ತಾಲೂಕು ಕಚೇರಿಯ ಕಂದಾಯ ಇಲಾಖೆಯ ಕೆಲಸಗಳಲ್ಲಿ ವಿಳಂಬ, ಸೂಕ್ತ ಕ್ರಮಕ್ಕೆ ಆಗ್ರಹ
Wednesday, February 8th, 2017ಮಂಗಳೂರು : ಮಂಗಳೂರು ತಾಲೂಕು ಕಚೇರಿಯ ಕಂದಾಯ ಇಲಾಖೆಯ ಕೆಲಸಗಳಲ್ಲಿ ವಿಳಂಬವಾಗುತ್ತಿರುವುದರಿಂದ ಜನಸಾಮಾನ್ಯರಿಗೆ ತೊಂದರೆಯಾಗುತ್ತಿರುವ ಬಗ್ಗೆ ತಾಲೂಕು ಪಂಚಾಯತ್ ಸಭೆಯಲ್ಲಿ ಸದಸ್ಯರು ಅತೃಪ್ತಿ ಮತ್ತು ಆಕ್ರೋಶ ವ್ಯಕ್ತಪಡಿಸಿದರು. ಈ ಬಗ್ಗೆ ಮೇಲಾಧಿಕಾರಿಗಳ ಗಮನಕ್ಕೆ ತಂದು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಅಲ್ಲದೆ ತಹಶೀಲ್ದಾರರ ನೇತೃತ್ವದಲ್ಲಿ ವಿಶೇಷ ಸಭೆ ಕರೆಯುವ ಬಗ್ಗೆ ತೀರ್ಮಾನಿಸಲಾಗುವುದು ಎಂದು ಅಧ್ಯಕ್ಷರು ಸಭೆಗೆ ತಿಳಿಸಿದರು. ಮಂಗಳೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಆರಂಭಗೊಂಡ ತಾಲೂಕು ಪಂಚಾಯತ್ ಸಾಮಾನ್ಯ ಸಭೆಯ ಅಧ್ಯಕ್ಷತೆಯನ್ನು ವಹಿಸಿಕೊಂಡು ಅವರು ಮಾತನಾಡುತ್ತಿದ್ದರು. ಈ ಹಿಂದಿನ […]