ರೈತ ಸಂಘ ಒಕ್ಕೂಟದ ವತಿಯಿಂದ ಪ್ರತಿಭಟನೆ
Thursday, December 5th, 2013ಮಂಗಳೂರು: ದಕ್ಷಿಣ ಭಾರತ ರೈತ ಸಂಘ ಒಕ್ಕೂಟದ ವತಿಯಿಂದ ಇಂಡೋನೇಷ್ಯಾದ ಬಾಲಿಯಲ್ಲಿ ನಡೆಯಲಿರುವ 33 ರಾಷ್ಟ್ರಗಳ 9ನೇ ಶೃಂಗಸಭೆಯಿಂದ ಭಾರತದ ಪ್ರತಿನಿಧಿಗಳು ಹೊರನಡೆಯಬೇಕು ಮತ್ತು ರೈತರ ಹಿತಾಸಕ್ತಿಯನ್ನು ಬಲಿಕೊಡುವ ಒಪ್ಪಂದಗಳಿಗೆ ಸಹಿ ಹಾಕಬಾರದು ಎಂದು ಆಗ್ರಹಿಸಿ ಮಂಗಳವಾರ ನವಮಂಗಳೂರು ಬಂದರು ಮಂಡಳಿ ಮುಂದೆ ಪ್ರತಿಭಟನೆ ನಡೆಯಿತು. ತಮಿಳುನಾಡು, ಮಹಾರಾಷ್ಟ್ರ, ಆಂಧ್ರಪ್ರದೇಶ ಮತ್ತು ಕೇರಳ ರಾಜ್ಯ ರೈತ ಪ್ರತಿನಿಧಿಗಳು ಹಾಗೂ ರಾಜ್ಯದ ಮಂಡ್ಯ, ತುಮಕೂರು, ಕೊಡಗು ಗಡಿಭಾಗದ ರೈತರು ಪ್ರತಿಭಟನೆಯಲ್ಲಿ ಭಾಗವಹಿಸಿ, ದೇಶದ ಅಭಿವೃದ್ಧಿಯ ದೃಷ್ಟಿಯಿಂದ ಜಿ 33 […]