ಉಡುಪಿ : ಹೃದಯಭಾಗದಲ್ಲಿರುವ ಕೋರ್ಟ್ ರಸ್ತೆಯಲ್ಲಿ ಶನಿವಾರ ಮಧ್ಯಾಹ್ನ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದ್ದು, ರಸ್ತೆ ದಾಟುತ್ತಿದ್ದ ಹಿರಿಯ ಮಹಿಳೆಯೊಬ್ಬರು ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ ಪ್ರಾಣಕಳೆದುಕೊಂಡಿದ್ದಾರೆ. ಮೃತಪಟ್ಟವರನ್ನು ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ ಹಾಗೂ ಹಿಂದೂ ಯುವ ಸೇನೆಯ ನಾಯಕ ಮಂಜು ಕೊಳ ಅವರ ಪತ್ನಿ ಲಕ್ಷ್ಮಿ ಮಂಜು ಕೊಳ ಎಂದು ಗುರುತಿಸಲಾಗಿದೆ.
ಶನಿವಾರ ಮಧ್ಯಾಹ್ನ ವೇಳೆಗೆ ಲಕ್ಷ್ಮಿ ಅವರು ಕೋರ್ಟ್ ರಸ್ತೆಯಲ್ಲಿ ಕಾಲ್ನಡಿಗೆಯಲ್ಲಿ ರಸ್ತೆ ದಾಟಲು ಪ್ರಯತ್ನಿಸುತ್ತಿದ್ದಾಗ ವೇಗವಾಗಿ ಬಂದ ಬಸ್ ಒಂದಕ್ಕೆ ಸಿಲುಕಿದ್ದಾರೆ. ಘಟನೆಯ ತೀವ್ರತೆಗೆ ತೀವ್ರವಾಗಿ ಗಾಯಗೊಂಡ ಅವರು ಅಸುನೀಡಿದ್ದು, ಅಪಘಾತದ ಸುದ್ದಿ ತಿಳಿದ ತಕ್ಷಣವೇ ಉಡುಪಿ ಸಂಚಾರ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಟಾಪ್ ಸುದ್ದಿ, ಪ್ರಾದೇಶಿಕ ಸುದ್ದಿಗಳು, ಸುದ್ದಿಗಳು









