ಕುಂದಾಪುರ: ಸುದ್ದಿ ಪ್ರಕಟಣೆಯ ವರದಿಗಾರ ಹಾಗೂ ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಅವರ ಮೇಲೆ ಆಗಸ್ಟ್ 21ರ ಬೆಳಿಗ್ಗೆ ಸ್ಥಳೀಯ ಹೋಟೆಲೊಂದರಲ್ಲಿ ಹಲ್ಲೆ ನಡೆಸಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಕುಂದಾಪುರ ಸರ್ಕಾರಿ ಆಸ್ಪತ್ರೆಯ ಕುರಿತು ವರದಿ ಮಾಡಿದ್ದ ಹಿನ್ನೆಲೆಯಲ್ಲಿ ಈ ಘಟನೆ ಸಂಭವಿಸಿದೆ ಎನ್ನಲಾಗಿದ್ದು, ಆಸ್ಪತ್ರೆಯ ವೈದ್ಯಾಧಿಕಾರಿಯಾಗಿದ್ದ ಡಾ. ಮಹೇಂದ್ರ ಶೆಟ್ಟಿ ಅವರು ಈ ಹಲ್ಲೆ ನಡೆಸಿದ್ದಾರೆ ಎಂದು ದೂರಲಾಗಿದೆ.
ಪತ್ರಕರ್ತನ ಮೇಲಿನ ಈ ಹಲ್ಲೆ ಘಟನೆಯನ್ನು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ತೀವ್ರವಾಗಿ ಖಂಡಿಸಿದೆ. ಪ್ರಕರಣವನ್ನು ಉಡುಪಿ ಜಿಲ್ಲಾ ಪೊಲೀಸರು ಗಂಭೀರವಾಗಿ ಪರಿಗಣಿಸಿ, ಆರೋಪಿ ವೈದ್ಯರ ವಿರುದ್ಧ ತಕ್ಷಣವೇ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದೆ. ಜೊತೆಗೆ ಪತ್ರಕರ್ತರು ಭಯವಿಲ್ಲದೆ ತಮ್ಮ ವೃತ್ತಿಪರ ಕರ್ತವ್ಯ ನಿರ್ವಹಿಸಲು ಸೂಕ್ತ ಭದ್ರತೆ ಹಾಗೂ ಸುರಕ್ಷತೆಯನ್ನು ಒದಗಿಸಬೇಕೆಂದು ಸಂಘವು ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









