ಬೆಳ್ತಂಗಡಿ : ಕುವೆಟ್ಟು ಮತ್ತು ಮಡಂತ್ಯಾರು ಗ್ರಾಮ ಪಂಚಾಯತ್ಗಳಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಸಾರ್ವಜನಿಕರು ಲೋಕಾಯುಕ್ತ ಕೇಂದ್ರ ಕಚೇರಿಗೆ ದೂರು ನೀಡಿದ್ದರು. ಈ ದೂರುಗಳ ಗಂಭೀರತೆಯನ್ನು ಪರಿಗಣಿಸಿ ಲೋಕಾಯುಕ್ತ ಅಧಿಕಾರಿಗಳ ತಂಡ ಮಂಗಳವಾರ ಬೆಳಿಗ್ಗೆ 10 ಗಂಟೆಯ ಸುಮಾರಿಗೆ ಎರಡೂ ಪಂಚಾಯತ್ ಕಚೇರಿಗಳಿಗೆ ಏಕಾಏಕಿ ದಾಳಿ ನಡೆಸಿದೆ.
ಉಡುಪಿ ಜಿಲ್ಲಾ ಲೋಕಾಯುಕ್ತ ಇನ್ಸ್ಪೆಕ್ಟರ್ ಮಂಜುನಾಥ್ ಶಂಕರಹಳ್ಳಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಎಂಟು ಮಂದಿ ಅಧಿಕಾರಿಗಳ ತಂಡ ಭಾಗವಹಿಸಿತ್ತು. ತಂಡದಲ್ಲಿ ಅಧಿಕಾರಿಗಳಾದ ರಾಘವೇಂದ್ರ ಸಾಲಿಗ್ರಾಮ, ಆದರ್ಶ್, ಅರುಣ್ ಕುಮಾರ್, ಸೂರಜ್ ಕಾಪು ಸೇರಿದಂತೆ ಇತರ ಸಿಬ್ಬಂದಿಗಳಿದ್ದರು. ಕಚೇರಿಗೆ ಆಗಮಿಸಿದ ಅಧಿಕಾರಿಗಳು ಪಂಚಾಯತ್ ಸಿಬ್ಬಂದಿ ಹಾಗೂ ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಿ, ಪ್ರಮುಖ ಮಾಹಿತಿಗಳನ್ನು ಪಡೆದುಕೊಂಡಿದ್ದಾರೆ.
ಪಂಚಾಯತ್ಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳು ಮತ್ತು ಆಡಳಿತಾತ್ಮಕ ವ್ಯವಹಾರಗಳಿಗೆ ಸಂಬಂಧಿಸಿದ ಪ್ರಮುಖ ಕಡತಗಳು ಹಾಗೂ ದಾಖಲೆ ಪತ್ರಗಳನ್ನು ಲೋಕಾಯುಕ್ತ ತಂಡ ಕೂಲಂಕಷವಾಗಿ ತಪಾಸಣೆ ನಡೆಸುತ್ತಿದೆ. ತನಿಖೆ ಮತ್ತು ದಾಖಲೆಗಳ ಪರಿಶೀಲನೆ ಪ್ರಕ್ರಿಯೆಯು ಪೂರ್ಣ ಪ್ರಮಾಣದಲ್ಲಿ ಮುಂದುವರಿದಿದ್ದು, ಕಾರ್ಯಾಚರಣೆ ಮುಕ್ತಾಯಗೊಳ್ಳಲು ಇನ್ನಷ್ಟು ಸಮಯ ಹಿಡಿಯಲಿದೆ ಎಂದು ಮೂಲಗಳು ತಿಳಿಸಿವೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









