇ ಕಾರಣ: ಅಪರಾಧಿಗಳಾದ ಸಂತನ್, ಮುರುಗನ್ ಹಾಗೂ ಪೆರಾರಿವೇಲನ್ ಅವರ ಕ್ಷಮಾದಾನ ಅರ್ಜಿಯ ಇತ್ಯರ್ಥಕ್ಕೆ […]