ನವದೆಹಲಿ: ನೀಟ್ (NEET) ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಹಾಗೂ ವಿದ್ಯಾರ್ಥಿಗಳ ಸರಣಿ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ ಬೆನ್ನಲ್ಲೇ, ಕೇಂದ್ರ ಶಿಕ್ಷಣ ಖಾತೆಯ ಹೆಚ್ಚುವರಿ ಜವಾಬ್ದಾರಿಯನ್ನು ಕರ್ನಾಟಕದ ಹಿರಿಯ ನಾಯಕ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರಿಗೆ ವಹಿಸಲಾಗಿದೆ.
ಪ್ರಸ್ತುತ ಆಹಾರ, ನಾಗರಿಕ ಸರಬರಾಜು ಮತ್ತು ನವೀಕರಿಸಬಹುದಾದ ಇಂಧನ ಸಚಿವರಾಗಿ ಸೇವೆ ಸಲ್ಲಿಸುತ್ತಿರುವ ಜೋಶಿ ಅವರಿಗೆ ಶಿಕ್ಷಣ ಇಲಾಖೆಯ ಜವಾಬ್ದಾರಿಯನ್ನೂ ಹೆಚ್ಚುವರಿಯಾಗಿ ನೀಡುವಂತೆ ಪ್ರಧಾನಿಯವರು ಶಿಫಾರಸು ಮಾಡಿದ್ದರು. ಈ ಶಿಫಾರಸನ್ನು ಪುರಸ್ಕರಿಸಿರುವ ರಾಷ್ಟ್ರಪತಿಗಳು, ಪ್ರಲ್ಹಾದ್ ಜೋಶಿ ಅವರಿಗೆ ಶಿಕ್ಷಣ ಖಾತೆಯನ್ನು ಹಂಚಿಕೆ ಮಾಡಿ ಅಧಿಕೃತ ಆದೇಶ ಹೊರಡಿಸಿದ್ದಾರೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ರಾಷ್ಟ್ರೀಯ ಸುದ್ದಿಗಳು, ಹೊಸ ಸುದ್ದಿಗಳು










