ಕಾರ್ಕಳ : ಪೊಲೀಸ್ ಇಲಾಖೆಯ ಕಚೇರಿಯಲ್ಲಿ ಹಣಕ್ಕೆ ಬೇಡಿಕೆಯಿಟ್ಟರೆನ್ನಲಾದ ಗಂಭೀರ ಆರೋಪದ ಹಿನ್ನೆಲೆಯಲ್ಲಿ, ಪ್ರಾಥಮಿಕ ತನಿಖೆ ನಡೆಸಿ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿವೈಎಸ್ಪಿ) ಹಾಗೂ ಕಾರ್ಕಳ ವೃತ್ತ ನಿರೀಕ್ಷಕ (ಸಿಐ) ಸೇರಿದಂತೆ ಮೂವರು ಸಿಬ್ಬಂದಿಯನ್ನು ಸೇವೆಯಿಂದ ಅಮಾನತುಗೊಳಿಸಿ ಆದೇಶಿಸಲಾಗಿದೆ. ಇತ್ತೀಚೆಗೆ ಈ ಅಕ್ರಮಕ್ಕೆ ಸಂಬಂಧಿಸಿದ ವೀಡಿಯೊ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿ ಸಾರ್ವಜನಿಕ ವಲಯದಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿದ್ದವು.
ಈ ಕುರಿತು ಮಾಹಿತಿ ನೀಡಿದ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರು, ಜಾಲತಾಣಗಳಲ್ಲಿ ಹರಿದಾಡುತ್ತಿರುವ ವೀಡಿಯೊ ಮತ್ತು ಬಂದಿರುವ ದೂರುಗಳ ಆಧಾರದ ಮೇಲೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳ ನೇತೃತ್ವದಲ್ಲಿ ಪ್ರಾಥಮಿಕ ತನಿಖೆ ನಡೆಸಲಾಗಿತ್ತು ಎಂದು ಸ್ಪಷ್ಟಪಡಿಸಿದ್ದಾರೆ. ಆ ವರದಿಯ ಆಧಾರದ ಮೇಲೆ ಕಾರ್ಕಳ ಡಿವೈಎಸ್ಪಿ ವಿಜಯ್ ಪ್ರಸಾದ್, ವೃತ್ತ ನಿರೀಕ್ಷಕ ಸಂದೀಪ್ ಹಾಗೂ ಡಿವೈಎಸ್ಪಿ ಕಚೇರಿಯ ಸಿಬ್ಬಂದಿ ಶಿವಾನಂದ ಎಂಬವರನ್ನು ಇಲಾಖಾ ವಿಚಾರಣೆ ಪೂರ್ಣಗೊಳ್ಳುವವರೆಗೆ ಅಮಾನತಿನಲ್ಲಿಡಲಾಗಿದ್ದು, ಸಮಗ್ರ ಇಲಾಖಾ ತನಿಖೆ ಮುಂದುವರಿದಿದೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು










