ಯೋಧನ ನೆರವಿಗೆ ಮಧ್ಯರಾತ್ರಿ ಧಾವಿಸಿದ ಸಚಿವ ಯು.ಟಿ. ಖಾದರ್

Monday, November 6th, 2017
UT khader

ಮ೦ಗಳೂರು:ಹಾವು ಕಡಿತಕ್ಕೊಳಗಾಗಿ ಚಿಂತಾಜನಕ ಸ್ಥಿತಿಯಲ್ಲಿದ್ದ ಭಾರತೀಯ ಸೇನಾ ಯೋಧನ ನೆರವಿಗೆ ಮಧ್ಯರಾತ್ರಿ ಧಾವಿಸಿ, ತುರ್ತು ಚಿಕಿತ್ಸೆ ಒದಗಿಸುವಲ್ಲಿ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಯು.ಟಿ. ಖಾದರ್ ಯಶಸ್ವಿಯಾಗಿದ್ದಾರೆ. ಭಾನುವಾರ ಮಧ್ಯರಾತ್ರಿ 1.15 ಗಂಟೆಗೆ ಮುಡಿಪು ಕೋಡಕಲ್ಲು ಎಂಬಲ್ಲಿನ ನಿವಾಸಿ ಸಂತೋಷ್ ಕುಮಾರ್ ಎಂಬವರ ತಮ್ಮ ಸಚಿವರ ಮೊಬೈಲ್‌ಗೆ ಕರೆ ಮಾಡಿ ತನ್ನ ಅಣ್ಣ ಸಂತೋಷ್‌ಗೆ ರಾತ್ರಿ ಹಾವು ಕಡಿದಿದ್ದು, ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಿದ್ದು, ಆತನಿಗೆ ೧೦ ಇಂಜಕ್ಷನ್‌ಗಳ ಅಗತ್ಯವಿದೆ ಎಂದು ತಿಳಿಸಿದ್ದರು. ಈ ಸಂದರ್ಭದಲ್ಲಿ […]

‘ಮುಖ್ಯಮಂತ್ರಿ ಅನಿಲ ಭಾಗ್ಯ’ ಯೋಜನೆ ಡಿಸೆಂಬರ್‌ನಿಂದ ಜಾರಿಗೆ :ಯು.ಟಿ. ಖಾದರ್

Tuesday, October 10th, 2017
kadher

ಬೆಂಗಳೂರು: ಬಿಪಿಎಲ್‌ ಕುಟುಂಬಗಳಿಗೆ ಉಚಿತ ಅಡುಗೆ ಅನಿಲ ಸಂಪರ್ಕ, ಸಿಲಿಂಡರ್‌, ಒಲೆ ವಿತರಿಸುವ ‘ಮುಖ್ಯಮಂತ್ರಿ ಅನಿಲ ಭಾಗ್ಯ’ ಯೋಜನೆ ಇದೇ ಡಿಸೆಂಬರ್‌ನಿಂದ ಜಾರಿಗೆ ಬರಲಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ. ಖಾದರ್ ಅವರು ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಖಾದರ್ ಅವರು, ಅಡುಗೆ ಅನಿಲ ಸಂಪರ್ಕ ಹೊಂದದೆ ಇರುವ ಬಿಪಿಎಲ್ ಕುಟುಂಬದವರು ಇದೇ ತಿಂಗಳಿನಿಂದ ಸಂಬಂಧಪಟ್ಟ ಗ್ರಾಮ   ಪಂಚಾಯಿತಿಯಲ್ಲಿ ಅರ್ಜಿ        […]

ಭ್ರಷ್ಟಾಚಾರ ತಡೆಗೆ ಲೋಕಪಾಲ್ ಮಸೂದೆ ಜಾರಿ ಮಾಡಲು ಯು.ಟಿ. ಖಾದರ್‌‌ ಸೂಚನೆ

Thursday, August 3rd, 2017
ut.khader

ಮಂಗಳೂರು : ಸಚಿವ ಡಿ.ಕೆ ಶಿವಕುಮಾರ್ ನಿವಾಸದ ಮೇಲೆ‌ ಐಟಿ ದಾಳಿ ಮಾಡಿ ಕೇಂದ್ರ ಸರ್ಕಾರ ಸೇಡಿನ ರಾಜಕೀಯ ಮಾಡುತ್ತಿದೆ. ರಾಜ್ಯ ಸರ್ಕಾರದ ಜನಪರ ಆಡಳಿತದಿಂದ ಬೇಸತ್ತು ಬ್ಲಾಕ್ ಮೇಲ್ ರಾಜಕೀಯ ಮಾಡ್ತಿದೆ ಎಂದು ಆರೋಪಿಸಿದರು. ಗುಜರಾತ್ ಶಾಸಕರು ರಕ್ಷಣೆಗೋಸ್ಕರ ನಮ್ಮಲ್ಲಿಗೆ ಬಂದಿದ್ದಾರೆ, ಅವರಿಗೆ ಆತಿಥ್ಯ ನೀಡುವುದು ನಮ್ಮ ಕರ್ತವ್ಯ. ಈ ದಾಳಿಯ ಎಲ್ಲಾ ವಿಚಾರವನ್ನು ಸಚಿವ ಡಿಕೆಶಿ ಎದುರಿಸಲು ಸಮರ್ಥರಾಗಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಭ್ರಷ್ಟಾಚಾರ ತಡೆಗೆ ನೈಜ ಕಾಳಜಿ ಇದ್ರೆ ಬಲಿಷ್ಠವಾದ ಲೋಕಪಾಲ್ ಮಸೂದೆ […]

ಮಂಗನಕಾಯಿಲೆ ನಿಯಂತ್ರಣಕ್ಕೆ ಕ್ರಮ : ಸಚಿವ ಯು.ಟಿ.ಖಾದರ್

Tuesday, March 18th, 2014
ut khader

ಶಿವಮೊಗ್ಗ : ಇತ್ತೀಚೆಗೆ ರಾಜ್ಯದ ನಾಲ್ಕಾರು ಜಿಲ್ಲೆಗಳಲ್ಲಿ ಕಂಡುಬಂದಿರುವ ಮಂಗನಕಾಯಿಲೆ ನಿಯಂತ್ರಣಕ್ಕೆ ಅಗತ್ಯಕ್ರಮ ಕೈಗೊಳ್ಳಲಾಗುವುದೆಂದು ಆರೋಗ್ಯ ಸಚಿವ ಯು.ಟಿ.ಖಾದರ್ ಅವರು ಹೇಳಿದರು. ಅವರು ಸೋಮವಾರ ತೀರ್ಥಹಳ್ಳಿಯ ತಾಲೂಕು ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದ ನಂತರ ಮಾಧ್ಯಮಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದರು. ಈ ಕಾಯಿಲೆಯ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಾಗಿದೆ ಎಂದರು. ವಿಶೇಷವಾಗಿ ಈ ಕಾಯಿಲೆಯು ಅರಣ್ಯಗಳಲ್ಲಿ ವಾಸಿಸುವ ವನವಾಸಿಗಳಲ್ಲೇ ಕಂಡುಬರುತ್ತಿರುವುದರಿಂದ ಮಲೆನಾಡಿನ ಅರಣ್ಯ ಪ್ರದೇಶಗಳಲ್ಲಿವಾಸಿಸುವ ಹಾಗೂ ಕಾಯಿಲೆ ಪೀಡಿತರಿಗೆ […]

ರೈತರಿಂದ ಮುತ್ತಿಗೆ : ಸಚಿವ ಯುಟಿ ಖಾದರ್

Tuesday, March 4th, 2014
U.T.-Khadar

ಕೋಲಾರ: ಜಿಲ್ಲಾ ಉಸ್ತುವಾರಿ ಸಚಿವ ಯುಟಿ ಖಾದರ್‌ ಎತ್ತಿನ ಹೊಳೆ ಯೋಜನೆ ವಿರುದ್ಧ ಮಾತನಾಡಿದ ಅವರಿಗೆ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರು  ಮುತ್ತಿಗೆ ಹಾಕಿದ ಘಟನೆ ಮಂಗಳವಾರ ನಡೆದಿದೆ. ಕೋಲಾರ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಗೆ ಜಿಲ್ಲಾ  ಪಂಚಾಯತ್‌ ಕಛೇರಿಗೆ ಆಗಮಿಸುತ್ತಿದ್ದ ಸಚಿವರ ವಿರುದ್ಧ  ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರು  ಕಪ್ಪು ಬಾವುಟ  ಪ್ರದರ್ಶಿಸಿ ಆಕ್ರೋಶ ವ್ಯಕ್ತ ಪಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಖಾದರ್‌ ಅವರು ಎತ್ತಿನಹೊಳೆ ಯೋಜನೆಜಾರಿಗೆ ನನ್ನ ಸಹಮತವಿದೆ,ಯೋಜನೆ […]

ವೆನ್ಲಾಕ್ ಆಸ್ಪತ್ರೆಯಲ್ಲಿ ಜನಸ್ನೇಹಿ ವಾತಾವರಣವಿರಲಿ: ಯು.ಟಿ.ಖಾದರ್

Saturday, June 15th, 2013
UT Khader Visits Lady Ghosen Hospital

ಮಂಗಳೂರು  : ಮಾನ್ಯವಾಗಿ ಜನರು ಸರ್ಕಾರಿ ಶಾಲೆ ಹಾಗೂ ಆಸ್ಪತ್ರೆ ಎಂದರೆ ಅನುಮಾನದಿಂದ ದೂರ ಉಳಿಯುತ್ತಾರೆ. ಆದ್ದರಿಂದ  ಅವರಲ್ಲಿ ವಿಶ್ವಾಸ ತುಂಬುವ, ಪ್ರೀತಿ ಸೌಹಾರ್ದಮಯ ಪರಿಸರ ನಿರ್ಮಾಣದ ಅಗತ್ಯ ಸರ್ಕಾರಿ ವೆನ್ಲಾಕ್ ಆಸ್ಪತ್ರೆಯಲ್ಲಿರಬೇಕೆಂದು ಕರ್ನಾಟಕ ಸರ್ಕಾರದ ಆರೋಗ್ಯ ಸಚಿವರಾದ ಶ್ರೀ ಯು.ಟಿ.ಖಾದರ್ ಅವರು ತಿಳಿಸಿದ್ದಾರೆ. ಅವರು ಇಂದು ವೆನ್ಲಾಕ್ ಆಸ್ಪತ್ರೆಗೆ ಭೇಟಿ ನೀಡಿ, ಡೆಂಗಿ ಹಾಗೂ ಮಲೇರಿಯಾ ರೋಗ ಹರಡದಂತೆ ತೆಗೆದುಕೊಂಡಿರುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಮದನಗೋಪಾಲ ಅವರೊಂದಿಗೆ ಆರೋಗ್ಯ ಇಲಾಖೆ ಅಧಿಕಾರಿಗಳ ಸಭೆ […]

ಕೈಕೊ ಮತ್ತು ಸುಭಾಷ್ನಗರದಲ್ಲಿ ಕಡಲ್ಕೊರೆತ ತಡೆಗೆ ಸೋಮವಾರ ಕೆಲಸ ಆರಂಭಿಸಿ: ಯು ಟಿ ಖಾದರ್

Saturday, June 15th, 2013
Ut khader

ಮಂಗಳೂರು : ಕಡಲ್ಕೊರೆತದಿಂದ ತೀವ್ರವಾಗಿ ಹಾನಿಗೊಂಡಿರುವ ಕೈಕೋ ಸುಭಾಷ್ ನಗರದಲ್ಲಿ ಸೋಮವಾರದಿಂದಲೇ ತಾತ್ಕಾಲಿಕ ಕಾಮಗಾರಿ ಆರಂಭಿಸುವಂತೆ ಆರೋಗ್ಯ ಸಚಿವ ಶ್ರೀ ಯು ಟಿ ಖಾದರ್ ಅವರು ಬಂದರು ಅಧಿಕಾರಿಗಳಿಗೆ ಆದೇಶ ನೀಡಿದರು. ಈ ಸಂಬಂಧ ಇಂದು ಸರ್ಕ್ಯುಟ್  ಹೌಸ್ ನಲ್ಲಿ ನಡೆಸಿದ ಅಧಿಕಾರಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಸುಭಾಷ್ ನಗರ ಹಾಗೂ ಹಿಲರಿ ನಗರದ ತೀವ್ರ ಕೊರತೆವಿರುವ ಪ್ರದೇಶಗಳಲ್ಲಿ ಪ್ರಾಣ ಹಾಗೂ ಆಸ್ತಿಪಾಸ್ತಿ ನಷ್ಟವಾಗದಂತೆ ತಾತ್ಕಾಲಿಕ ತಡೆ ಕಾಮಗಾರಿಯನ್ನು ತಕ್ಷಣವೇ ಆರಂಭಿಸಬೇಕೆಂದು ಸೂಚಿಸಿದ ಅವರು, ನಿಯಮಗಳನ್ನು ಜನರಿಗೋಸ್ಕರ ಸಡಿಲಗೊಳಿಸಿ […]

ಹಿರಿಯ ನಾಯಕರ ಸಲಹೆ ಮೇರೆಗೆ ಜಿಲ್ಲೆಯ ಅಭಿವೃದ್ಧಿಗೆ ಶಕ್ತಿಮೀರಿ ಪ್ರಯತ್ನಿಸಲಾಗುವುದು : ಯು.ಟಿ.ಖಾದರ್

Monday, May 20th, 2013
UT Khader

ಮಂಗಳವಾರ : ಭಾನುವಾರ ಬೆಳಗ್ಗೆ ಬೆಂಗಳೂರಿನಿಂದ ಬಜ್ಪೆ ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಜ್ಯ ಸರ್ಕಾರದ ನೂತನ ಸಚಿವ ಯು.ಟಿ.ಖಾದರ್ ರವರನ್ನು ಪಕ್ಷದ ಮುಖಂಡರು, ಅಪಾರ ಸಂಖ್ಯೆಯಲ್ಲಿ ನೆರೆದ ಕಾರ್ಯಕರ್ತರು ಹೂ ಗುಚ್ಚ ನೀಡಿ ಸ್ವಾಗತಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಮೇಲೆ ನಂಬಿಕೆ ಇಟ್ಟು ಸಚಿವ ಸ್ಥಾನದ ಜವಾಬ್ದಾರಿಯನ್ನು ನೀಡಿದ್ದು, ಈ ಹುದ್ದೆಯನ್ನು ಸಮರ್ಪಕವಾಗಿ ಮತ್ತು ಪ್ರಾಮಾಣಿಕನಾಗಿ ನಿರ್ವಹಿಸುವುದಾಗಿ ಅವರು ಹೇಳಿದರು. ಜೊತೆಗೆ ಹಿರಿಯ ನಾಯಕರ ಸಲಹೆ ಪಡೆದು ಜಿಲ್ಲೆಯ ಅಭಿವೃದ್ಧಿಗೆ ಶಕ್ತಿಮೀರಿ […]