ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಸಕ್ರಿಯ ಕಾರ್ಯಕಾರಿಣಿ ಸದಸ್ಯ ಹಾಗೂ ಮಂಗಳೂರು ನಗರ ಬ್ಲಾಕ್ ವಕ್ತಾರರಾಗಿದ್ದ ಲಕ್ಷ್ಮಣ್ ಶೆಟ್ಟಿ (52) ಅವರು ಬುಧವಾರ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ದೀರ್ಘಕಾಲದಿಂದ ಪಕ್ಷದ ನಿಷ್ಠಾವಂತ ಸೇವಕರಾಗಿ ಗುರುತಿಸಿಕೊಂಡಿದ್ದ ಅವರ ಅಕಾಲಿಕ ಅಗಲಿಕೆಗೆ ಜಿಲ್ಲಾ ಕಾಂಗ್ರೆಸ್ ಸಮಿತಿ ತೀವ್ರ ಆಘಾತ ಮತ್ತು ಸಂತಾಪ ವ್ಯಕ್ತಪಡಿಸಿದೆ. ಮೃತರು ತಮ್ಮ ಪತ್ನಿ, ಓರ್ವ ಪುತ್ರ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.
ಪಕ್ಷದ ಸಂಘಟನೆ ಮತ್ತು ಬಲವರ್ಧನೆಯಲ್ಲಿ ಸದಾ ಮುಂಚೂಣಿಯಲ್ಲಿದ್ದ ಲಕ್ಷ್ಮಣ್ ಶೆಟ್ಟಿ ಅವರು ಸರಳತೆ, ನಿಷ್ಠೆ ಹಾಗೂ ಜನಪರ ಬದ್ಧತೆಗೆ ಹೆಸರುವಾಸಿಯಾಗಿದ್ದರು. ಸಮಾಜದ ಎಲ್ಲಾ ವರ್ಗದ ಜನರೊಂದಿಗೆ ಆತ್ಮೀಯ ಸಂಬಂಧ ಕಾಯ್ದುಕೊಂಡಿದ್ದ ಅವರ ಅಗಲಿಕೆಯು ಜಿಲ್ಲಾ ಕಾಂಗ್ರೆಸ್ಗೆ ತುಂಬಲಾರದ ನಷ್ಟವನ್ನು ಉಂಟುಮಾಡಿದೆ. ಅಗಲಿದ ನಾಯಕನ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಕುಟುಂಬದವರಿಗೆ ಈ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಕಾಂಗ್ರೆಸ್ ನಾಯಕರು ಪ್ರಾರ್ಥಿಸಿದ್ದಾರೆ.
ಅವರ ನಿಧನಕ್ಕೆ ಮಾಜಿ ಸಿಎಂ ವೀರಪ್ಪ ಮೊಯಿಲಿ, ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ, ಬಿ.ಕೆ. ಹರಿಪ್ರಸಾದ್, ಸಚಿವ ಯು.ಟಿ. ಖಾದರ್, ಕೆ. ಹರೀಶ್ ಕುಮಾರ್, ಬಿ. ರಮಾನಾಥ ರೈ, ಅಭಯಚಂದ್ರ ಜೈನ್, ಐವನ್ ಡಿಸೋಜ, ಜೆ.ಆರ್. ಲೋಬೊ, ಶಕುಂತಲಾ ಶೆಟ್ಟಿ ಸೇರಿದಂತೆ ಹಲವು ಮಾಜಿ ಶಾಸಕರು, ಕೆಪಿಸಿಸಿ ಪದಾಧಿಕಾರಿಗಳು ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಕಂಬನಿ ಮಿಡಿದಿದ್ದಾರೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಟಾಪ್ ಸುದ್ದಿ, ಪ್ರಾದೇಶಿಕ ಸುದ್ದಿಗಳು, ಸುದ್ದಿಗಳು









