ತೌಡುಗೋಳಿ ಕ್ಷೇತ್ರದಲ್ಲಿ : ವನಮಹೋತ್ಸವ – ಜೀರ್ಣೋದ್ದಾರ ಸಭೆ

Tuesday, June 16th, 2015
Vana Mahotsava

ತೌಡುಗೋಳಿ : ವನಮಹೋತ್ಸವ ಆಚರಣೆ ಕಾಟಾಚಾರಕ್ಕೆ ಮಾತ್ರ ಆಗಬಾರದು. ರಸ್ತೆ ಬದಿಯಲ್ಲಿ ಗಿಡಗಳನ್ನು ನೆಟ್ಟು ಅಗಲೀಕರಣ ಮಾಡುವಾಗ ಮರ ಕಡಿಯುವುದು ವನ ಮಹೋತ್ಸವ ಅಲ್ಲ ಎಂದು ರಾಜ್ಯ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಹಾಗೂ ತೌಡುಗೋಳಿ ಶ್ರೀ ದುರ್ಗಾದೇವಿ ಕ್ಷೇತ್ರ ಹಾಗೂ ಅಯ್ಯಪ್ಪ ಸ್ವಾಮಿ ಮಂದಿರಗಳ ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು ಹೇಳಿದರು. ಅವರು ಶ್ರೀ ದುರ್ಗಾದೇವಿ ಕ್ಷೇತ್ರ ಹಾಗೂ ಅಯ್ಯಪ್ಪ ಸ್ವಾಮಿ ಮಂದಿರಗಳ ವತಿಯಿಂದ ಭಾನುವಾರ(ಜೂನ್14)ರಂದು ನಡೆದ ಸಾರ್ವಜನಿಕ ಸಸಿ ವಿತರಣೆ, […]

ಪತ್ರಕರ್ತರ ಸಂಘದಿಂದ ವನಮಹೋತ್ಸವ, ಹಸಿರು ಮಂಗಳೂರು ಯೋಜನೆಗೆ ಚಾಲನೆ – ಮೇಯರ್

Friday, July 25th, 2014
vanamahotsava

ಮಂಗಳೂರು : ಮಂಗಳೂರು ನಗರದಲ್ಲಿ ಕಾಂಕ್ರೀಟೀಕರಣದ ಜತೆ ಹಸುರೀಕರಣ ಕೂಡಾ ಅವಶ್ಯವಾಗಿದೆ. ಈ ನಿಟ್ಟಿನಲ್ಲಿ ಪಾಲಿಕೆ ಆಡಳಿತ `ಹಸಿರು ಮಂಗಳೂರು’ ಯೋಜನೆ ಹಮ್ಮಿಕೊಂಡಿದೆ ಎಂದು ಮೇಯರ್ ಮಹಾಬಲ ಮಾರ್ಲ ಹೇಳಿದರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರೆಸ್ ಕ್ಲಬ್ ಮತ್ತು ಅರಣ್ಯ ಇಲಾಖೆ ಮಂಗಳೂರು ವಿಭಾಗದ ಸಂಯುಕ್ತ ಆಶ್ರಯದಲ್ಲಿ ನಗರದ ಲೇಡಿಹಿಲ್ ನ ಪತ್ರಿಕಾ ಭವನದ ಮುಂಭಾಗದಲ್ಲಿ ಶುಕ್ರವಾರ ನಡೆದ ವನಮಹೋತ್ಸವಕ್ಕೆ ಅವರು ಚಾಲನೆ ನೀಡಿದರು. ಪಾಕರ್್ ಮತ್ತು ಮೈದಾನಗಳ ಅಭಿವೃದ್ದಿಗಾಗಿ ಪಾಲಿಕೆಯಲ್ಲಿ ಪ್ರತ್ಯೇಕ ನಿಧಿ […]

ಪತ್ರಕರ್ತರ ಸಂಘ ಮತ್ತು ಅರಣ್ಯ ಸಂರಕ್ಷಣಾ ಇಲಾಖೆ ಕದ್ರಿ ಪಾರ್ಕ್ ನಲ್ಲಿ ವನಮಹೋತ್ಸವ

Saturday, August 3rd, 2013
vanamahostava

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಂಘ ಮತ್ತು ಮಂಗಳೂರು ಅರಣ್ಯ ಸಂರಕ್ಷಣಾ ಇಲಾಖೆ ವತಿಯಿಂದ ನಗರದಕದ್ರಿ ಪಾರ್ಕ್ ನಲ್ಲಿ ಆಗಸ್ಟ್2 ರಂದು ಗಿಡ ನೆಡುವುದರ ಮೂಲಕ ವನಮಹೋತ್ಸವ ಆಚರಿಸಲಾಯಿತು. ಉಸ್ತುವಾರಿ ಸಚಿವ ಬಿ.ರಮಾನಾಥ ರೈಯವರು ಗಿಡನೆಟ್ಟು ನೀರೆರೆಯುವ ಮೂಲಕ ವನಮಹೋತ್ಸವಕ್ಕೆ ಚಾಲನೆ ನೀಡಿದರು. ಬಳಿಕ ಮಾತಾಡಿ ಲಕ್ಷವೃಕ್ಷ ಅಭಿಯಾನ ನಾಳೆಯಿಂದ ಪ್ರಾರಂಭವಾಗಲಿದ್ದು, ಮಂಗಳೂರಿನಲ್ಲಿ ನಾಳೆ ಚಾಲನೆ ನೀಡಲಾಗುವುದು. ಇದು ರಾಷ್ಟೀಯ ಮಟ್ಟದ ಕಾರ್ಯಕ್ರಮವಾಗಿರದೆ ಅಂತರಾಷ್ಟೀಯ ಮಟ್ಟದ ಕಾರ್ಯಕ್ರಮವಾಗಬೇಕಾಗಿದೆ.  ಪರಿಸರ ಸಂರಕ್ಷಣಾ ಕಾರ್ಯದಲ್ಲಿ ಸ್ವಯಂ ಸೇವಾ ಸಂಘದವರು ಜೊತೆಗೂಡಿ ಕೆಲಸ ಮಾಡಬೇಕಾಗಿದೆ. […]