ಬಂಟ್ವಾಳ : ಫರಂಗಿಪೇಟೆಯಲ್ಲಿರುವ ಕೆನರಾ ಬ್ಯಾಂಕ್ನಲ್ಲಿ ನಡೆದಿದ್ದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿದ್ದು, ಪ್ರಮುಖ ಶಂಕಿತ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಯನ್ನು ಪುದು ಗ್ರಾಮದ ಮಾರಿಪಳ್ಳ ಸುಜೀರು ಬದಿಗುಡ್ಡೆ ನಿವಾಸಿ ಮುಹಮ್ಮದ್ ಶಾಖಿರ್ ಎಂದು ಗುರುತಿಸಲಾಗಿದೆ. ಬ್ಯಾಂಕ್ನಲ್ಲಿ ನಡೆದ ಕಳವು ಕೃತ್ಯದಲ್ಲಿ ಈತನ ಭಾಗಿಯಾಗುವಿಕೆ ಕುರಿತು ಬಲವಾದ ಶಂಕೆ ವ್ಯಕ್ತವಾಗಿದ್ದು, ಪ್ರಸ್ತುತ ಈತನನ್ನು ವಶಕ್ಕೆ ಪಡೆದಿರುವ ಪೊಲೀಸರು ಕಾನೂನು ಚೌಕಟ್ಟಿನಲ್ಲಿ ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.
ಪ್ರಕರಣದಲ್ಲಿ ಇನ್ಯಾರಾದರೂ ಸಹಚರರು ಭಾಗಿಯಾಗಿದ್ದಾರೆಯೇ, ಕಳುವಾದ ನಗದು ಹಾಗೂ ವಸ್ತುಗಳು ಎಲ್ಲಿವೆ ಮತ್ತು ಕೃತ್ಯಕ್ಕೆ ಬಳಸಲಾದ ವಾಹನ ಹಾಗೂ ಇತರ ಸಾಮಗ್ರಿಗಳ ಕುರಿತು ಪೊಲೀಸರು ಸಮಗ್ರ ತನಿಖೆ ಮುಂದುವರಿಸಿದ್ದಾರೆ. ತನಿಖೆ ಪ್ರಗತಿಯಲ್ಲಿರುವುದರಿಂದ ಶೀಘ್ರದಲ್ಲೇ ಹೆಚ್ಚಿನ ಅಧಿಕೃತ ವಿವರಗಳನ್ನು ಪ್ರಕಟಿಸುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು










