ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸದ್ಯ ನಡೆಯುತ್ತಿರುವ ಎನ್ಐಆರ್ ಪ್ರಕ್ರಿಯೆಯನ್ನು ಯಶಸ್ವಿಗೊಳಿಸಲು ಸಾರ್ವಜನಿಕರ ಸಕ್ರಿಯ ಸಹಭಾಗಿತ್ವ ಅತ್ಯಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ, ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್ಒ) ಮನೆ ಮನೆಗೆ ತಲುಪಿಸಿರುವ ಎಸ್ಐಆರ್ (SIR) ಅರ್ಜಿಗಳನ್ನು ಮತದಾರರು ಜುಲೈ 29 ರ ಒಳಗಾಗಿ ಸರಿಯಾಗಿ ಭರ್ತಿ ಮಾಡಿ ಹಿಂತಿರುಗಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್. ವಿ. ಅವರು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ. ಅರ್ಹ ಮತದಾರರ ಹಕ್ಕನ್ನು ರಕ್ಷಿಸುವ ಈ ಪ್ರಕ್ರಿಯೆಯಲ್ಲಿ ನಾಗರಿಕರು ಆಡಳಿತದೊಂದಿಗೆ ಕೈಜೋಡಿಸುವುದು ಅನಿವಾರ್ಯವಾಗಿದೆ.
ಜಿಲ್ಲೆಯಲ್ಲಿ ಸದ್ಯಕ್ಕೆ ಕೇವಲ ಶೇ. 11.86 ರಷ್ಟು ಪ್ರಗತಿಯಷ್ಟೇ ದಾಖಲಾಗಿದ್ದು, ಸಾರ್ವಜನಿಕರು ಭರ್ತಿ ಮಾಡಿ ನೀಡುವ ಈ ಫಾರಂಗಳನ್ನು ಆನ್ಲೈನ್ನಲ್ಲಿ ಡಿಜಿಟಲೀಕರಣಗೊಳಿಸಿದಾಗ ಮಾತ್ರ ಅದು ಅಧಿಕೃತ ಮತದಾರರ ಪಟ್ಟಿಗೆ ಸೇರ್ಪಡೆಯಾಗುತ್ತದೆ. ಬಿಎಲ್ಒಗಳು ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿಯೇ ಫಾರಂಗಳನ್ನು ಸಲ್ಲಿಸಲು ಮುಂದಾಗಬೇಕು. ಕೊನೆಯ ಕ್ಷಣದವರೆಗೆ ವಿಳಂಬ ಮಾಡಿದರೆ, ಸಾವಿರಾರು ಅರ್ಜಿಗಳನ್ನು ಅಲ್ಪಾವಧಿಯಲ್ಲಿ ಡಿಜಿಟಲೀಕರಣಗೊಳಿಸುವುದು ಕಷ್ಟಸಾಧ್ಯವಾಗುತ್ತದೆ. ಆದ್ದರಿಂದ, ಈ ವಾರದೊಳಗೇ ಫಾರಂಗಳನ್ನು ಸಲ್ಲಿಸುವ ಮೂಲಕ ಸಹಕರಿಸಬೇಕು ಹಾಗೂ ಯಾವುದೇ ರೀತಿಯ ಗೊಂದಲಗಳಿದ್ದಲ್ಲಿ ಮತದಾರರ ಸೆಂಟರ್ ಕೇಂದ್ರಕ್ಕೆ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆಯಬಹುದು ಎಂದು ಜಿಲ್ಲಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು










