ಸುರತ್ಕಲ್ ವ್ಯಾಪ್ತಿಯಲ್ಲಿ ದಕ್ಷ ಪೊಲೀಸ್ ಅಧಿಕಾರಿ ಬೇಕು
Tuesday, January 28th, 2014ಮಂಗಳೂರು : ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕುಳಾಯಿ ಪರಿಸರದಲ್ಲಿ ನಿರಂತರವಾಗಿ ನಡೆಯುತ್ತಿರುವ ಕೋಮು ಸಂಬಂಧಿ ಅಹಿತಕರ ಘಟನೆಗಳನ್ನು ತಡೆಗಟ್ಟಲು ಸುರತ್ಕಲ್ ಠಾಣಾಧಿಕಾರಿ ನಟರಾಜ್ ಸಂಪೂರ್ಣ ವಿಫಲರಾಗಿದ್ದಾರೆ. ಕೋಮುಸೂಕ್ಷ್ಮ ಸುರತ್ಕಲ್ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ದಕ್ಷ ಪೊಲೀಸ್ ಅಧಿಕಾರಿಯನ್ನು ತಕ್ಷಣ ನೇಮಿಸಬೇಕು ಎಂದು ಡಿವೈಎಫ್ಐ ದ ಕ ಜಿಲ್ಲಾ ಅಧ್ಯಕ್ಷ ಮುನೀರ್ ಕಾಟಿಪಳ್ಳ ಒತ್ತಾಯಿಸಿದ್ದಾರೆ. ಕ್ರಿಕೆಟ್ ಬೆಟ್ಟಿಂಗ್ ವಿವಾದದಲ್ಲಿ ಕ್ರಿಕೆಟ್ ತಂಡಗಳ ಮಧ್ಯೆ ಆರಂಭವಾದ ಜಗಳ ಇಂದು ಅಮಾಯಕರ ಮೇಲೆ ನಿರಂತರ ಹಲ್ಲೆ, ಉದ್ವಿಗ್ನ ಪರಿಸ್ಥಿತಿಗೆ […]