ಮಂಗಳೂರು : ಕರ್ನಾಟಕ ಜಾನಪದ ಪರಿಷತ್ತಿನ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷರಾದ ಪ್ರವೀಣ್ ಕುಮಾರ್ ಕೋಡಿಯಾಲ್ ಬೈಲ್ ಅವರು ಸಾಮಾಜಿಕ ಕ್ಷೇತ್ರದಲ್ಲಿ ಸಲ್ಲಿಸಿದ ಅನನ್ಯ ಸೇವೆ ಹಾಗೂ ಸಮಾಜಮುಖಿ ಚಟುವಟಿಕೆಗಳನ್ನು ಮೆಚ್ಚಿ ಪ್ರತಿಷ್ಠಿತ ‘ರಾಷ್ಟ್ರೀಯ ಗೌರವ ಐಕಾನ್ ಅವಾರ್ಡ್ ಫಾರ್ ಸೋಶಿಯಲ್’ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ. ಗ್ಲೋಬಲ್ ಅಚೀವರ್ಸ್ ಕೌನ್ಸಿಲ್ ನೀಡುವ ಈ ಪ್ರಶಸ್ತಿಯನ್ನು 2026ರ ಆಗಸ್ಟ್ 23ರಂದು ಮಧ್ಯಾಹ್ನ 2 ಗಂಟೆಗೆ ನವದೆಹಲಿಯ ಹೋಟೆಲ್ ಸಮ್ರಾಟ್ನಲ್ಲಿ ಆಯೋಜಿಸಲಾಗಿರುವ ವರ್ಣರಂಜಿತ ಸಮಾರಂಭದಲ್ಲಿ ಪ್ರದಾನ ಮಾಡಲಾಗುವುದು.
ಸಮಾಜ ಸೇವಾ ಕ್ಷೇತ್ರದಲ್ಲಿ ಅವರ ಅಪಾರ ಸಮರ್ಪಣಾ ಭಾವ, ಸತತ ಪರಿಶ್ರಮ ಹಾಗೂ ಜನಪರ ಕೊಡುಗೆಗಳನ್ನು ಪರಿಗಣಿಸಿ ಈ ಗೌರವಕ್ಕೆ ಆಯ್ಕೆ ಮಾಡಲಾಗಿದೆ ಎಂದು ಪ್ರಶಸ್ತಿ ಆಯ್ಕೆ ಸಮಿತಿ ತಿಳಿಸಿದೆ. ಪ್ರಶಸ್ತಿ ಪುರಸ್ಕೃತರಾದ ಪ್ರವೀಣ್ ಕುಮಾರ್ ಕೋಡಿಯಾಲ್ ಬೈಲ್ ಅವರಿಗೆ ವಿವಿಧ ರಂಗಗಳ ಗಣ್ಯರು, ಆಪ್ತರು ಹಾಗೂ ಅಭಿಮಾನಿಗಳು ಅಭಿನಂದನೆ ಸಲ್ಲಿಸಿದ್ದು, ಅವರ ಸೇವಾ ಹಾದಿ ಹೀಗೆಯೇ ಯಶಸ್ವಿಯಾಗಿ ಮುಂದುವರಿಯಲಿ ಎಂದು ಶುಭಕೋರಿದ್ದಾರೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಸುದ್ದಿಗಳು









