ಮಂಗಳೂರು : ಕರ್ನಾಟಕ ಸರ್ಕಾರವು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಈದ್ ಮಿಲಾದ್ ಹಬ್ಬದ ಸಾರ್ವತ್ರಿಕ ರಜೆಯ ದಿನಾಂಕದಲ್ಲಿ ಮಹತ್ವದ ಬದಲಾವಣೆ ಮಾಡಿದೆ. ರಾಜ್ಯಾದ್ಯಂತ ಈ ಹಿಂದೆ ಆಗಸ್ಟ್ 26, 2026 ರಂದು ಸಾರ್ವತ್ರಿಕ ರಜೆ ಎಂದು ನಿಗದಿಪಡಿಸಲಾಗಿತ್ತು. ಆದರೆ ಸ್ಥಳೀಯ ಸಂದರ್ಭಗಳು ಹಾಗೂ ಸಾರ್ವಜನಿಕ ಮನವಿಗಳನ್ನು ಪರಿಗಣಿಸಿ, ಉಭಯ ಜಿಲ್ಲೆಗಳಲ್ಲಿ ಆಗಸ್ಟ್ 25 ರಂದೇ ಸಾರ್ವಜನಿಕ ರಜೆ ನೀಡಲು ಸರ್ಕಾರ ಅಧಿಕೃತ ನಿರ್ದೇಶನ ನೀಡಿದೆ.
ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅವರ ಸಮ್ಮತಿ ಹಾಗೂ ಎರಡೂ ಜಿಲ್ಲೆಗಳ ಜಿಲ್ಲಾಧಿಕಾರಿಗಳ ವಿಶೇಷ ಮನವಿಯ ಮೇರೆಗೆ ರಾಜ್ಯ ಸರ್ಕಾರ ಈ ತೀರ್ಮಾನ ಕೈಗೊಂಡಿದೆ. ಸರ್ಕಾರದ ಹೆಚ್ಚುವರಿ ಕಾರ್ಯದರ್ಶಿಗಳು ಈ ಕುರಿತು ಸೂಕ್ತ ಕ್ರಮ ವಹಿಸುವಂತೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಧಿಕಾರಿಗಳಿಗೆ ಸೂಕ್ತ ಸೂಚನೆ ನೀಡಿದ್ದಾರೆ. ನಿಯಮಾವಳಿಗಳಿಗೆ ಅನುಗುಣವಾಗಿ ಆಗಸ್ಟ್ 26 ರ ಬದಲಿಗೆ ಆಗಸ್ಟ್ 25 ರಂದು ರಜೆ ಘೋಷಿಸಲು ಜಿಲ್ಲಾಧಿಕಾರಿಗಳಿಗೆ ಸಂಪೂರ್ಣ ಅಧಿಕಾರ ನೀಡಲಾಗಿದ್ದು, ಕರಾವಳಿ ಜಿಲ್ಲೆಗಳ ಸರ್ಕಾರಿ ಕಚೇರಿಗಳು ಮತ್ತು ಶೈಕ್ಷಣಿಕ ಸಂಸ್ಥೆಗಳಿಗೆ ಆಗಸ್ಟ್ 25 ರಂದೇ ಈದ್ ಮಿಲಾದ್ ರಜೆ ಅನ್ವಯವಾಗಲಿದೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









