ಮಂಗಳೂರು : ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಾಗರಪಂಚಮಿ ಹಬ್ಬದ ಶುಭ ಸಂದರ್ಭದಲ್ಲಿ ಸುಬ್ರಹ್ಮಣ್ಯ ದೇವರಿಗೆ ಅತ್ಯಂತ ಶ್ರದ್ಧಾಭಕ್ತಿಗಳಿಂದ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ಯಶಸ್ವಿಯಾಗಿ ನೆರವೇರಿದವು. ಆಗಸ್ಟ್ 17ರ ಸೋಮವಾರದಂದು ಕ್ಷೇತ್ರದಲ್ಲಿ ದೇವರಿಗೆ ವಿಶೇಷ ಪೂಜಾ ವಿಧಿವಿಧಾನಗಳು ಹಾಗೂ ಅಭಿಷೇಕ ಪೂಜೆಗಳು ಅತ್ಯಂತ ವಿಜೃಂಭಣೆಯಿಂದ ನಡೆದವು.
ಧಾರ್ಮಿಕ ಕಾರ್ಯಕ್ರಮಗಳ ಭಾಗವಾಗಿ ಬೆಳಗ್ಗೆ 7 ಗಂಟೆಗೆ ಸುಬ್ರಹ್ಮಣ್ಯ ದೇವರಿಗೆ ವಿಶೇಷ ಅಭಿಷೇಕದೊಂದಿಗೆ ಪೂಜಾ ಕೈಂಕರ್ಯಗಳಿಗೆ ಚಾಲನೆ ನೀಡಲಾಯಿತು. ತದನಂತರ ಮಧ್ಯಾಹ್ನ 12.30 ಗಂಟೆಗೆ ದೇವರಿಗೆ ಮಹಾಪೂಜೆ ಹಾಗೂ ಮಹಾಮಂಗಳಾರತಿ ನೆರವೇರಿತು.
ಈ ಪವಿತ್ರ ಪೂಜಾ ಮಹೋತ್ಸವದಲ್ಲಿ ಅಪಾರ ಸಂಖ್ಯೆಯ ಭಕ್ತಾದಿಗಳು ಆಗಮಿಸಿ, ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿ ಸುಬ್ರಹ್ಮಣ್ಯ ಸ್ವಾಮಿಯ ಕೃಪೆಗೆ ಪಾತ್ರರಾದರು. ಶ್ರೀ ಗೋಕರ್ಣನಾಥ ಕ್ಷೇತ್ರದ ಅಧ್ಯಕ್ಷರಾದ ಜೈರಾಜ್ ಎಚ್. ಸೋಮಸುಂದರಂ, ಆಡಳಿತ ಮಂಡಳಿ ಸದಸ್ಯರು ಹಾಗೂ ಅಭಿವೃದ್ಧಿ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರು ಧಾರ್ಮಿಕ ಕಾರ್ಯಕ್ರಮಗಳ ನೇತೃತ್ವ ವಹಿಸಿದ್ದರು.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಸುದ್ದಿಗಳು









