‘ನಾಡಿಗೆ ನಮಸ್ಕಾರ’ ಗ್ರಂಥಮಾಲೆಯ ನೂತನ ಹೊತ್ತಗೆಗಳ ಅನಾವರಣ ಕಾರ್ಯಕ್ರಮ

Friday, November 3rd, 2017
nadige namaskara

ಮಂಗಳೂರು: ಕಾಂತಾವರ ಕನ್ನಡ ಸಂಘದಲ್ಲಿ ಕಾಂತಾವರ ಉತ್ಸವದ ಅಂಗವಾಗಿ ಗುರುವಾರ ನಡೆದ ‘ನಾಡಿಗೆ ನಮಸ್ಕಾರ’ ಗ್ರಂಥಮಾಲೆಯ ನೂತನ ಹೊತ್ತಗೆಗಳ ಅನಾವರಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಸಂಸದ ಎಂ. ವೀರಪ್ಪ ಮೊಯಿಲಿ ಮಾತನಾಡಿದರು. ಕನ್ನಡ ಭಾಷೆಗೆ ಶಾಸ್ತ್ರೀಯ ಸ್ಥಾನಮಾನ ಸಿಕ್ಕಿದರೂ ನಂತರದ ದಿನಗಳಲ್ಲಿ ಕನ್ನಡ ಸಾಹಿತಿಗಳು, ಕನ್ನಡಪರ ಸಂಘಟನೆಗಳು, ರಾಜ್ಯ ಸರ್ಕಾರ ತೋರಿದ ಸ್ಪಂದನೆ ಸಾಲುತ್ತಿಲ್ಲ. ಹೀಗಾಗಿ ನಮ್ಮ ಭಾಷೆಗೆ ಸಿಕ್ಕ ಶಾಸ್ತ್ರೀಯ ಸ್ಥಾನಮಾನದ ಲಾಭ ಪಡೆಯಲು ನಾವು ಹಿಂದೆ ಬಿದ್ದಿದ್ದೇವೆ ಎಂದು ಸಂಸದ ಎಂ. ವೀರಪ್ಪ ಮೊಯಿಲಿ ಹೇಳಿದರು. […]

ವಸಾಹತುಶಾಹಿ ಆಡಳಿತ ಕಾಲದ ವಿಶ್ವವಿದ್ಯಾನಿಲಯ ಕಾಲೇಜಿನ 149 ವರ್ಷಗಳ ಸಾರ್ಥಕ ಸೇವೆ

Thursday, October 12th, 2017
university collage

ಮಂಗಳೂರು: ವಸಾಹತುಶಾಹಿ ಆಡಳಿತ ಕಾಲದಲ್ಲಿ (1860ರಲ್ಲಿ) ಮಂಗಳೂರಿನ ನಾಗರಿಕರ ದೂರದೃಷ್ಟಿ, ಸಮಾಜಮುಖಿ ಚಿಂತನೆಯ ಫಲವಾಗಿ ಅಸ್ತಿತ್ವಕ್ಕೆ ಬಂದ ಅಂದಿನ ಸರಕಾರಿ ಕಾಲೇಜು ಈ ಸೆಪ್ಟೆಂಬರ್‌ಗೆ 149 ವರ್ಷಗಳ ಸಾರ್ಥಕ ಸೇವೆಯನ್ನು ಪೂರ್ಣಗೊಳಿಸಿದೆ. ವಿಶ್ವವಿದ್ಯಾನಿಲಯ ಕಾಲೇಜಿಗೆ 150ರ ಸಂಭ್ರಮ. ಡಾ. ಶಿವರಾಮ ಕಾರಂತ, ಡಾ. ಎಂ.ವೀರಪ್ಪ ಮೊಯ್ಲಿ, ಡಾ. ಮನಮೋಹನ್ ಅತ್ತಾವರ, ಮಂಜೇಶ್ವರ ಗೋವಿಂದ ಪೈ, ಎ.ಬಿ.ಶೆಟ್ಟಿ, ಯು.ಪಿ.ಮಲ್ಯ, ವೈಕುಂಠ ಬಾಳಿಗ, ಕಮಲಾದೇವಿ ಚಟ್ಟೋಪಾಧ್ಯಾಯ, ಬಿ.ರಮಾನಾಥ ರೈ, ವಿಜಯಕುಮಾರ್ ಶೆಟ್ಟಿ, ಪಿ.ಎಂ.ಸಯೀದ್, ವಿನಯಕುಮಾರ್ ಸೊರಕೆ, ಡಿ.ಕೆ.ಚೌಟ… ಹೀಗೆ ಪಟ್ಟಿ ಬೆಳೆಯುತ್ತಲೇ […]

ಮಂಜೇಶ್ವರ ಗೋವಿಂದ ಪೈ ಸ್ಮಾರಕಕ್ಕೆ ವೀರಪ್ಪ ಮೊಯಿಲಿ ಭೇಟಿ

Tuesday, January 19th, 2016
veerappa Moily

ಮಂಜೇಶ್ವರ: ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ಸ್ಮಾರಕಕ್ಕೆ ಮಾಜಿ ಕೇಂದ್ರ ಸಚಿವ ಎಂ.ವೀರಪ್ಪ ಮೊಯಿಲಿ ಭಾನುವಾರ ಭೇಟಿ ನೀಡಿ ಕಾಮಗಾರಿಯನ್ನು ವೀಕ್ಷಿಸಿದರು. ಬಳಿಕ ಗೋವಿಂದ ಪೈ ನಿವಾಸದಲ್ಲಿ ನಡೆದ ಸಭೆಯಲ್ಲಿ ಸ್ಮಾರಕದ ಉದ್ಘಾಟನಾ ದಿನವನ್ನು ನಿಶದಚಯಿಸಲಾಯಿತು. ಫೆ.28 ರಂದು ಲೋಕಾರ್ಪಣೆಗೊಳ್ಳಲಿರುವ ಸ್ಮಾರಕದ ಅಂತಿಮ ಕಾಮಗಾರಿಯನ್ನು ಶೀಘ್ರದಲ್ಲಿ ಪೂರ್ತಿಗೊಳಿಸಲು ನಿರ್ಮಿತಿ ಕೇಂದ್ರದವರಲ್ಲಿ ಕೇಳಿಕೊಳ್ಳಲಾಯಿತು. ಸಭೆಯಲ್ಲಿ ಗೋವಿಂದ ಪೈ ಸ್ಮಾರಕ ಟ್ರಸ್ಟ್ ಅಧ್ಯಕ್ಷ ವೀರಪ್ಪ ಮೊಯಿಲಿ,ಕಾಸರಗೋಡು ಜಿಲ್ಲಾಧಿಕಾರಿ ಮುಹಮ್ಮದ್ ಸಗೀರ್,ಟ್ರಸ್ಟ್ ಸದಸ್ಯರಾದ ಡಾ.ಡಿ.ಕೆ.ಚೌಟ,ಪ್ರೊ.ಬಿ.ವಿವೇಕ ರೈ,ಡಾ.ರಮಾನಂದ ಬನಾರಿ,ತೇಜೋಮಯ,ಎಂ.ಜೆ.ಕಿಣಿ,ಸುಭಾಶ್ಚಂದ್ರ,ಕೆ.ಆರ್ ಜಯಾನಂದ ಉಪಸ್ಥಿತರಿದ್ದರು.

ಮೊಯ್ಲಿ, ದಿಯೋರಾ, ಅಂಬಾನಿ ವಿರುದ್ಧ ಎಫ್‌ಐಆರ್‌ಗೆ ಸೂಚನೆ

Tuesday, February 11th, 2014
Arvind-Kejriwal

ನವದೆಹಲಿ: ಮುರಳಿ ದಿಯೋರಾ, ವೀರಪ್ಪ ಮೊಯ್ಲಿ, ವಿ.ಕೆ ಸಿಬಲ್ , ಮುಖೇಶ್ ಅಂಬಾನಿ ಮತ್ತು ರಿಲಾಯನ್ಸ್ ಇಂಡಸ್ಟ್ರೀಸ್ ವಿರುದ್ಧ ಎಫ್‌ಐಆರ್ ದಾಖಲಿಸಲು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಭ್ರಷ್ಟಾಚಾರ ನಿಗ್ರಹ ದಳಕ್ಕೆ ಸೂಚನೆ ನೀಡಿದ್ದಾರೆ. ಮಂಗಳವಾರ ದೆಹಲಿಯಲ್ಲಿ ಸುದ್ದಿಗೋಷ್ಠಿನ್ನುದ್ದೇಶಿಸಿ ಮಾತನಾಡಿದ ಅರವಿಂದ್ ಕೇಜ್ರಿವಾಲ್ ಅನಿಲ ಬೆಲೆ ಹೆಚ್ಚಳ ರಿಲಾಯನ್ಸ್ ಕಂಪನಿಯೇ ಕಾರಣ ಎಂದು ಹೇಳಿದ್ದಾರೆ. ರಿಲಾಯನ್ಸ್ ಕಂಪನಿ ಅನಿಲ ಬಾವಿ ಗುತ್ತಿಗೆಯ ವಿಚಾರದಲ್ಲಿ ಕೇಂದ್ರ ಗೋಲ್‌ಮಾಲ್ ನಡೆಸಿದೆ ಹಾಗು ರಿಲಾಯನ್ಸ್ ಕಂಪನಿ ದೇಶದಲ್ಲಿ ಅನಿಲವನ್ನು ಕೃತಕ ಸಂಗ್ರಹದಲ್ಲಿರಿಸಿದೆ […]

ರಾಜ್ಯ ಸರಕಾರ ಬರಪೀಡಿತ ಪ್ರದೇಶಗಳಿಗೆ ಅಗತ್ಯ ಕಾರ್ಯಕ್ರಮಗಳನ್ನು ರೂಪಿಸಿಲ್ಲ : ಮೊಯ್ಲಿ

Monday, April 16th, 2012
Veerappa Moily

ಮಂಗಳೂರು : ಕೇಂದ್ರ ಕಾರ್ಪೊರೇಟ್‌ ವ್ಯವಹಾರಗಳ ಖಾತೆ ಸಚಿವ ಡಾ| ಎಂ. ವೀರಪ್ಪ ಮೊಲಿ ಅವರು ಭಾನುವಾರ ಮಂಗಳೂರಿನಲ್ಲಿ ವಿಶ್ವ ದೇವಾಡಿಗ ಸಮಾಜದ  ಸಭೆಯಲ್ಲಿ ಪತ್ರಕರ್ತರ ಪಶ್ನೆಗಳಿಗೆ ಉತ್ತರಿಸಿ ರಾಜ್ಯದ 123 ತಾಲೂಕುಗಳು ಬರಪೀಡಿತವಾಗಿವೆ ಎಂದು ಮೂರು ತಿಂಗಳ ಹಿಂದೆ ಸರಕಾರ ಗುರುತಿಸಿದ್ದು, ಬಳಿಕ ಪರಿಸ್ಥಿತಿ ನಿಬಾಯಿಸಲು ಯಾವುದೇ ಅಗತ್ಯ ಕಾರ್ಯಕ್ರಮಗಳನ್ನು ರೂಪಿಸಲಿಲ್ಲ. ಮುಖ್ಯಮಂತ್ರಿ ಬದಲಾವಣೆ ವಿಚಾರ ಸಂಬಂಧಿಸಿ ರಾಜ್ಯದಲ್ಲಿ ಅಧಿಕಾರ ನಡೆಸುತ್ತಿದ್ದವರು ಅವರದೇ ತಾಪತ್ರಯ, ಅಂತಃಕಲಹಗಳಲ್ಲಿ ಮುಳುಗಿದ್ದರು. ವಿಷಯ ತಿಳಿದು ರಾಜ್ಯಕ್ಕೆ ಭೇಟಿ ನೀಡಿದ ಕೇಂದ್ರದ […]

ಕಳಂಕಿತ ಸದಸ್ಯರನ್ನು ಕೂಡಲೇ ಆಮಾನತುಗೊಳಿಸಿ : ವೀರಪ್ಪ ಮೊಯಿಲಿ

Thursday, February 9th, 2012
veerappa moily

ಮಂಗಳೂರು: ಕೇಂದ್ರ ಕಾರ್ಪೊರೇಟ್‌ ವ್ಯವಹಾರಗಳ ಸಚಿವ ಡಾ| ಎಂ. ವೀರಪ್ಪ ಮೊಯಿಲಿ ಅವರು ವಿಧಾನಸಭೆಯಲ್ಲಿ ಬ್ಲೂಫಿಲ್ಮ್ ವೀಕ್ಷಿಸಿದ ಸದಸ್ಯರನ್ನು ಆಮಾನತುಗೊಳಿಸಬೇಕು ಹಾಗೂ ಸೈಬರ್‌ ಕಾನೂನು ಉಲ್ಲಂಘನೆ ಪ್ರಕರಣದಲ್ಲಿ ಕೂಡಲೇ ಬಂಧಿಸಿ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಈ ವಿಷಯದ ಕುರಿತು ಬುಧವಾರ ಮಂಗಳೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ತತ್‌ಕ್ಷಣ ಕ್ರಮಕೈಗೊಳ್ಳಲು ಬಿಜೆಪಿ ನಿರಾಕರಿಸುತ್ತಿರುವುದು ಮತ್ತು ಅವರ ಬೆಂಬಲಕ್ಕೆ ನಿಂತಿರುವುದು ದುರದೃಷ್ಟಕರ ಎಂದು ಹೇಳಿದರು. ಈ ಘಟನೆ ಖಂಡನೀಯ. ಸದನದ ಪಾವಿತ್ರ್ಯವನ್ನು ಕಾಪಾಡಬೇಕಾದ ಜನಪ್ರತಿನಿಧಿಗಳು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾಡಿರುವ ಅಪಚಾರ. ಸಾರ್ವಜನಿಕ ಜೀವನದಲ್ಲಿ […]