ಮಂಗಳೂರು : ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯ (RGUHS) ಕಾಯ್ದೆ 1994ರ ಕಲಂ 21(1)(Viii) ರ ಪ್ರಕಾರ, ವಿಧಾನ ಪರಿಷತ್ ಸದಸ್ಯರಾದ ಶ್ರೀ ಐವನ್ ಡಿ’ಸೋಜಾ ಅವರನ್ನು ವಿಶ್ವವಿದ್ಯಾನಿಲಯದ ಸೆನೆಟ್ ಸದಸ್ಯರನ್ನಾಗಿ ಮಾನ್ಯ ವಿಧಾನ ಪರಿಷತ್ತಿನ ಸಭಾಪತಿಯವರು 2026ರ ಆಗಸ್ಟ್ 25ರಂದು ನಾಮನಿರ್ದೇಶನ ಮಾಡಿದ್ದಾರೆ. ಈ ಹುದ್ದೆಯಲ್ಲಿ ಅವರು 2030ರ ಜೂನ್ 17ರವರೆಗೆ ಮುಂದುವರಿಯಲಿದ್ದಾರೆ.
ಶಿಕ್ಷಣ ಕ್ಷೇತ್ರದಲ್ಲಿ ಸುದೀರ್ಘ ಅನುಭವ ಹೊಂದಿರುವ ಐವನ್ ಡಿ’ಸೋಜಾ ಅವರು ಈ ಹಿಂದೆ ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಹಾಗೂ ಸೆನೆಟ್ ಸದಸ್ಯರಾಗಿ, ಅಕಾಡೆಮಿಕ್ ಕೌನ್ಸಿಲ್ ಪ್ರಮುಖರಾಗಿ ಮತ್ತು ನಾನಾ ಸಮಿತಿಗಳ ಸಂಚಾಲಕರಾಗಿ ಮಹತ್ವದ ಜವಾಬ್ದಾರಿಗಳನ್ನು ನಿರ್ವಹಿಸಿದ್ದಾರೆ. ಮಂಗಳೂರು ವಿವಿಯಲ್ಲಿ ಹಲವು ನೂತನ ಶೈಕ್ಷಣಿಕ ಕೋರ್ಸ್ಗಳನ್ನು ಪರಿಚಯಿಸುವಲ್ಲಿ ಅವರ ಪಾತ್ರ ಪ್ರಮುಖವಾಗಿತ್ತು.
ಆಡಳಿತ ಮತ್ತು ಸಾರ್ವಜನಿಕ ಸೇವೆಯಲ್ಲೂ ವ್ಯಾಪಕ ಅನುಭವ ಹೊಂದಿರುವ ಇವರು, ಕರ್ನಾಟಕ ಸರ್ಕಾರದ ಮುಖ್ಯ ಸಚೇತಕರಾಗಿ ಹಾಗೂ ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿಯಾಗಿಯೂ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದಾರೆ. ವೈದ್ಯಕೀಯ ಶಿಕ್ಷಣ ಹಾಗೂ ವಿಶ್ವವಿದ್ಯಾನಿಲಯದ ಶೈಕ್ಷಣಿಕ ಪ್ರಗತಿಗೆ ಇವರ ಸುದೀರ್ಘ ಸಾರ್ವಜನಿಕ ಮತ್ತು ಶೈಕ್ಷಣಿಕ ಅನುಭವವು ಸೆನೆಟ್ ಸದಸ್ಯರಾಗಿ ಮತ್ತಷ್ಟು ಕೊಡುಗೆ ನೀಡಲಿದೆ ಎಂದು ನಿರೀಕ್ಷಿಸಲಾಗಿದೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









