ಮಂಗಳೂರು : ಕರಾವಳಿ ಕರ್ನಾಟಕ ಭಾಗದಲ್ಲಿ ವಾಡಿಕೆಯಂತೆ ಪುಷ್ಯ ನಕ್ಷತ್ರದ ಮಳೆಯು ತೀವ್ರ ಸ್ವರೂಪ ಪಡೆಯಲಿದ್ದು, ಮುಂದಿನ ಕೆಲ ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಜುಲೈ 29ರಂದು ಉಡುಪಿ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಗುಡುಗು, ಸಿಡಿಲು ಸಹಿತ ಶಕ್ತಿಶಾಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಮಳೆಯ ತೀವ್ರತೆ ಹೆಚ್ಚಿರುವ ಹಿನ್ನೆಲೆಯಲ್ಲಿ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಾದ್ಯಂತ ‘ಆರೆಂಜ್ ಅಲರ್ಟ್’ ಜಾರಿಗೊಳಿಸಲಾಗಿದೆ. ಕರಾವಳಿ ಜಿಲ್ಲೆಗಳ ಸಾರ್ವಜನಿಕರು ಹಾಗೂ ಮೀನುಗಾರರು ಅಗತ್ಯ ಜಾಗ್ರತೆ ವಹಿಸುವಂತೆ ಸೂಚಿಸಲಾಗಿದೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು










