ಉಡುಪಿ: ಐದು ದಿನಗಳ ಹಿಂದೆ ದಿಢೀರ್ ನಾಪತ್ತೆಯಾಗಿ ಆತಂಕ ಮೂಡಿಸಿದ್ದ ಎಂಟನೇ ತರಗತಿಯ ವಿದ್ಯಾರ್ಥಿಯೊಬ್ಬನನ್ನು ಉಡುಪಿಯ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಪತ್ತೆಹಚ್ಚುವಲ್ಲಿ ಉಡುಪಿ ಜಿಲ್ಲಾ ‘ಅಕ್ಕ ಸ್ಕ್ವಾಡ್’ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.
ಪೋಲಿಸ್ ನಿಯಂತ್ರಣ ಕೊಠಡಿಯಿಂದ ಬಾಲಕನ ನಾಪತ್ತೆ ಕುರಿತು ಮಾಹಿತಿ ಲಭಿಸುತ್ತಿದ್ದಂತೆಯೇ ತಕ್ಷಣವೇ ರಂಗಕ್ಕಿಳಿದ ಅಕ್ಕ ಸ್ಕ್ವಾಡ್ ತಂಡವು ವ್ಯಾಪಕ ಶೋಧ ಕಾರ್ಯ ಕೈಗೊಂಡಿತ್ತು. ಈ ವೇಳೆ ಕೆಎಸ್ಆರ್ಟಿಸಿ ನಿಲ್ದಾಣದಿಂದ ಮುದ್ದೇಬಿಹಾಳಕ್ಕೆ ಹೊರಡಲು ಸಿದ್ಧವಾಗಿದ್ದ ಬಸ್ನಲ್ಲಿ ಬಾಲಕ ಕುಳಿತಿರುವುದನ್ನು ಗಮನಿಸಿದ ಸಿಬ್ಬಂದಿ, ಕೂಡಲೇ ಆತನನ್ನು ವಶಕ್ಕೆ ಪಡೆದಿದ್ದಾರೆ. ಬಳಿಕ ಬಾಲಕನನ್ನು ಮುಂದಿನ ಕಾನೂನಾತ್ಮಕ ಪ್ರಕ್ರಿಯೆಗಳಿಗಾಗಿ ಮಹಿಳಾ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು










