ವಾಜಪೇಯಿ ಆರೋಗ್ಯ ಶ್ರೀ ಯೋಜನೆ ಅತ್ಯಂತ ಪ್ರಮುಖವಾದುದುಃ ಯು.ಟಿ.ಖಾದರ್

Friday, September 13th, 2013
Vajapeyee Arogya Sree

ಮಂಗಳೂರು : ವಾಜಪೇಯಿ ಆರೋಗ್ಯ ಶ್ರೀ ಯೋಜನೆ ಅತ್ಯಂತ ಪ್ರಮುಖವಾದ ಹಾಗೂ ಮಹತ್ವದ ಯೋಜನೆಗಳಲ್ಲಿ ಒಂದಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ಶುಕ್ರವಾರ ನಗರದ ಐ.ಎಂ.ಎ ಸಭಾಭವನದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದರು. ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಡಿಯಲ್ಲಿ ಸಾರ್ವಜನಿಕ ಆರೋಗ್ಯ ಸೇವೆಗಾಗಿ ಹಲವಾರು ಯೋಜನೆಗಳನ್ನು ಅನುಷ್ಟಾನಗೊಳಿಸಲಾಗುತ್ತಿದೆ, ಈ ಯೋಜನೆಯ ಮುಖ್ಯ ಉದ್ದೇಶವೆಂದರೆ ದುಬಾರಿ ವೆಚ್ಚದ ಮಾರಣಾಂತಿಕ ಕಾಯಿಲೆಗಳಾದ ಹೃದ್ರೋಗ, ಕ್ಯಾನ್ಸರ್, ನರರೋಗ ಮೂತ್ರಪಿಂಡದ ಕಾಯಿಲೆ ಮುಂತಾದ ಗಂಭೀರ ಸ್ವರೂಪದ ಆಘಾತಕಾರಿ ಕಾಯಿಲೆಗಳಿಂದ […]