ಕುಂದಾಪುರ : ಬೆಂಗಳೂರಿನ ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿಗೆ (ಕೆ.ಎಸ್.ಬಿ.ಸಿ) ನಡೆದ ಚುನಾವಣೆಯಲ್ಲಿ ಕುಂದಾಪುರದ ಹಿರಿಯ ನ್ಯಾಯವಾದಿ ಶ್ಯಾಮಲಾ ಭಂಡಾರಿ ಅವರು ಅದ್ಭುತ ಜಯ ದಾಖಲಿಸಿದ್ದಾರೆ. ಈ ಐತಿಹಾಸಿಕ ಗೆಲುವಿನ ಮೂಲಕ ಅವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿಯ ಇತಿಹಾಸದಲ್ಲೇ ರಾಜ್ಯ ವಕೀಲರ ಪರಿಷತ್ತಿಗೆ ಆಯ್ಕೆಯಾದ ಪ್ರಥಮ ಮಹಿಳಾ ಪ್ರತಿನಿಧಿ ಎಂಬ ಹೆಗ್ಗಳಿಕೆಗೆ ಇವರು ಪಾತ್ರರಾಗಿದ್ದಾರೆ.
ದೀರ್ಘ ಕಾಲದಿಂದ ಕಾನೂನು ಕ್ಷೇತ್ರದಲ್ಲಿ ಸಕ್ರಿಯರಾಗಿರುವ ಶ್ಯಾಮಲಾ ಭಂಡಾರಿ ಅವರು ಶೈಕ್ಷಣಿಕ, ಸಾಮಾಜಿಕ ಹಾಗೂ ಕಾನೂನು ವಲಯಗಳಲ್ಲಿ ವಿಶಿಷ್ಟ ಕೊಡುಗೆ ನೀಡಿದ್ದಾರೆ. ವಿವಿಧ ಪ್ರಗತಿಪರ ಸಾಮಾಜಿಕ ಹೋರಾಟಗಳ ಮುಂಚೂಣಿಯಲ್ಲಿ ಗುರುತಿಸಿಕೊಂಡಿರುವ ಇವರು, ಮಹಿಳಾ ಸಬಲೀಕರಣ ಮತ್ತು ರಾಜಕೀಯ ರಂಗದಲ್ಲೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಪ್ರಸ್ತುತ ಕರ್ನಾಟಕ ರಾಜ್ಯ ನೋಟರಿ ವಕೀಲರ ಸಂಘದ ರಾಜ್ಯಾಧ್ಯಕ್ಷರಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿರುವ ಇವರು, ಹಲವು ಪ್ರಮುಖ ಸಂಘ-ಸಂಸ್ಥೆಗಳನ್ನು ಮುನ್ನಡೆಸುತ್ತಾ ಸಮಾಜಮುಖಿ ಚಟುವಟಿಕೆಗಳಲ್ಲಿ ಸದಾ ನಿರತರಾಗಿದ್ದಾರೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು










