ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ನಾಮಪತ್ರ ಸಲ್ಲಿಕೆ
Thursday, April 4th, 2024ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಗುರುವಾರ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೆ ಮುನ್ನ ಸಮೀಪದ ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು. ಬಂಟ್ಸ್ ಹಾಸ್ಟೆಲ್ ಪಕ್ಕದ ಬಿಜೆಪಿ ಚುನಾವಣಾ ಪ್ರಚಾರ ಸಮಿತಿ ಕಚೇರಿಯಿಂದ ತೆರೆದ ವಾಹನದಲ್ಲಿ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದರು. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಮುಲ್ಲೈ ಮುಗಿಲನ್ ಅವರು ನಾಮಪತ್ರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಬಿಜೆಪಿ ಜಿಲ್ಲಾಧ್ಯಕ್ಷ […]