ಮಂಗಳೂರು : ಭಾರತೀಯ ಹವಾಮಾನ ಇಲಾಖೆ (IMD) ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ಜಿಲ್ಲೆಯಲ್ಲಿ ತೀವ್ರ ಮಳೆಯಾಗುವ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುನ್ನೆಚ್ಚರಿಕಾ ಕ್ರಮವಾಗಿ ಜುಲೈ 24, 2026 ಶುಕ್ರವಾರದಂದು ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ,
ಈ ರಜೆಯು ಜಿಲ್ಲೆಯ ಎಲ್ಲಾ ಅಂಗನವಾಡಿಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳು (12 ನೇ ತರಗತಿವರೆಗೆ) ಮತ್ತು ಐಟಿಐ ಹಾಗೂ ಡಿಪ್ಲೊಮಾ ಕಾಲೇಜುಗಳಿಗೆ (ಎಲ್ಲಾ ವಸತಿ ಶಿಕ್ಷಣ ಸಂಸ್ಥೆಗಳು ಸೇರಿದಂತೆ) ಅನ್ವಯವಾಗಲಿದೆ. ಈ ಆದೇಶವನ್ನು ಮೀರಿ ಸಂಸ್ಥೆಗಳನ್ನು ನಡೆಸಿದರೆ ವಿಪತ್ತು ನಿರ್ವಹಣಾ ಕಾಯ್ದೆ 2005 ರ ಅಡಿಯಲ್ಲಿ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಆಡಳಿತ ಎಚ್ಚರಿಸಿದೆ.
ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳು ಹಳ್ಳ-ಕೊಳ್ಳ, ನದಿ, ಕೆರೆ ಹಾಗೂ ಸಮುದ್ರ ತೀರಕ್ಕೆ ತೆರಳದಂತೆ ಪೋಷಕರು ಜಾಗ್ರತೆ ವಹಿಸಬೇಕು ಎಂದು ಮನವಿ ಮಾಡಲಾಗಿದೆ. ಅಲ್ಲದೆ ಪ್ರವಾಸಿಗರು ಮತ್ತು ಸಾರ್ವಜನಿಕರು ಅಪಾಯಕಾರಿ ಜಲಮೂಲಗಳಿಗೆ ತೆರಳಬಾರದು ಹಾಗೂ ಮೀನುಗಾರರು ಕಡಲಿಗೆ ಇಳಿಯಬಾರದು ಎಂದು ಖಡಕ್ ಸೂಚನೆ ನೀಡಲಾಗಿದೆ. ಪ್ರಕೃತಿ ವಿಕೋಪ ಸಂಬಂಧಿತ ಯಾವುದೇ ತುರ್ತು ನೆರವಿಗಾಗಿ ಸಾರ್ವಜನಿಕರು ಉಚಿತ ಸಹಾಯವಾಣಿ 1077 ಅಥವಾ 0824-2442590 ಸಂಪರ್ಕಿಸಲು ಕೋರಲಾಗಿದೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಸುದ್ದಿಗಳು, ಪ್ರಾದೇಶಿಕ ಸುದ್ದಿಗಳು










