ಬೆಳ್ತಂಗಡಿ : ಚಾರ್ಮಾಡಿ-ಉಜಿರೆ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮದ ಸೀಟ್ ಕಾಡ್ ಎಂಬಲ್ಲಿ ಗುರುವಾರ ಬೆಳಗಿನ ಜಾವ ಎರಡು ಕಾರುಗಳ ನಡುವೆ ಭೀಕರ ಮುಖಾಮುಖಿ ಸಂಘರ್ಷ ನಡೆದಿದೆ. ಘಟನೆಯ ತೀವ್ರತೆಗೆ ಎರಡೂ ವಾಹನಗಳು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಒಟ್ಟು ಆರು ಮಂದಿ ಗಾಯಗೊಂಡಿದ್ದಾರೆ.
ಅಪಘಾತದಲ್ಲಿ ಗಾಯಗೊಂಡವರನ್ನು ಮಂಗಳೂರಿನ ಕಾವೂರು ನಿವಾಸಿಗಳಾದ ಕೊಟ್ರೆಗೌಡ (55), ಗೌರಮ್ಮ (49), ವಿನಿತಾ (22) ಹಾಗೂ ಯಾದಗಿರಿ ಜಿಲ್ಲೆಯ ಸುರಪುರ ಮೂಲದ ಭೀಮಣ್ಣ (65), ಶ್ರೀನಿವಾಸ (32) ಮತ್ತು ಶಶಿಧರ (33) ಎಂದು ಗುರುತಿಸಲಾಗಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದು, ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ದುರ್ಘಟನೆ ಸಂಭವಿಸಿದ ತಕ್ಷಣ ಸಕ್ರಿಯರಾದ ಸ್ಥಳೀಯ ನಿವಾಸಿಗಳು ತಕ್ಷಣವೇ ರಕ್ಷಣಾ ಕಾರ್ಯ ಕೈಗೊಂಡು, ಗಾಯಾಳುಗಳನ್ನು ಕಾರಿನಿಂದ ಹೊರತೆಗೆದು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು










