ಮಂಗಳೂರು: ನೀಟ್ (NEET) ಪರೀಕ್ಷೆಯ ಗೊಂದಲಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹಾಗೂ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಪಾರದರ್ಶಕ ಸುಧಾರಣೆಗಳನ್ನು ತರಲು ಮುಂದಾಗಿರುವಾಗ, ಕಾಂಗ್ರೆಸ್ ಪಕ್ಷ ವಿದ್ಯಾರ್ಥಿಗಳನ್ನು ಬಳಸಿಕೊಂಡು ರಾಜಕೀಯ ಲಾಭ ಗಿಟ್ಟಿಸಿಕೊಳ್ಳಲು ಯತ್ನಿಸುತ್ತಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಯುವ ಜನತಾದಳ (ಜಾತ್ಯತೀತ) ಅಧ್ಯಕ್ಷ ಅಕ್ಷಿತ್ ಸುವರ್ಣ ತೀವ್ರವಾಗಿ ಆಕ್ಷೇಪಿಸಿದ್ದಾರೆ.
ಪರೀಕ್ಷಾ ವ್ಯವಸ್ಥೆಯನ್ನು ಬಲಪಡಿಸಲು ಮತ್ತು ವಿದ್ಯಾರ್ಥಿಗಳ ಆತಂಕ ನಿವಾರಿಸಲು ಸಂಬಂಧಪಟ್ಟ ಅಧಿಕಾರಿಗಳು ಈಗಾಗಲೇ ಅಗತ್ಯ ಕ್ರಮಗಳನ್ನು ಕೈಗೆತ್ತಿಕೊಂಡಿದ್ದಾರೆ. ಇಂತಹ ಸಮಯದಲ್ಲಿ ಕಾಂಗ್ರೆಸ್ಗೆ ನಿಜವಾಗಿಯೂ ವಿದ್ಯಾರ್ಥಿಗಳ ಹಿತದೃಷ್ಟಿಯ ಮೇಲೆ ಕಾಳಜಿಯಿದ್ದರೆ, ರಚನಾತ್ಮಕ ಸಲಹೆಗಳನ್ನು ನೀಡಬೇಕಿತ್ತೇ ಹೊರತು, ವಿದ್ಯಾರ್ಥಿಗಳನ್ನು ಬೀದಿಗಿಳಿಸಿ ರಾಜಕೀಯ ಮಾಡುವುದು ಸರಿಯಲ್ಲ ಎಂದು ಅವರು ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರತಿಯೊಂದು ರಾಜಕೀಯ ಪಕ್ಷವೂ ಯುವಜನತೆಯ ಭವಿಷ್ಯ, ಶಿಕ್ಷಣದ ಗುಣಮಟ್ಟ ಮತ್ತು ಸುಧಾರಿತ ಪರೀಕ್ಷಾ ಪದ್ಧತಿಯ ಬಗ್ಗೆ ಜವಾಬ್ದಾರಿಯಿಂದ ನಡೆದುಕೊಳ್ಳಬೇಕಿದೆ. ವಿದ್ಯಾರ್ಥಿಗಳನ್ನು ತಮ್ಮ ರಾಜಕೀಯದ ದಾಳವಾಗಿ ಬಳಸಿಕೊಳ್ಳುವುದನ್ನು ಬಿಟ್ಟು, ಅವರ ಶೈಕ್ಷಣಿಕ ಅಭಿವೃದ್ಧಿ ಮತ್ತು ಉಜ್ವಲ ಭವಿಷ್ಯಕ್ಕೆ ಆದ್ಯತೆ ನೀಡುವಂತೆ ಅಕ್ಷಿತ್ ಸುವರ್ಣ ಆಗ್ರಹಿಸಿದ್ದಾರೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು










