ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ರಾಹುಲ್ ರತ್ನಂ ಪಾಂಡೆ ಅವರು ಸೋಮವಾರದಂದು ಅಧಿಕೃತವಾಗಿ ತಮ್ಮ ಹೊಣೆಗಾರಿಕೆಯನ್ನು ವಹಿಸಿಕೊಂಡಿದ್ದಾರೆ.
2018ರ ಬ್ಯಾಚ್ನ ಐಎಎಸ್ ಅಧಿಕಾರಿಯಾಗಿರುವ ಇವರು, ಈ ಹಿಂದೆ ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ ನಿಯಮಿತದ (KSMSCL) ವ್ಯವಸ್ಥಾಪಕ ನಿರ್ದೇಶಕರಾಗಿ ದಕ್ಷತೆಯಿಂದ ಕರ್ತವ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. ಪ್ರಸ್ತುತ ಮಂಗಳೂರು ಮಹಾನಗರ ಪಾಲಿಕೆಯ ಅಭಿವೃದ್ಧಿ ಕಾರ್ಯಾಚರಣೆಗಳ ಚುಕ್ಕಾಣಿ ಹಿಡಿದಿರುವ ಇವರಿಗೆ ಪಾಲಿಕೆ ಸಿಬ್ಬಂದಿ ಹಾಗೂ ಸಾರ್ವಜನಿಕ ವಲಯದಿಂದ ಶುಭಾಶಯಗಳು ವ್ಯಕ್ತವಾಗಿವೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಸುದ್ದಿಗಳು










