
ಬಂಟ್ವಾಳ : ಇತಿಹಾಸ ಪ್ರಸಿದ್ಧ ಪೊಳಲಿಯ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಮಹಾರಾಷ್ಟ್ರ ಬಿಜೆಪಿ ರಾಜ್ಯಾಧ್ಯಕ್ಷರಾದ ರವೀಂದ್ರ ಚೌಹಾಣ್ ಅವರು ಗುರುವಾರದಂದು ಭೇಟಿ ನೀಡಿ, ರಾಜರಾಜೇಶ್ವರಿ ದೇವಿಯ ಪೂಜಾ ಕೈಂಕರ್ಯಗಳಲ್ಲಿ ಪಾಲ್ಗೊಂಡು ದರ್ಶನ ಪಡೆದರು. ದೇವಸ್ಥಾನದ ಪ್ರಧಾನ ಅರ್ಚಕರಾದ ಪದ್ಮನಾಭ ಭಟ್ ಅವರು ರಾಜರಾಜೇಶ್ವರಿ ದೇವಿಯ ಪ್ರಸಾದ ನೀಡಿ ಶುಭಾಶೀರ್ವಾದ ಮಾಡಿದರು. ಈ ಸಂದರ್ಭದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ರವೀಂದ್ರ ಚೌಹಾಣ್ ಅವರಿಗೆ ಸಾಂಪ್ರದಾಯಿಕವಾಗಿ ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಿದರು.
ಈ ಧಾರ್ಮಿಕ ಕಾರ್ಯಕ್ರಮದ ವೇಳೆ ವೆಂಕಟೇಶ್ ನಾವಡ, ಯಶವಂತ ಪೊಳಲಿ, ಸುಪ್ರೀತ್ ಆಳ್ವ, ಪುರುಷೋತ್ತಮ್ ಶೆಟ್ಟಿ ವಾಮದಪದವು, ಸಚಿನ್ ಅಡಪ ಹಾಗೂ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಕೆ.ಪಿ. ಚಂದ್ರಮೋಹನ್ ಸೇರಿದಂತೆ ಹಲವಾರು ಪ್ರಮುಖ ಗಣ್ಯರು ಹಾಗೂ ಮುಖಂಡರು ಉಪಸ್ಥಿತರಿದ್ದರು.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು










